ಬೆಂಗಳೂರಿನ ದೀಪಕ್ ಕೇಬಲ್ಸ್ ಲಿಮಿಟೆಡ್ ಮೇಲೆ ಇಡಿ ದಾಳಿ: ನಗದು, ಚಿನ್ನಾಭರಣ ಸೇರಿದಂತೆ 18 ಕೋಟಿ ರೂ ಫ್ರೀಜ್

ಬೆಂಗಳೂರಿನ ದೀಪಕ್ ಕೇಬಲ್ ಇಂಡಿಯಾ ಲಿಮಿಡೆಟ್ ಮೇಲೆ ಇಡಿ ದಾಳಿ ಕೇಸ್​ಗೆ ಸಂಬಂಧಿಸಿದಂತೆ 1.27 ಕೋಟಿ ನಗದು ಮತ್ತು ಆಭರಣಗಳನ್ನು ಜಪ್ತಿ ಮಾಡಿದ್ದಾರೆ. ಅಷ್ಟೇ ಅಲ್ಲದೆ ವಿವಿಧ ಬ್ಯಾಂಕ್ ಖಾತೆಗಳಲ್ಲಿರುವ 18 ಕೋಟಿ ರೂ ಹಣವನ್ನು ಫ್ರೀಜ್ ಮಾಡಿದ್ದಾರೆ. ಎಸ್‍ಬಿಐ ಸೇರಿದಂತೆ ಬ್ಯಾಂಕ್‌ಗಳಿಗೆ 899 ಕೋಟಿ ರೂ ವಂಚಿಸಿದ ಆರೋಪ ಕೇಳಿಬಂದಿದೆ.

ಬೆಂಗಳೂರಿನ ದೀಪಕ್ ಕೇಬಲ್ಸ್ ಲಿಮಿಟೆಡ್ ಮೇಲೆ ಇಡಿ ದಾಳಿ: ನಗದು, ಚಿನ್ನಾಭರಣ ಸೇರಿದಂತೆ 18 ಕೋಟಿ ರೂ ಫ್ರೀಜ್
ಇಡಿ
Image Credit source: thehindu.com
Edited By:

Updated on: Jun 01, 2026 | 10:11 PM

ಬೆಂಗಳೂರು, ಜೂನ್​ 01: ನಗರದಲ್ಲಿ ದೀಪಕ್ ಕೇಬಲ್ ಇಂಡಿಯಾ ಲಿಮಿಡೆಟ್​​ನಿಂದ ವಿವಿಧ ಬ್ಯಾಂಕ್​ಗಳಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ದಾಳಿ ವೇಳೆ ಕಂಪನಿಗೆ ಸಂಬಂಧಿಸಿದ 1.27 ಕೋಟಿ ರೂ ನಗದು ಮತ್ತು ಚಿನ್ನಾಭರಣಗಳನ್ನು ಜಪ್ತಿ ಮಾಡಲಾಗಿದ್ದು, ವಿವಿಧ ಬ್ಯಾಂಕ್ ಖಾತೆಗಳಲ್ಲಿದ್ದ 18 ಕೋಟಿ ರೂ ಹಣವನ್ನೂ ಫ್ರೀಜ್ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ED) ಮಾಹಿತಿ ನೀಡಿದೆ.

ಮುಖ್ಯಾಂಶಗಳು

  • ದೀಪಕ್ ಕೇಬಲ್ಸ್ ಲಿಮಿಟೆಡ್ ಮೇಲೆ ಇಡಿ ದಾಳಿ ಕೇಸ್​
  • ಕಂಪನಿಗೆ ಸಂಬಂಧಿಸಿದ 1.27 ಕೋಟಿ ನಗದು ಮತ್ತು ಚಿನ್ನಾಭರಣ ಜಪ್ತಿ
  • ವಿವಿಧ ಬ್ಯಾಂಕ್ ಖಾತೆಗಳಲ್ಲಿರುವ 18 ಕೋಟಿ ಹಣ ಫ್ರೀಜ್

ಬ್ಯಾಂಕ್​​ಗಳಿಗೆ 899 ಕೋಟಿ ರೂ ವಂಚನೆ 

ದೀಪಕ್ ಕೇಬಲ್ಸ್ ಇಂಡಿಯಾ ಲಿಮಿಟೆಡ್ ಕಂಪನಿ ಎಸ್​​ಬಿಐ ಸೇರಿದಂತೆ ವಿವಿಧ ಬ್ಯಾಂಕ್​ಗಳಿಂದ ಅತಿ ಹೆಚ್ಚು ಪ್ರಮಾಣದಲ್ಲಿ ಸಾಲ ಪಡೆದುಕೊಂಡಿತ್ತು. ಆದರೆ, ಆ ಸಾಲದ ಹಣವನ್ನು ಉದ್ದೇಶಿತ ಉದ್ದೇಶಕ್ಕೆ ಬಳಸದೆ, ಬೇರೆ ಕಡೆಗೆ ವರ್ಗಾವಣೆ ಮಾಡುವ ಮೂಲಕ ಒಟ್ಟು 899 ಕೋಟಿ ರೂ ವಂಚಿಸಿರುವ ಗಂಭೀರ ಆರೋಪ ಕೇಳಿಬಂದಿದೆ. ಈ ವಂಚನೆಗೆ ಸಂಬಂಧಿಸಿದಂತೆ ಸಿಬಿಐ ಈಗಾಗಲೇ ಎಫ್‌ಐಆರ್ ದಾಖಲಿಸಿತ್ತು. ಸಿಬಿಐ ದಾಖಲಿಸಿದ್ದ ಇದೇ ಪ್ರಕರಣದ ಆಧಾರದ ಮೇಲೆ ಇದೀಗ ಇಡಿ ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಇದನ್ನೂ ಓದಿ: ‘ನಾನು ಒಬ್ಬ ಒಳ್ಳೆಯ ಮಗನಾಗಲು ಆಗಲೇ ಇಲ್ಲ’: ಇಡಿ ದಾಳಿ ನಂತರ ನಲಪಾಡ್ ಸ್ಫೋಟಕ ಹೇಳಿಕೆ

ಬೆಂಗಳೂರಿನ ಇ.ಡಿ ಅಧಿಕಾರಿಗಳ ನೇತೃತ್ವದ ತಂಡವು ಇತ್ತೀಚೆಗೆ ಅಂದರೆ ಮೇ 21 ಹಾಗೂ ಮೇ 29ರಂದು ದೀಪಕ್ ಕೇಬಲ್ ಇಂಡಿಯಾ ಲಿಮಿಟೆಡ್‌ನ ನಿರ್ದೇಶಕ ಕೆ. ವೆಂಕಟೇಶ್ವರ್ ರಾವ್ ಮತ್ತು ಅಧುನಿಕ್ ಕಾರ್ಪೊರೇಷನ್ ಲಿಮಿಟೆಡ್‌ನ ನಿರ್ದೇಶಕ ಮಹೇಶ್ ಅಗರ್ವಾಲ್ ಅವರಿಗೆ ಸೇರಿದ ಕಚೇರಿ ಹಾಗೂ ನಿವಾಸಗಳ ಮೇಲೆ ದಾಳಿ ಮಾಡಿದ್ದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಇಡಿ ದಾಳಿ: ನೆರೆ ರಾಜ್ಯದ ಚುನಾವಣೆಗೆ ದೊಡ್ಡ ಮೊತ್ತದ ಹಣ ಹೋಗಿರೋ ಶಂಕೆ

ಇನ್ನು ದಾಳಿ ಸಂದರ್ಭದಲ್ಲಿ ವಂಚನೆಗೆ ಸಂಬಂಧಿಸಿದ ಹಲವು ಪ್ರಮುಖ ದಾಖಲೆಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಸದ್ಯ ಜಪ್ತಿ ಮಾಡಲಾದ ನಗದು, ಚಿನ್ನಾಭರಣ ಹಾಗೂ ಫ್ರೀಜ್ ಮಾಡಲಾದ ಬ್ಯಾಂಕ್ ಖಾತೆಗಳ ವಿವರಗಳೊಂದಿಗೆ ಇಡಿ ಅಧಿಕಾರಿಗಳು ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More
Loading...
Unable to load recommendations.
Follow Us