ಬೆಂಗಳೂರು: ಬೆಳ್ಳಂಬೆಳಗ್ಗೆ ಬಿಲ್ಡರ್ಸ್​ಗಳಿಗೆ ಐಟಿ ಶಾಕ್; ಏಕಕಾಲಕ್ಕೆ 5 ಕಡೆ ದಾಳಿ

ಬೆಳ್ಳಂಬೆಳಿಗ್ಗೆ ಬಿಲ್ಡರ್ಸ್​ಗಳಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್​ ನೀಡಿದ್ದಾರೆ. ತೆರಿಗೆ ವಂಚನೆ ಆರೋಪದ ಮೇಲೆ ಬೆಂಗಳೂರಿನಲ್ಲಿನ ಬಿಲ್ಡರ್ಸ್​​ಗಳಿಗೆ ಸಂಬಂಧಿಸಿದ ಐದು ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಯಿಂದ ಬಿಲ್ಡರ್ಸ್​ಗಳಿಗೆ ನಡುಕ ಶುರುವಾಗಿದೆ.

ಬೆಂಗಳೂರು: ಬೆಳ್ಳಂಬೆಳಗ್ಗೆ ಬಿಲ್ಡರ್ಸ್​ಗಳಿಗೆ ಐಟಿ ಶಾಕ್; ಏಕಕಾಲಕ್ಕೆ 5 ಕಡೆ ದಾಳಿ
ಆದಾಯ ತೆರಿಗೆ ಇಲಾಖೆ
Follow us
ವಿವೇಕ ಬಿರಾದಾರ
|

Updated on:Dec 17, 2024 | 2:54 PM

ಬೆಂಗಳೂರು, ಡಿಸೆಂಬರ್​ 17: ತೆರಿಗೆ ವಂಚನೆ ಆರೋಪದ ಮೇಲೆ ಬೆಂಗಳೂರಿನಲ್ಲಿನ ಬಿಲ್ಡರ್ಸ್​ಗಳಿಗೆ (Builders) ಸಂಬಂಧಿಸಿದ ಐದು ಹೆಚ್ಚು ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ (IT) ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಒಂದೇ ತಿಂಗಳ ಅಂತರದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಮೂರನೇ ದಾಳಿ ಇದಾಗಿದೆ.

ಐಟಿ ಅಧಿಕಾರಿಗಳು ಕಳೆದ ತಿಂಗಳು ನವೆಂಬರ್ 27 ರಂದು​ ಬೆಂಗಳೂರಿನ 25ಕ್ಕೂ ಹೆಚ್ಚು ಕಡೆ ಉದ್ಯಮಿಗಳು, ಬಿಲ್ಡರ್​ಗಳ ಮನೆ ಮತ್ತು ಕಚೇರಿ ಮೇಲೆ‌ ಏಕಕಾಲಕ್ಕೆ ದಾಳಿ ಮಾಡಿದ್ದರು. ಕತ್ರುಗುಪ್ಪೆ ಉದ್ಯಮಿ ಶ್ರೀನಿವಾಸ್ ಎಂಬುವರ ಮನೆ ಮೇಲೆ ದಾಳಿ ಮಾಡಿದ್ದರು.

ಇದನ್ನೂ ಓದಿ: ಆದಾಯ ತೆರಿಗೆ ಪಾವತಿ: ಮಹಿಳೆಯರ ಸಂಖ್ಯೆಯಲ್ಲಿ ಶೇ. 25ರಷ್ಟು ಏರಿಕೆ; ಎರಡು ಕೋಟಿಗೂ ಅಧಿಕ ಮಹಿಳೆಯರಿಂದ ಐಟಿಆರ್ ಸಲ್ಲಿಕೆ

ಇದಕ್ಕೂ ಮುನ್ನ ನವೆಂಬರ್​ 07 ರಂದು ಐಟಿ ಅಧಿಕಾರಿಗಳು ಬೆಂಗಳೂರಿನ ಕೆಲವು ಕಂಪನಿಗಳಿಗೆ ಚುರುಕು ಮುಟ್ಟಿಸಿದ್ದರು. ಐಟಿ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ಕೆಲವು ಕಂಪನಿಗಳ ಮೇಲೆ ದಾಳಿ ಮಾಡಿದ್ದರು. ಕೆಲಸದ ಮೂಡ್​ನಲ್ಲಿದ್ದ ಸಿಬ್ಬಂದಿಗೆ ಶಾಕ್​ ನೀಡಿದ್ದರು.

ಬೆಂಗಳೂರಿನಲ್ಲಿರುವ ದೆಹಲಿ ಹಾಗೂ ವಾಣಿಜ್ಯ ನಗರಿ ಮುಂಬೈ ಮೂಲದ ಕಂಪನಿಗಳ ಕಚೇರಿಗಳ ಮೇಲೆ ದಾಳಿ ನಡೆದಿತ್ತು. ದಾಳಿ ವೇಳೆ ಅಧಿಕಾರಿಗಳು ಹಲವು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದರು. ಆದಾಯ ತೆರಿಗೆ ಇಲಾಖೆಯ ದೆಹಲಿ ಹಾಗೂ ಮುಂಬೈ ಶಾಖೆಯ ಅಧಿಕಾರಿಗಳಿಂದಲೇ ದಾಳಿ ನಡೆದಿತ್ತು ಎಂದು ತಿಳಿದು ಬಂದಿತ್ತು.

ವರದಿ: ಪ್ರದೀಪ್​

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:33 am, Tue, 17 December 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ