ಬೆಂಗಳೂರು: ಇನ್ಮುಂದೆ ರಾಜ್ಯಾದ್ಯಂತ ಎಲ್ಲಾ ಶಾಲೆ ಹಾಗೂ ಶಿಕ್ಷಣ ಇಲಾಖೆಯ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಭಿತ್ತಿಪತ್ರ, ತೋರಣ, ಪ್ಲಾಸ್ಟಿಕ್ ಬಾವುಟ, ಫ್ಲೆಕ್ಸ್, ಪ್ಲಾಸ್ಟಿಕ್ ತಟ್ಟೆ, ಥರ್ಮಲ್ ಕೋಲ್ ಹಾಗೂ ಪ್ಲಾಸ್ಟಿಕ್ನಿಂದ ತಯಾರಿಸಿದ ವಸ್ತುಗಳನ್ನು ಬಳಸದಂತೆ ನಿಷೇಧ ಹೊರಡಿಸಿದೆ.
ಜೊತೆಗೆ ಶೈಕ್ಷಣಿಕ ಸಂಸ್ಥೆಗಳು ಹಾಗೂ ಸಭೆ ಸಮಾರಂಭಗಳಲ್ಲೂ ಪ್ಲಾಸ್ಟಿಕ್ ಬಳಸುವಂತಿಲ್ಲ. ಈ ಕುರಿತು ಎಲ್ಲಾ ಡಿಡಿಪಿಐ ಹಾಗೂ ಬಿಇಒಗಳಿಗೆ ಸೂಚನೆ ಗೊರಡಿಸಲಾಗಿದ್ದು ತಕ್ಷಣದಿಂಲೇ ಜಾರಿಗೆ ಬರುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಆದೇಶಿಸಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ನಾಗೇಶ್ ಅವರು ಶಾಲೆ ಹಾಗೂ ಕಚೇರಿಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ಲಾಸ್ಟಿಕ್ ಸುತ್ತಿದ ಹೂಗುಚ್ಛ, ಪ್ಲಾಸ್ಟಿಕ್ ಹಾಳೆ/ಕಾಗದದಿಂದ ಪ್ಯಾಕ್ ಮಾಡಿದ ಪುಸ್ತಕಗಳನ್ನು ನೀಡುತ್ತಿರುವುದು ಗಮನಕ್ಕೆ ಬಂದಿದೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು ಕಡಿವಾಣ ಹಾಕಿದ್ದಾರೆ. ಇದಕ್ಕೆ ರಾಜ್ಯದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದ್ದು, ಅದರಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ತಿಳಿಸಿದ್ದಾರೆ.
ಇದನ್ನೂ ಓದಿ: Digestion Tips: ಜೀರ್ಣಕ್ರಿಯೆ ಸುಗಮಗೊಳಿಸಲು ಈ ಕ್ರಮಗಳನ್ನು ಪಾಲಿಸಿ: ಆರೋಗ್ಯದಿಂದಿರಿ