ಬೆಂಗಳೂರು: ಪಠ್ಯಪುಸ್ತಕ ಪಠಿಷ್ಕರಣೆಯಿಂದ ಶಿಕ್ಷಣ ಇಲಾಖೆಗೆ (Education Department) ಆರ್ಥಿಕ ಸಂಕಷ್ಟ ಎದುರಾಗಿದೆ. ಈ ಆರ್ಥಿಕ ಸಂಕಷ್ಟದ ಬಿಸಿ ಮಕ್ಕಳಿಗೂ ತಟ್ಟಿದ್ದು, ಈ ವರ್ಷವೂ ಮಕ್ಕಳಿಗೆ ಉಚಿತ ಶೂ (Shoe), ಸಾಕ್ಸ್ (Socks) ಭಾಗ್ಯ ಇಲ್ಲ. ಕೊರೊನಾ ಕಾರಣದಿಂದ ಮಕ್ಕಳಿಗೆ ಸೈಕಲ್ ವಿತರಣೆ ಮಾಡುತ್ತಿಲ್ಲ. ಈಗ ಶೂ ಹಾಗೂ ಸಾಕ್ಸ್ ಯೋಜನೆಗೂ ಇಲಾಖೆ ಬ್ರೇಕ್ ಹಾಕಲು ಮುಂದಾಗಿದೆ. ಕೊರೊನಾ ಕಾರಣದಿಂದ ದೇಶ ಲರ್ನಿಂಗ್ ಲಾಸ್ನಲ್ಲಿದೆ. ಗುಣಮಟ್ಟದ ಶಿಕ್ಷಣ ಕೊಡುವುದು ನಮ್ಮ ಪ್ರಮುಖ ಆದ್ಯತೆ ಎಂದು ಶಿಕ್ಷಣ ಇಲಾಖೆ ಯೋಜನೆಗೆ ಎಳ್ಳು ನೀರು ಬಿಡಲು ಮುಂದಾಗಿದೆ.
5 ಸಾವಿರ ಶಿಕ್ಷಕರ ನೇಮಕ:
ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ಕೊರತೆಯಿದ್ದು, ಇದನ್ನು ನಿವಾರಿಸಲು ಪ್ರಸ್ತುತ ನೇಮಕಾತಿ ಹಂತದಲ್ಲಿರುವ 15 ಸಾವಿರ ಶಿಕ್ಷಕರ ಪೈಕಿ ಕಲ್ಯಾಣ ಕರ್ನಾಟಕ ಭಾಗದಿಂದಲೇ 5 ಸಾವಿರ ಶಿಕ್ಷಕರನ್ನು ನೇಮಿಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಖಾತೆ ಸಚಿವ ಬಿಸಿ ನಾಗೇಶ್ ನಿನ್ನೆ ಹೇಳಿದರು.
ಇದನ್ನೂ ಓದಿ: Eknath Shinde: ಆ ಘಟನೆಯಿಂದ ಬದುಕೇ ಸಾಕೆನಿಸಿತ್ತು; ಮಕ್ಕಳ ನೆನೆದು ಭಾವುಕರಾದ ಏಕನಾಥ್ ಶಿಂಧೆ
ಮಕ್ಕಳಿಗೆ ಕಾಡುತ್ತಿದೆ ಪಾಶ್ಚರಲ್ ಡಿವಿಯೇಷನ್ ಸಮಸ್ಯೆ:
ಶಾಲಾ ಬ್ಯಾಗ್ ಹೊರೆಯಿಂದ ಮಕ್ಕಳಿಗೆ ಪಾಶ್ಚರಲ್ ಡಿವಿಯೇಷನ್ ಸಮಸ್ಯೆ ಕಾಡುತ್ತಿದೆ. ಈ ಹಿನ್ನೆಲೆ ಪ್ರತಿ ಶನಿವಾರದಂದು ಬ್ಯಾಗ್ ಲೆಸ್ ಡೇ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ. ಶನಿವಾರ ಮಕ್ಕಳ ಬ್ಯಾಗ್ ಹೊರೆ ಇಳಿಸಲು ನಿರ್ಧರಿಸಿರುವ ಇಲಾಖೆ, ಯೋಗ, ವ್ಯಾಯಾಮ ಚಟುವಟಿಕೆ ಮಾಡಿಸಲು ಸಲಹೆ ನೀಡಿದೆ. ಸದ್ಯ ಕಲಿಕಾ ಚೇತರಿಕಾ ಕಾರ್ಯಕ್ರಮ ನಡೆಯುತ್ತಿದೆ. ಈ ಕಾರ್ಯಕ್ರಮದ ಬಳಿಕ ಬ್ಯಾಗ್ ಲೆಸ್ ಡೇ ಬಗ್ಗೆ ಚಿಂತನೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ತಿಳಿಸಿದ್ದಾರೆ.
ಇದನ್ನೂ ಓದಿ: Police Recruitment Scam: ಸಿಎಂ ಬೊಮ್ಮಾಯಿ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ
Published On - 9:11 am, Tue, 5 July 22