ಕೊರೊನಾದಿಂದ ತೀರಾ ಅಗತ್ಯ ಬಿದ್ದರೆ ಮಾತ್ರ ಶಾಲೆ ಬಂದ್ ಮಾಡಿ: ಎಲ್ಲ ಜಿಲ್ಲಾಧಿಕಾರಿಗಳಿಗೆ ಶಿಕ್ಷಣ ಸಚಿವ ನಾಗೇಶ್ ಸಲಹೆ

ರಾಜ್ಯದ ಎಲ್ಲ ಶಾಲೆಗಳ ಬಂದ್ ನಿಂದ ಶಿಕ್ಷಣ ಇಲಾಖೆ ಹಿಂದೆ ಸರಿದಿದೆ. ಒಂದು ಶಾಲೆಯಲ್ಲಿ ಒಬ್ಬ ವಿದ್ಯಾರ್ಥಿಗೆ ಸೋಂಕು ಕಂಡು ಬಂದರೆ. ಎಲ್ಲ ವಿದ್ಯಾರ್ಥಿಗಳಿಗೂ ಕೋವಿಡ್ ಟೆಸ್ಟ್ ಮಾಡಿಸಿ. ತುಂಬಾ ಗಂಭೀರವಾಗಿದ್ರೆ ಮಾತ್ರ ಶಾಲೆ ಬಂದ್ ಮಾಡಿ. ಮಕ್ಕಳಿಗೆ ಕಳೆದ ಒಂದೂವರೆ ವರ್ಷಗಳಿಂದ ಸಮರ್ಪಕ ಶಿಕ್ಷಣ ಸಿಕ್ಕಿಲ್ಲ. -ಸಚಿವ ಬಿ.ಸಿ ನಾಗೇಶ್

ಕೊರೊನಾದಿಂದ ತೀರಾ ಅಗತ್ಯ ಬಿದ್ದರೆ ಮಾತ್ರ ಶಾಲೆ ಬಂದ್ ಮಾಡಿ: ಎಲ್ಲ ಜಿಲ್ಲಾಧಿಕಾರಿಗಳಿಗೆ ಶಿಕ್ಷಣ ಸಚಿವ ನಾಗೇಶ್ ಸಲಹೆ
ಶಿಕ್ಷಣ ಸಚಿವ ಬಿ ಸಿ ನಾಗೇಶ್ (ಸಂಗ್ರಹ ಚಿತ್ರ)
Follow us
TV9 Web
| Updated By: ಆಯೇಷಾ ಬಾನು

Updated on:Jan 12, 2022 | 1:51 PM

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆರ್ಭಟ ಹೆಚ್ಚಾಗಿದೆ. ಶಾಲಾ-ಕಾಲೇಜಿನ ವಿದ್ಯಾರ್ಥಿಗಳಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಬೆಂಗಳೂರಿನಲ್ಲಿ ಶಿಕ್ಷಣ ಸಚಿವರ ನೇತೃತ್ವದಲ್ಲಿ ಸಭೆ ನಡೆದಿದೆ. ಸಧ್ಯ ಸಭೆ ಬಳಿಕ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಕೊರೊನಾ ಕೇಸ್ ಹೆಚ್ಚಾದ್ರೂ ರಾಜ್ಯದಲ್ಲಿ ಶಾಲೆ ಬಂದ್ ಆಗಲ್ಲ ಎಂದು ತಿಳಿಸಿದ್ದಾರೆ.

ರಾಜ್ಯದ ಎಲ್ಲ ಶಾಲೆಗಳ ಬಂದ್ ನಿಂದ ಶಿಕ್ಷಣ ಇಲಾಖೆ ಹಿಂದೆ ಸರಿದಿದೆ. ಒಂದು ಶಾಲೆಯಲ್ಲಿ ಒಬ್ಬ ವಿದ್ಯಾರ್ಥಿಗೆ ಸೋಂಕು ಕಂಡು ಬಂದರೆ. ಎಲ್ಲ ವಿದ್ಯಾರ್ಥಿಗಳಿಗೂ ಕೋವಿಡ್ ಟೆಸ್ಟ್ ಮಾಡಿಸಿ. ತುಂಬಾ ಗಂಭೀರವಾಗಿದ್ರೆ ಮಾತ್ರ ಶಾಲೆ ಬಂದ್ ಮಾಡಿ. ಮಕ್ಕಳಿಗೆ ಕಳೆದ ಒಂದೂವರೆ ವರ್ಷಗಳಿಂದ ಸಮರ್ಪಕ ಶಿಕ್ಷಣ ಸಿಕ್ಕಿಲ್ಲ. ನಾವು ಏನೇ ಪರ್ಯಾಯ ಮಾರ್ಗ ಅನುಸರಿಸಿದ್ರೂ ಅಷ್ಟಕಷ್ಟೆ. ಭೌತಿಕ ತರಗತಿಗಳಷ್ಟೇ ಮಕ್ಕಳ ಭವಿಷ್ಯಕ್ಕೆ ಅಡಿಪಾಯ. ಪರ್ಯಾಯ ಮಾರ್ಗ ಪರಿಣಾಮಕಾರಿ ಆಗೊಲ್ಲ. ತೀರಾ ಅಗತ್ಯವಿದ್ದರೆ ಮಾತ್ರ ಶಾಲೆ ಬಂದ್ ಮಾಡುವಂತೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಡಿಸಿಗಳಿಗೆ ಸಲಹೆ ನೀಡಿದ್ದಾರೆ.

ಕಳೆದ 2 ಅಲೆಗಳಲ್ಲಿ ಶಾಲಾ ಕಾಲೇಜ್​ಗಳನ್ನ ಸಂಪೂರ್ಣವಾಗಿ ‌ಮುಚ್ಚಲಾಗಿತ್ತು. ಈ ಭಾರೀ ಪಾಸಿಟಿವಿಟಿ ರೇಟ್ ನೋಡಿಕೊಂಡು ಅಯಾ ಜಿಲ್ಲೆ, ತಾಲೂಕು ಮಟ್ಟದ ಶಾಲೆಗಳನ್ನ ಕ್ಲೋಸ್​ಗೆ ನಿರ್ಧಾರ ಮಾಡಲಾಗಿದೆ. ಶಾಲೆ ಬಂದ್ ಆದ್ರೂ, ಆನ್ ಲೈನ್ ಹಾಗೂ ವಿದ್ಯಾಗಮದ ಮೂಲಕ ಮಕ್ಕಳಿಗೆ ಶಿಕ್ಷಣ ‌ಕೊಡುವಂತೆ ಸಚಿವರು ಸಭೆಯಲ್ಲಿ ಸಲಹೆ ನೀಡಿದ್ದಾರೆ. ಹಾಗೂ ಡಿಡಿಪಿಐ ಹಾಗೂ ಬಿಇಒ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.

ವಿದ್ಯಾರ್ಥಿಗಳಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶಿಕ್ಷಣ ಸಚಿವರು ಮೀಟಿಂಗ್ ನಡೆಸಿದ್ದಾರೆ. ಸಭೆಯಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು, ಡಿಡಿಪಿಐ, ಬಿಇಒಗಳು ಭಾಗಿಯಾಗಿದ್ದು ಸಭೆಯಲ್ಲಿ ರಾಜ್ಯದ ಶಾಲೆಗಳ ಬಂದ್ ಬಗ್ಗೆ ನಿರ್ಧಾರ ಕೈಗೊಂಡಿದ್ದಾರೆ.

ಇದನ್ನೂ ಓದಿ: ಐಷಾರಾಮಿ ಜೀವನಕ್ಕಾಗಿ ಮನೆಗಳವು ಮಾಡುತ್ತಿದ್ದ ಆರೋಪಿಗಳ ಬಂಧನ; ಬಂಧಿತರಿಂದ 9 ಲಕ್ಷ ರೂ. ಮೌಲ್ಯದ 48 ಗ್ರಾಂ ಚಿನ್ನ ಜಪ್ತಿ

Published On - 1:45 pm, Wed, 12 January 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ