AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತಕ್ಕಾಗಿ ಜನರ ದಾರಿ ತಪ್ಪಿಸಬೇಡಿ: ಸಿದ್ದರಾಮಯ್ಯಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ ತಿರುಗೇಟು

ಸ್ವತಃ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಮತಗಳಿಗಾಗಿ ಜನರನ್ನು ದಾರಿತಪ್ಪಿಸುತ್ತಿದ್ದಾರೆ. ಸಮವಸ್ತ್ರದ ಬಗ್ಗೆ ಅವರ ಕಾಲದಲ್ಲೇ ನಿಯಮ ರೂಪಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.

ಮತಕ್ಕಾಗಿ ಜನರ ದಾರಿ ತಪ್ಪಿಸಬೇಡಿ: ಸಿದ್ದರಾಮಯ್ಯಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ ತಿರುಗೇಟು
ಸಿದ್ದರಾಮಯ್ಯ ಮತ್ತು ಬಿ.ಸಿ.ನಾಗೇಶ್
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Feb 04, 2022 | 3:22 PM

Share

ಬೆಂಗಳೂರು: ಮಕ್ಕಳ ಭವಿಷ್ಯದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್​ (B.C.Nagesh) ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ (Siddaramiah) ಅವರಿಗೆ ಸೂಚಿಸಿದ್ದಾರೆ. ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿರುವ ಹಿಜಾಬ್ (Hijab) ವಿವಾದ ಕುರಿತು ಪ್ರತಿಕ್ರಿಯಿಸಿರುವ ಅವರು, ಅನೇಕ ವರ್ಷಗಳಿಗೆ ರಾಜಕೀಯದಲ್ಲಿರುವವರು ಮತ್ತು ಸ್ವತಃ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಮತಗಳಿಗಾಗಿ ಜನರನ್ನು ದಾರಿತಪ್ಪಿಸುತ್ತಿದ್ದಾರೆ. ಸಮವಸ್ತ್ರದ ಬಗ್ಗೆ ಅವರ ಕಾಲದಲ್ಲೇ ನಿಯಮ ರೂಪಿಸಲಾಗಿದೆ. ಆಡಳಿತ ಮಂಡಳಿ ಒಪ್ಪಿದ ನಂತರವೇ ಸಮವಸ್ತ್ರಗಳು ಅಂತಿಮಗೊಳ್ಳುತ್ತವೆ ಎಂದು ಸ್ಪಷ್ಟಪಡಿಸಿದರು.

ರಾಜಕೀಯ ಕ್ಷೇತ್ರವನ್ನು ಹಾಳುಮಾಡಿಯಾಗಿದೆ. ದಯವಿಟ್ಟು ಶಿಕ್ಷಣ ಕ್ಷೇತ್ರವನ್ನು ಹಾಳುಮಾಡಬೇಡಿ. ಬಾಯಿಗೆ ಬಂದಂತೆ ಮಾತನಾಡಲು ಸಿದ್ದರಾಮಯ್ಯನವರಿಗೆ ನಾಚಿಕೆಯಾಗಬೇಕು. ಶಾಲೆ ಸೂಚಿಸಿದ ಯೂನಿಫಾರ್ಮ್ ಧರಿಸುತ್ತೇವೆ ಎಂದು ಮಕ್ಕಳೇ ಬರೆದುಕೊಟ್ಟಿದ್ದಾರೆ. 95 ಮಕ್ಕಳ ಪೈಕಿ 6 ಮಕ್ಕಳು ಮಾತ್ರ ಹಿಜಾಬ್ ಧರಿಸಿದ್ದಾರೆ. ಒಬ್ಬ ಲಾಯರ್ ಆಗಿ ರೂಲ್ ಬುಕ್ ಓದಿ ಸಿದ್ದರಾಮಯ್ಯನವರೇ. ನಾವೆಲ್ಲರೂ ಒಂದೇ ಎನ್ನಲು ಅವಕಾಶ ಮಾಡಿಕೊಡಿ ಎಂದು ವಾಗ್ದಾಳಿ ನಡೆಸಿದರು.

ಶಾಲಾ ಆಡಳಿತ ಮಂಡಳಿಗಳು ಅಂತಿಮಗೊಳಿಸಿರುವ ಸಮವಸ್ತ್ರವನ್ನಷ್ಟೇ ಧರಿಸಿ ಬರಲು ಅವಕಾಶವಿದೆ ಎನ್ನುವುದು ಸರ್ಕಾರದ ನಿರ್ಣಯ. ಹಿಜಾಬ್ ವಿವಾದದ ಬಗ್ಗೆ ಪಿತೂರಿಗಳು ಇರಬಹುದು. ವಿಶ್ವದ ಎಂಟು ದೇಶಗಳಲ್ಲಿ ಹಿಜಾಬ್ ನಿಷೇಧಿಸಲಾಗಿದೆ. ಧರ್ಮ ಪಾಲಿಸಲು ನಾವು ವಿರೋಧಿಸುವುದಿಲ್ಲ. ನಾನು ಕಾನೂನು ಪಂಡಿತನೂ ಅಲ್ಲ. ಸಿದ್ದರಾಮಯ್ಯ ಎಲ್ಲವನ್ನೂ ಓದಬೇಕು. ಹೈಕೋರ್ಟ್ ತೀರ್ಪು ಬರುವ ತನಕ ರಾಜ್ಯದಲ್ಲಿ ಹೊಸ ನಿಯಮ ಜಾರಿ ಮಾಡಲು ಆಗುವುದಿಲ್ಲ ಎಂದರು.

ಕೆಲವು ಪಕ್ಷಗಳು ಕೇವಲ ರಾಜಕೀಯವನ್ನಷ್ಟೇ ಮಾಡಲು ಹುಟ್ಟಿವೆ. ಅವರಿಗೆ ರಾಷ್ಟ್ರದ ಪ್ರಗತಿ, ಏಕತೆಯ ಬಗ್ಗೆ ಕಾಳಜಿ ಇಲ್ಲ. ಮತಕ್ಕಾಗಿ ಯಾರಿಗೆ ಬೇಕಾದರೂ ಬೆಂಬಲ ಕೊಡುತ್ತಾರೆ. ಸ್ವ ಹಿತಕ್ಕಾಗಿ ಯಾರು ಹೇಗೆ ಬೇಕಾದರೂ ಇರಲು ಬಿಡುತ್ತಾರೆ. ಹಲವು ವರ್ಷಗಳಿಂದ ಇದನ್ನೇ ಮಾಡಿಕೊಂಡು ಬಂದಿದ್ದಾರೆ. ಕಾನೂನು ಓದಿರುವ ಸಿದ್ದರಾಮಯ್ಯ ದಿಕ್ಕು ತಪ್ಪಿಸುತ್ತಿದ್ದಾರೆ. 2018ರಲ್ಲಿ ಅವರು ಮುಖ್ಯಮಂತ್ರಿ ಆಗಿದ್ದಾಗಲೇ ಈ ಸಂಬಂಧ ನಿಯಮ ರೂಪಿಸಲಾಗಿತ್ತು.. ಬಿಜೆಪಿ ಸರ್ಕಾರ ಬಂದಮೇಲೆ ಸಮವಸ್ತ್ರ ತಂದಿದ್ದಲ್ಲ ಎಂದು ವಿವರಿಸಿದರು.

ಉಡುಪಿ ಶಾಸಕ ರಘುಪತಿ ಭಟ್ ಬಗ್ಗೆ ಇವರು ಏಕವಚನದಲ್ಲಿ ಮಾತನಾಡಿದ್ದಾರೆ. ಇದನ್ನು ಗಮನಿಸಿದರೆ, ಸಿದ್ದರಾಮಯ್ಯನವರಿಗೆ ಪ್ರಜಾಪ್ರಭುತ್ವದ ಬಗ್ಗೆ ಇರುವ ಕಾಳಜಿ ಎಷ್ಟು ಎನ್ನುವುದು ತಿಳಿಯುತ್ತದೆ. ಸಮವಸ್ತ್ರ ಎನ್ನುವುದು ಸಮಾನತೆ ಹಾಗೂ ಭ್ರಾತೃತ್ವದ ಸಂಕೇತ. ಸಿಎಂ ಆಗಿದ್ದ ಅವರಿಗೆ ಸುಳ್ಳು ಹೇಳುವುದಕ್ಕೆ ನಾಚಿಕೆಯಾಗಬೇಕು ಎಂದರು.

ಹಿಜಾಬ್ ಚರ್ಚೆಗೆ ಸಭೆ ಸರ್ಕಾರಿ ಕಾಲೇಜುಗಳಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ಬಳಕೆಯ ವಿವಾದ ಕುರಿತು ಚರ್ಚಿಸಲು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ (ಫೆ.4) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭಾಗವಹಿಸಿದ್ದಾರೆ. ಪಿಯು ಮಂಡಳಿ ನಿರ್ದೇಶಕಿ ಸ್ನೇಹಲ್, ಶಿಕ್ಷಣ ಇಲಾಖೆ ಆಯುಕ್ತರು, ಕಾನೂನು ಸಲಹೆಗಾರರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಕುಂದಾಪುರ, ಬೈಂದೂರು ಕಾಲೇಜುಗಳ ಸ್ಥಿತಿ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಳುತ್ತಿರುವ ಪ್ರಶ್ನೆಗಳಿಗೆ ಸಚಿವ ಬಿ.ಸಿ.ನಾಗೇಶ್ ವಿವರಣೆ ಕೊಡುತ್ತಿದ್ದಾರೆ. ಸಮವಸ್ತ್ರ ಸಂಬಂಧ ಸುತ್ತೋಲೆ ಹೊರಡಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ.

ಇದನ್ನೂ ಓದಿ: ಹಿಜಾಬ್ ವಿವಾದವನ್ನು ಬಿಜೆಪಿಗರು ದೊಡ್ಡದು ಮಾಡಿಸ್ತಿದ್ದಾರೆ: ಮಾಜಿ ಸಿಎಂ ಸಿದ್ದರಾಮಯ್ಯ ಇದನ್ನೂ ಓದಿಕರಾವಳಿಯಿಂದ ಬೆಳಗಾವಿ ಜಿಲ್ಲೆಗೆ ವ್ಯಾಪಿಸಿದ ಹಿಜಾಬ್ ವಿವಾದ; ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ಪಿಯು ವಿದ್ಯಾರ್ಥಿಗಳು

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!