ಬೆಂಗಳೂರಿನ ಶಾಲೆಯೊಂದರಲ್ಲಿ ಬೈಬಲ್ ಕಡ್ಡಾಯ ಆರೋಪ; ಕ್ರಮದ ಭರವಸೆ ನೀಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಹಿಂದೂಪರ ಸಂಘಟನೆಗಳು ಈಗಾಗಲೇ ದೂರವಾಣಿ ಮೂಲಕ ಶಿಕ್ಷಣ ಮಂತ್ರಿಗೆ ಈ ಬಗ್ಗೆ ಮಾಹಿತಿ ರವಾನಿಸಿದ್ದಾರೆ. ರಿಚರ್ಡ್ಟೌನ್ನಲ್ಲಿರುವ ಕ್ಲಾರೆನ್ಸ್ ಹೈಸ್ಕೂಲ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಕ್ಲಾರೆನ್ಸ್ ಹೈಸ್ಕೂಲ್ಗೆ ಇಂದು ಬಿಇಒ, ಅಧಿಕಾರಿಗಳು ಭೇಟಿ ನೀಡುವ ಸಾಧ್ಯತೆ ಇದೆ.

ಬೆಂಗಳೂರಿನ ಶಾಲೆಯೊಂದರಲ್ಲಿ ಬೈಬಲ್ ಕಡ್ಡಾಯ ಆರೋಪ; ಕ್ರಮದ ಭರವಸೆ ನೀಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್
ಶಿಕ್ಷಣ ಸಚಿವ ಬಿ ಸಿ ನಾಗೇಶ್ (ಸಂಗ್ರಹ ಚಿತ್ರ)
Follow us
TV9 Web
| Updated By: ಆಯೇಷಾ ಬಾನು

Updated on:Apr 25, 2022 | 10:03 AM

ಹಿಜಾಬ್, ಹಲಾಲ್ ಕಟ್, ಅಜಾನ್ ವಿವಾದದ ಬೆನ್ನಲ್ಲೇ ಇದೀಗ ಮತ್ತೊಂದು ವಿವಾದ ಶುರುವಾಗಿದೆ. ಬೆಂಗಳೂರಿನ ಕ್ಲಾರೆನ್ಸ್ ಶಾಲೆಯಲ್ಲಿ ಕ್ರೈಸ್ತ ಧರ್ಮದ ಹೇರಿಕೆ ಆರೋಪ ಕೇಳಿ ಬಂದಿದ್ದು ಶಾಲಾ ಆಡಳಿತ ಮಂಡಳಿ ನಿರ್ಧಾರದ ವಿರುದ್ದ ಹಿಂದೂ ಜನಜಾಗೃತಿ ಸಮಿತಿ ಸಿಡಿದೆದ್ದಿದೆ. ಶಾಲೆ ವಿರುದ್ಧ ದೂರು ಕೊಡಲು ಹಿಂದೂಪರ ಸಂಘಟನೆ ಮುಂದಾಗಿದೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ಗೆ ದೂರು ನೀಡಲಿದ್ದಾರೆ.

ಹಿಂದೂಪರ ಸಂಘಟನೆಗಳು ಈಗಾಗಲೇ ದೂರವಾಣಿ ಮೂಲಕ ಶಿಕ್ಷಣ ಮಂತ್ರಿಗೆ ಈ ಬಗ್ಗೆ ಮಾಹಿತಿ ರವಾನಿಸಿದ್ದಾರೆ. ರಿಚರ್ಡ್ಟೌನ್ನಲ್ಲಿರುವ ಕ್ಲಾರೆನ್ಸ್ ಹೈಸ್ಕೂಲ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಕ್ಲಾರೆನ್ಸ್ ಹೈಸ್ಕೂಲ್ಗೆ ಇಂದು ಬಿಇಒ, ಅಧಿಕಾರಿಗಳು ಭೇಟಿ ನೀಡುವ ಸಾಧ್ಯತೆ ಇದೆ. ಅಧಿಕಾರಿಗಳು ಬೈಬಲ್ ಕಡ್ಡಾಯಗೊಳಿಸಿರುವ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಪಠ್ಯ ಕ್ರಮ ಪರಿಶೀಲಿಸಿ ಬೈಬಲ್ ಕಡ್ಡಾಯಗೊಳಿಸಿದ್ದರೆ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಬಹುತೇಕ ಕ್ರೈಸ್ತ ಶಿಕ್ಷಣ ಸಂಸ್ಥೆಗಳು ಇದೇ ರೀತಿ ಅನುಸರಿಸುತ್ತಿವೆಯಂತೆ ಎಂದು ಕ್ರೈಸ್ತ ಶಿಕ್ಷಣ ಸಂಸ್ಥೆಗಳ ವಿರುದ್ಧ ಹಿಂದೂ ಪರ ಸಂಘಟನೆಗಳು ಆರೋಪ ಮಾಡಿವೆ. ದೂರು ಬಂದ ಶಾಲೆಗಳ ವಿರುದ್ಧ ಕ್ರಮಕ್ಕೆ ಶಿಕ್ಷಣ ಇಲಾಖೆ ಸಜ್ಜಾಗಿದೆ. ಯಾವುದೇ ಧರ್ಮದ ಬಗ್ಗೆ ಪಾಠ ಪ್ರವಚನ ಮಾಡುವಂತಿಲ್ಲ. ಪಠ್ಯದಲ್ಲಿ ಧರ್ಮದ ಒಂದು ಭಾಗವನ್ನು ಇಡಬಹುದು ಅಷ್ಟೆ. ಆದರೆ ಬೈಬಲ್ ಓದುವುದನ್ನು ಕಡ್ಡಾಯಗೊಳಿಸಿದರೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಹಾಗೂ ಮಾಹಿತಿ ಪಡೆದು ಕ್ರಮ ಜರುಗಿಸುವುದಾಗಿ ಬಿ.ಸಿ.ನಾಗೇಶ್ ಸ್ಪಷ್ಟನೆ ನೀಡಿದ್ದಾರೆ.

ಕ್ಲಾರೆನ್ಸ್ ಹೈಸ್ಕೂಲ್ ವಿರುದ್ಧ ಹಿಂದೂಪರ ಸಂಘಟನೆ ಆಕ್ರೋಶ! ಈಗಾಗ್ಲೇ ರಾಜ್ಯ ಸಾಲು ಸಾಲು ವಿವಾದಗಳಿಗೆ ಸಾಕ್ಷಿಯಾಗಿದೆ.. ಇದರ ನಡುವೆ ಕ್ರೈಸ್ತ ಶಾಲೆಯಲ್ಲಿ ಕ್ರೈಸ್ತರಲ್ಲದೆ ಇತರೆ ಧರ್ಮದ ಮಕ್ಕಳಿಗೂ ಒತ್ತಾಯ ಪೂರ್ವಕವಾಗಿ ಬೈಬಲ್ ಓದಿಸಲಾಗುತ್ತಿದೆ ಎಂದು ಹಿಂದೂ ಜನ ಜಾಗೃತಿ ವೇದಿಕೆ ಮುಖಂಡರು ಆರೋಪಿಸಿದ್ದಾರೆ. ನಗರದ ಪಾಟರಿ ರಸ್ತೆಯಲ್ಲಿರುವ ಕ್ಲಾರೆನ್ಸ್ ಹೈ ಸ್ಕೂಲ್ನ ಪಠ್ಯಕ್ರಮದಲ್ಲಿ ಬೈಬಲ್ ಕಡ್ಡಾಯ ಮಾಡಲಾಗಿದ್ದು, ಹಿಂದೂ ಮಕ್ಕಳಿಗೆ ಒತ್ತಾಯದಿಂದ ಬೈಬಲ್ ಓದುವಂತೆ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಈ ಶಾಲೆಯ ವೆಬ್ ಸೈನ್ ಬ್ರೌಶರ್ನಲ್ಲೂ ಈ ಬಗ್ಗೆ ಉಲ್ಲೇಖವಿದ್ದು, ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಲು ಕ್ಲಾರೆನ್ಸ್ ಹೈಸ್ಕೂಲ್ ಆಡಳಿತ ಮಂಡಳಿ ನಿರಾಕರಿಸಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು ತನಿಖೆ ನಡೆಸಿದ ಬಳಿಕವೇ ನಿಜಾಂಶ ಹೊರಬೀಳಲಿದೆ.

ಕ್ಲಾರೆನ್ಸ್ ಹೈಸ್ಕೂಲ್​ಗೆ ಸ್ಥಳೀಯ ಪೊಲೀಸರಿಂದ ಬಂದೋಬಸ್ತ್ ಬೆಂಗಳೂರಿನ ಕ್ಲಾರೆನ್ಸ್​ ಹೈಸ್ಕೂಲ್​ನಲ್ಲಿ ಸ್ಥಳೀಯ ಪೊಲೀಸರಿಂದ ಬಂದೋಬಸ್ತ್ ಕೈಗೊಳ್ಳಲಾಗಿದೆ. ಹಿಂದೂ ಪರ ಸಂಘಟನೆಗಳು ಶಾಲೆಗೆ ಬಂದು ಗಲಾಟೆ ಮಾಡುವ ಸಾಧ್ಯತೆ ಹಿನ್ನಲೆ ಪುಲಿಕೇಶಿನಗರ ಪೊಲೀಸ್ ಠಾಣೆ ಪೊಲೀಸರು ಶಾಲೆ ಸುತ್ತಾಮುತ್ತ ಬಿಗಿ ಭದ್ರತೆ ಕೈಗೊಂಡಿದ್ದಾರೆ. ಹಾಗೂ ಶಾಲೆಯ ಮುಂಭಾಗ ಪೊಲೀಸ್ ಹೊಯ್ಸಳ ವಾಹನ ನಿಂತಿದೆ.

ಪರೀಕ್ಷೆ ಇದೆ ಶಾಲೆಯತ್ತ ಬೇರೆಯವರು ಸುಳಿಯದಂತೆ ಸೂಚನೆ ಪರೀಕ್ಷೆ ನಡೆಯುತ್ತಿದೆ ಎಂದು ಕ್ಲಾರೆನ್ಸ್​ ಹೈಸ್ಕೂಲ್​ನಲ್ಲಿ ಪೊಲೀಸರು ನಾಮಫಲಕ ಹಾಕಿದ್ದಾರೆ. ಇಷ್ಟು ದಿನ ಸುಮ್ಮನಿದ್ದು ಈಗ ಪೊಲೀಸರ ಮೂಲಕ ಪರೀಕ್ಷೆ ಎಂದು ಶಾಲೆ ಬೋರ್ಡ್​ ಹಾಕಿಸಿದೆ. ವಿವಾದದ ಸುಳಿಯಿಂದ ತಪ್ಪಿಸಿಕೊಳ್ಳಲು ಆಡಳಿತ ಮಂಡಳಿ ಪ್ಲ್ಯಾನ್​ ಮಾಡಿದ್ದು ಪರೀಕ್ಷೆ ಇದೆ ಶಾಲೆಯತ್ತ ಬೇರೆಯವರು ಸುಳಿಯದಂತೆ ಸೂಚನೆಯ ಬೋರ್ಡ್ ಹಾಕಿದೆ. ಗಲಾಟೆಗೆ ಅವಕಾಶ ಮಾಡಿಕೊಡಬಾರದೆಂದು ಮಹಿಳಾ ಪೊಲೀಸ್ ಸಿಬ್ಬಂದಿಯಿಂದ ಎಚ್ಚರಿಕೆ ಸಂದೇಶದ ಬರೆಯಲಾಗಿದೆ.

ಇದನ್ನೂ ಓದಿ: ಶಾಲೆಯಲ್ಲಿ ಕ್ರೈಸ್ತ ಧರ್ಮ ಹೇರಿಕೆ ಆರೋಪ: ಹಿಂದೂ ಜನಜಾಗೃತಿ ಸಮಿತಿ ಆಕ್ರೋಶ

Published On - 6:47 am, Mon, 25 April 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ