BC Nagesh: ಶಿಕ್ಷಣ ಸಚಿವ ಬಿಸಿ ನಾಗೇಶ್​ಗೆ ಕೊರೊನಾ ಪಾಸಿಟಿವ್

| Updated By: ganapathi bhat

Updated on: Jan 01, 2022 | 6:11 PM

ಕೊವಿಡ್-19 ವರದಿ ಪಾಸಿಟಿವ್ ಬಂದಿದೆ. ಕ್ವಾರಂಟೈನ್‌ನಲ್ಲಿದ್ದು ಅಗತ್ಯ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

BC Nagesh: ಶಿಕ್ಷಣ ಸಚಿವ ಬಿಸಿ ನಾಗೇಶ್​ಗೆ ಕೊರೊನಾ ಪಾಸಿಟಿವ್
ಸಚಿವ ಬಿ.ಸಿ.ನಾಗೇಶ್
Follow us on

ಬೆಂಗಳೂರು: ಕರ್ನಾಟಕ ಶಿಕ್ಷಣ ಸಚಿವ ಬಿ.ಸಿ. ನಾಗೇಶ್​ಗೆ ಕೊರೊನಾ ಪಾಸಿಟಿವ್​ ದೃಢವಾಗಿದೆ. ಸಚಿವ ಬಿ.ಸಿ. ನಾಗೇಶ್​ ಹೋಮ್​ ಕ್ವಾರಂಟೈನ್​ ಆಗಿದ್ದಾರೆ. ಕೊವಿಡ್19 ಲಘು ಲಕ್ಷಣಗಳು ಕಾಣಿಸಿದ ಕಾರಣ ನಾನು ಇಂದು ಪರೀಕ್ಷೆಗೆ ಒಳಪಟ್ಟಿದ್ದು, ಕೊವಿಡ್-19 ವರದಿ ಪಾಸಿಟಿವ್ ಬಂದಿದೆ. ಕ್ವಾರಂಟೈನ್‌ನಲ್ಲಿದ್ದು ಅಗತ್ಯ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ಇತ್ತೀಚೆಗೆ ನಡೆದ ಘಟನೆಗಳಿಂದ ಕೊರೊನಾ ಕೇಸ್ ಹೆಚ್ಚಳ ಸಾಧ್ಯತೆ: ಗೌರವ್ ಗುಪ್ತಾ ಹೇಳಿಕೆ
ಇತ್ತೀಚೆಗೆ ನಡೆದ ಘಟನೆಗಳಿಂದ ಕೊರೊನಾ ಕೇಸ್ ಹೆಚ್ಚಳ ಸಾಧ್ಯತೆ ಇದೆ. ಹೊಸ ವರ್ಷ ಸಂಭ್ರಮ, ಪ್ರತಿಭಟನೆಗಳಿಂದ ಪರಿಣಾಮ ಬೀರುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ರಾತ್ರಿ ಕರ್ಫ್ಯೂ, ನಿರ್ಬಂಧದ ಮೂಲಕ ಕಂಟ್ರೋಲ್ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಹೇಳಿಕೆ ನೀಡಿದ್ದಾರೆ. ಹೊಸ ವರ್ಷಾಚರಣೆ ವೇಳೆ ಅಧಿಕಾರಿಗಳು ಒಳ್ಳೆ ಕೆಲಸ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಇದೇ ರೀತಿ ಕೆಲಸ ಮುಂದುವರೆಲಿದೆ. ಸೋಂಕು ತೀವ್ರಗತಿಯಲ್ಲಿ ಹರಡದಂತೆ ನೋಡಿಕೊಳ್ಳಲಾಗುತ್ತೆ ಎಂದು ತಿಳಿಸಿದ್ದಾರೆ.

ಕೊರೊನಾ ಸೋಂಕಿತರ ಸಂಖ್ಯೆ ಜಾಸ್ತಿ ಆಗ್ತಿದೆ. ಜನ ಇನ್ನಷ್ಟು ಜಾಗೃತೆಯಿಂದ ಇರಬೇಕು. ಅದನ್ನು ತಡೆಗಟ್ಟುವ ಕೆಲಸ ಪಾಲಿಕೆ ಮಾಡ್ತಿದೆ. ಕೊರೊನಾ ಟೆಸ್ಟ್ ಸಂಖ್ಯೆ ಏರಿಕೆ ಮಾಡಲಾಗುತ್ತೆ. ಪ್ರತಿ ದಿನ ಐವತ್ತು ಸಾವಿರ ಟೆಸ್ಟ್ ನಡೆಯುತ್ತಿದೆ. ಅದನ್ನು ಇನ್ನಷ್ಟು ಏರಿಕೆ ಮಾಡುವ ಕೆಲಸ ಮಾಡಲಾಗುತ್ತೆ. ಯಲಹಂಕ ಭಾಗದಲ್ಲಿ ಸೋಂಕು ಹೆಚ್ಚು ಕಾಣಿಸಿಕೊಳ್ಳುತ್ತಿದೆ. ಎಲ್ಲೆಲ್ಲಿ ಸೋಂಕು ಹೆಚ್ಚು ಕಾಣಿಸಿಕೊಳ್ಳುತ್ತಿದೆ ಆ ಭಾಗವನ್ನ ಕಂಟೈನ್ಮೆಂಟ್ ಜೋನ್ ಆಗಿ ಮಾಡಲಾಗ್ತಿದೆ. ಸೋಂಕು ಕಾಣಿಸಿಕೊಂಡವರ ಬಗ್ಗೆ ಹೆಚ್ಚಿನ ನಿಗಾ ಇಡಲಾಗ್ತಿದೆ. ಜೋನಲ್ ಅಧಿಕಾರಿಗಳು ಅಗಲು ರಾತ್ರಿ ಎನ್ನದೆ ಕೆಲಸ ಮಾಡುತ್ತಿದ್ದಾರೆ ಎಂದು ಗೌರವ್ ಗುಪ್ತಾ ಹೇಳಿದ್ದಾರೆ.

ಅಪಾರ್ಟ್ಮೆಂಟ್​ಗಳಲ್ಲೇ ಅತಿ ಹೆಚ್ಚು ಸೋಂಕು ದಾಖಲಾಗ್ತಿದೆ. ಪಾಲಿಕೆ ಅಧಿಕಾರಿಗಳು ಸಭೆ ಮಾಡಿದ್ದಾರೆ. ಸೂಕ್ತ ಕ್ರಮ ತೆಗೆದುಕೊಳ್ಳುವ ಕೆಲಸ ಆಗಲಿದೆ ಎಂದು ಗುಪ್ತ ಮಾಹಿತಿ ನೀಡಿದ್ದಾರೆ. ಮಕ್ಕಳಿಗೆ ಲಸಿಕೆ ವಿಚಾರವಾಗಿಯೂ ಗೌರವ್ ಗುಪ್ತಾ ಪ್ರತಿಕ್ರಿಯೆ ನೀಡಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳು ಇದಕ್ಕೆ ಚಾಲನೆ ಕೊಡಲಿದ್ದಾರೆ. 15- 18 ವರ್ಷದ ಒಳಗಿನ ಮಕ್ಕಳಿಗೆ ಲಸಿಕೆ ಶುರುವಾಗಲಿದೆ. ಎಲ್ಲಾ ಕಡೆ ಪೂರ್ವ ತಯಾರಿ ನಡೆದಿದೆ. ಮಕ್ಕಳ ಪೋಷಕರಿಗೂ ಮಾಹಿತಿ ನೀಡಲಾಗ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಮಕ್ಕಳಿಗೆ ಕೊರೊನಾ ಲಸಿಕಾ ಅಭಿಯಾನಕ್ಕೆ ಸಿದ್ಧತೆ: ವಿವರ ನೀಡಿದ ಆರೋಗ್ಯ ಇಲಾಖೆ ಆಯುಕ್ತ

ಇದನ್ನೂ ಓದಿ: ಕೊರೊನಾ ಸಂದರ್ಭದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ಧಿಯಾಗಿದೆ: ಪ್ರಧಾನಿ ಮೋದಿ