Eid Al-Adha 2021: ನಾಳೆಯೇ ಬಕ್ರೀದ್; ಇಂದು ರಾತ್ರಿಯಿಂದಲೇ ಬೆಂಗಳೂರು ಪ್ರವೇಶಿಸುವ ಎಲ್ಲ ವಾಹನಗಳ ತಪಾಸಣೆ
Bakrid 2021: ಕಳೆದ ಒಂದು ವಾರದಲ್ಲಿ ಧಾರ್ಮಿಕ ಮುಖಂಡರ ಜತೆ ಸಭೆ ನಡೆಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಚಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗುವುದು. ಮಸೀದಿಗಳಲ್ಲಿ ಗುಂಪುಗುಂಪಾಗಿ ಪ್ರಾರ್ಥನೆ ಮಾಡುವಂತಿಲ್ಲ. ರಾಜ್ಯ ಸರ್ಕಾರದ ಕೊವಿಡ್ ಮಾರ್ಗಸೂಚಿ ಪಾಲಿಸಬೇಕು.
ಬೆಂಗಳೂರು: ನಾಳಿನ ಬಕ್ರೀದ್ ಹಬ್ಬದಂದು ಭದ್ರತೆಗಾಗಿ 40 ಕೆಎಸ್ಆರ್ಪಿ, 30 ಸಿಎಆರ್ ತುಕಡಿಗಳನ್ನು ಬೆಂಗಳೂರು ನಗರದಲ್ಲಿ ಭದ್ರತೆಗಾಗಿ ನಿಯೋಜಸಿಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದರು.
ಕಳೆದ ಒಂದು ವಾರದಲ್ಲಿ ಧಾರ್ಮಿಕ ಮುಖಂಡರ ಜತೆ ಸಭೆ ನಡೆಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಚಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗುವುದು. ಮಸೀದಿಗಳಲ್ಲಿ ಗುಂಪುಗುಂಪಾಗಿ ಪ್ರಾರ್ಥನೆ ಮಾಡುವಂತಿಲ್ಲ. ರಾಜ್ಯ ಸರ್ಕಾರದ ಕೊವಿಡ್ ಮಾರ್ಗಸೂಚಿ ಪಾಲಿಸಬೇಕು. ಇಂದು ರಾತ್ರಿಯಿಂದಲೇ ಪೊಲೀಸರು ಗಸ್ತು ತಿರುಗಲಿದ್ದಾರೆ. ನಗರದ ಗಡಿಭಾಗದಲ್ಲಿ ಚೆಕ್ಪೋಸ್ಟ್ ಸ್ಥಾಪಿಸಿ ಬೆಂಗಳೂರು ಪ್ರವೇಶಿಸುವ ಎಲ್ಲಾ ವಾಹನಗಳ ತಪಾಸಣೆ ನಡೆಸಲಾಗುವುದು ಎಂದು ಅವರು ಮಾಹಿತಿ ನೀಡಿದರು. ಜತೆಗೆ ಶಾಂತಿಯುತವಾಗಿ ಬಕ್ರೀದ್ ಹಬ್ಬ ಆಚರಣೆ ಮಾಡುವಂತೆಯೂ ಪೊಲೀಸ್ ಆಯುಕ್ತ ಕಮಲ್ ಪಂತ್ ಮನವಿ ಮಾಡಿದರು.
ಬಕ್ರೀದ್ ವೇಳೆ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ; ಪರಿಷ್ಕೃತ ಆದೇಶ ಹೊರಡಿಸಿದ ಸರ್ಕಾರ ಬಕ್ರೀದ್ (Bakrid 2021) ವೇಳೆ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಕುರಿತು ಮಸೀದಿ ಸಾಮರ್ಥ್ಯಕ್ಕೆ ಅನುಗುಣವಾಗಿ ಶೇ.50ರಷ್ಟು ಜನರಿಗೆ ಮಾತ್ರ ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಮುನ್ನ 50 ಜನರಿಗಷ್ಟೇ ಅವಕಾಶ ಎಂಬ ಆದೇಶದಲ್ಲಿ ಪರಿಷ್ಕರಣೆ ಮಾಡಲಾಗಿದ್ದು, ಆಯಾ ಮಸೀದಿಗಳ ಸಾಮರ್ಥ್ಯಕ್ಕೆ ಅನುಗುಣವಾಗಿ ಶೇ. 50ರಷ್ಟು ಜನರಿಗಿಂತ ಹೆಚ್ಚಾಗದೇ ಪ್ರಾರ್ಥನೆ ಸಲ್ಲಿಸಬೇಕು ಎಂದು ನಿಯಮ ಪರಿಷ್ಕರಿಸಲಾಗಿದೆ.
ಜುಲೈ 21 ರಂದು ಬಕ್ರೀದ್ ಹಬ್ಬ ಆಚರಿಸಲ್ಪಡುವ ಹಿನ್ನೆಲೆಯಲ್ಲಿ ಈದ್ಗಾ ಮೈದಾನಗಳಲ್ಲಿ (Eidgah) ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧಿಸಿ ರಾಜ್ಯ ಸರ್ಕಾರ ನಿನ್ನೆ (ಜುಲೈ 16) ಆದೇಶಿಸಿದೆ. ಆದರೆ ಮಸೀದಿಗಳಲ್ಲಿ (Mosques) ಷರತ್ತುಗಳೊಂದಿಗೆ ಸಾಮೂಹಿಕ ಪ್ರಾರ್ಥನೆ ಅವಕಾಶ ಕಲ್ಪಿಸಲಾಗಿತ್ತು. ರಾಜ್ಯದಲ್ಲಿ ಕೊವಿಡ್ ಸೋಂಕು ಸದ್ಯ ಕಡಿಮೆಯಾಗಿದ್ದು, ಮತ್ತೊಮ್ಮೆ ಕೊವಿಡ್ ಸೋಂಕು ಹೆಚ್ಚಳವಾಗುವ ಭೀತಿಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಜುಲೈ 21ರಂದು ಬಕ್ರೀದ್ ಹಬ್ಬ ಆಚರಿಸುವ ಕುರಿತು ಅಧಿಕೃತ ಘೋಷಣೆ ಮಾಡಲಾಗಿದ್ದು, ಮಸೀದಿಗಳಲ್ಲಿ 50 ಜನರೊಂದಿಗೆ ಮಾತ್ರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ಈ ಆದೇಶವನ್ನು ಪರಿಷ್ಕರಿಸುವ ರಾಜ್ಯ ಸರ್ಕಾರ ಮಸೀದಿಗಳ ಸಾಮರ್ಥ್ಯದ ಶೇಕಡಾ 50ರಷ್ಟು ಜನರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಿದೆ.
ಇದನ್ನೂ ಓದಿ:
Eid Al-Adha 2021: ತ್ಯಾಗ ಬಲಿದಾನದ ಸಂಕೇತವಾಗಿರುವ ಬಕ್ರೀದ್ ಹಬ್ಬದ ಹಿಂದಿದೆ ಪ್ರವಾದಿ ಇಬ್ರಾಹಿಂರ ರೋಚಕ ಕಥೆ
Bakrid Special 2021: ಬಕ್ರೀದ್ ಹಬ್ಬಕ್ಕೆ ರುಚಿ ರುಚಿಯಾದ ಅಡುಗೆ ಮಾಡಿ
(Eid Al Adha 2021 tomorrow Inspection of all vehicles entering Bengaluru from tonight says Kamal Pant Bakrid 2021 )
Published On - 10:00 pm, Tue, 20 July 21