ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಇದರ ಹಿಂದೆ ಓಲೈಕೆ ರಾಜಕಾರಣ ಇದೆ ಎಂದ ಮಾಜಿ ಸಿಎಂ ಬೊಮ್ಮಾಯಿ

ಸರ್ಕಾರ ಲಾಠಿಚಾರ್ಜ್​ ನಡೆಸುವಂತಹ ಪರಿಸ್ಥಿತಿಗೆ ಬರಬಾರದಾಗಿತ್ತು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ. ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಪ್ರಕರಣದ ಹಿಂದೆ ಓಲೈಕೆ ರಾಜಕಾರಣ ಇದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿ ಕಾರಿದ್ದಾರೆ.

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಇದರ ಹಿಂದೆ ಓಲೈಕೆ ರಾಜಕಾರಣ ಇದೆ ಎಂದ ಮಾಜಿ ಸಿಎಂ ಬೊಮ್ಮಾಯಿ
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
Follow us
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ

Updated on: Oct 02, 2023 | 11:15 AM

ಬೆಂಗಳೂರು, ಅಕ್ಟೋಬರ್​ 02: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಪ್ರಕರಣದ ಹಿಂದೆ ಓಲೈಕೆ ರಾಜಕಾರಣ ಇದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ಲಾಠಿಚಾರ್ಜ್​ ನಡೆಸುವಂತಹ ಪರಿಸ್ಥಿತಿಗೆ ಬರಬಾರದಾಗಿತ್ತು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ. ಶಿವಮೊಗ್ಗ ಸೂಕ್ಷ್ಮ ನಗರ, ಹಿಂದೆಯೂ ಇಂತಹ ಘಟನೆಗಳು ನಡೆದಿವೆ. ಧಾರ್ಮಿಕ ಕಾರ್ಯಕ್ರಮಗಳ ವೇಳೆ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

ಶಿವಮೊಗ್ಗ ನಗರ 3 ಠಾಣಾ ವ್ಯಾಪ್ತಿಗಳು ಸೂಕ್ಷ್ಮ ಪ್ರದೇಶಗಳಾಗಿದ್ದು, ಈ ಠಾಣೆಗಳಿಗೆ ಸಮರ್ಥ ಅಧಿಕಾರಿಗಳನ್ನು ನಿಯೋಜಿಸಬೇಕು. ಇಲ್ಲದವಾದರೆ ಸಮಾಜಘಾತುಕ ಶಕ್ತಿಗಳಿಗೆ ಕುಮ್ಮಕ್ಕು ನೀಡಿದಂತಾಗುತ್ತೆ. ಜಿಲ್ಲೆಗಳಲ್ಲಿ ಕ್ಲಬ್​ಗಳು, ರಿಯಲ್ ಎಸ್ಟೇಟ್ ಮಾಫಿಯಾ ಶುರುವಾಗಿದೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು ಎಂದರು.

ಇದನ್ನೂ ಓದಿ: ಶಿವಮೊಗ್ಗ: 4 ವರ್ಷದ ಮಗು ಕೂದಲೆಳೆ ಅಂತರದಲ್ಲಿ ಪಾರು ! ರಾಗಿಗುಡ್ಡದ ಕಲ್ಲು ತೂರಾಟದ ಕರಾಳತೆ ಬಿಚ್ಚಿಟ್ಟ ಹಿಂದೂಗಳು

ಗಾಂಧಿ ಕಂಡ ಕನಸು ಕರ್ನಾಟಕದಲ್ಲಿ ನನಸು ಅಂತ ಸರ್ಕಾರದ ಜಾಹೀರಾತು ವಿಚಾರವಾಗಿ ಮಾತನಾಡಿದ ಅವರು, ಮಾಡುವುದೆಲ್ಲಾ ಗಾಂಧಿ ವಿರೋಧಿ ನೀತಿ. ಸುಳ್ಳು ಹೇಳುವುದರಿಂದ ಪ್ರಾರಂಭ ಆಗುತ್ತದೆ. ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಸಿಕ್ಕಲ್ಲೆಲ್ಲಾ ಮಧ್ಯದಂಗಡಿ ಶುರು ಮಾಡಿದ್ದಾರೆ. ಪ್ರತಿ ಗ್ರಾಮ ಪಂಚಾಯತ್​ನಲ್ಲಿ ಮದ್ಯದಂಗಡಿ ತೆರಯುತ್ತಿದ್ದಾರೆ. ಹೇಳುವುದಕ್ಕಷ್ಟೇ ಶಾಂತಿ, ಮಾಡುವುದೆಲ್ಲಾ ಇಂತಹ ಕ್ರಿಯೆ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್​ ವಿರುದ್ಧ ನಳಿನ್ ಕುಮಾರ್ ಕಟೀಲ್​ ಕಿಡಿ

ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಸರ್ಕಾರ ಬಂದಾಗಲೇ ಮತಾಂಧ ಶಕ್ತಿಗಳು ಎಚ್ಚೆತ್ತು ಕೊಳ್ಳುತ್ತವೆ. ಪಾಕಿಸ್ತಾನದ ಪರ ಘೋಷಣೆ, ಧ್ವಜ ಹಾರಾಟ ನಡೆಯುತ್ತದೆ. ಭಯೋತ್ಪಾದಕ ಚಟುವಟಿಕೆಗಳಿಗೆ ಪ್ರೇರಣೆ ಕೊಡುವ ಕೆಲಸ ನಡೆದಿದೆ. ಅವತ್ತೂ ಯಾವುದೇ ರೀತಿಯ ಕಠಿಣ ಕ್ರಮ ಕೈಗೊಳ್ಳದೇ ಇರುವ ಕಾರಣಕ್ಕೆ ಈಗ ಅಶಾಂತಿ ಸೃಷ್ಟಿಯಾಗಲು ಕಾರಣವಾಗಿದೆ. ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಮತಾಂದ ಶಕ್ತಿಗಳಿಗೆ ಶಕ್ತಿ ಹೆಚ್ಚಾಗಿದೆ ಎಂದು ಕಿಡಿಕಾರಿದ್ದಾರೆ.

ಈದ್ ಮಿಲಾದ್​ನ ಸಂದರ್ಭದಲ್ಲಿ ಕೆಲವೊಂದು ಮತಾಂದ ಶಕ್ತಿಗಳು ಹಿಂದೂ ಸಮಾಜದ ಮೇಲೆ ದಾಳಿ ಮಾಡಿದ್ದನ್ನು ನಾನು‌ ಖಂಡಿಸ್ತೇನೆ. ಶಿವಮೊಗ್ಗದಲ್ಲಿ ಆರಂಭಗೊಂಡಿದೆ, ಇದು ರಾಜ್ಯಕ್ಕೆ ವಿಸ್ತರಿಸದಂತೆ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ನಾನು ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.

ಹಿಂದುಗಳನ್ನು ಟಾರ್ಗೆಟ್​ ಮಾಡಿದ್ದಾರೆ: ಶಾಸಕ ಚನ್ನಬಸಪ್ಪ

ಶಿವಮೊಗ್ಗದಲ್ಲಿ ಶಾಸಕ ಚನ್ನಬಸಪ್ಪ ಪ್ರತಿಕ್ರಿಯೆ ನೀಡಿದ್ದು, ಉದ್ದೇಶ ಪೂರ್ವಕ ಕೃತ್ಯ ನಡೆದಿದೆ. ಹಿಂದುಗಳನ್ನು ಟಾರ್ಗೆಟ್​ ಮಾಡಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ ಅಗತ್ಯ ಇದೆ. ಸಂತ್ರಸ್ತರು ನೊಂದುಕೊಂಡು ಸಮಸ್ಯೆ ಹೇಳಿದ್ದಾರೆ. ಪೊಲೀಸರು ಸೂಕ್ತ ಕ್ರಮ ಅಗತ್ಯ ಇದೆ. ಒಂದು ಗುಂಪು ಬಂದು ದಾಳಿ ಮಾಡಿದೆ. ಬಿಗಿ ಕ್ರಮದ ಅಗತ್ಯ ಇದೆ.

ಇದನ್ನೂ ಓದಿ: ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ: ಉದ್ವಿಗ್ನಗೊಂಡಿದ್ದ ಶಿವಮೊಗ್ಗ ಈಗ ಹೇಗಿದೆ?

ಗಲಾಟೆಗೆ ಅವರ ಮಾನಸಿಕತೆ ಕಾರಣವಾಗಿದೆ. ಇದಕ್ಕೆ ಹೊರಗಿನ ಶಕ್ತಿಯ ಕೈವಾಡ ಇದೆ. ಸ್ಥಳೀಯರು ಅವರಿಗೆ ಸಹಕಾರ ನೀಡುತ್ತಿದ್ದಾರೆ. ಹೊರಗಿನವರು ಬಂದು ಇಲ್ಲಿ ಆಟ ಆಡುತ್ತಿದ್ದಾರೆ. ಅವರ ಜೊತೆ ಸ್ಥಳೀಯರು ಕೈಜೋಡಿಸಬಾರದು. ಶಿವಮೊಗ್ಗದಲ್ಲಿ ಅಶಾಂತಿ ಸೃಷ್ಟ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಕಲ್ಲು ತೂರಾಟದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ಈಶ್ವರಪ್ಪ

ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ಭೇಟಿ ನೀಡುವ ಮೂಲಕ ಕಲ್ಲು ತೂರಾಟದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ್ದಾರೆ. ನಿನ್ನೆ ರಾತ್ರಿ ನಡೆದಿದ್ದ ಕಲ್ಲು ತೂರಾಟದಲ್ಲಿ 7 ಜನ ಗಾಯಗೊಂಡಿದ್ದರು. ರೋಹನ್, ಧನಂಜಯ್, ಮಾರುತಿ, ಪ್ರದೀಪ್, ಕಿರಣ್, ಭರತ್, ಶಾಂತಮ್ಮಗೆ ಮೆಗ್ಗಾನ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್