AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈದ್​​ಮಿಲಾದ್​​: ಸೋಮವಾರ ಬೆಂಗಳೂರಿನ ಹಲವು ರಸ್ತೆಗಳಲ್ಲಿ ವಾಹನ ಸಂಚಾರ ಬಂದ್​​​, ಪಾರ್ಕಿಂಗ್​ ನಿಷೇಧ

ಈದ್​ಮಿಲಾದ್ ಹಬ್ಬದಂದು ಮೆರವಣಿಗೆಗಳು ನಡೆಯುವುದರಿಂದ ಬೆಂಗಳೂರಿನ ಹಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ವಾಹನ ಸವಾರರಿಗೆ ಬೆಂಗಳೂರು ನಗರ ಸಂಚಾರಿ ಪೊಲೀಸರು ಬದಲಿ ಮಾರ್ಗ ಸೂಚಿಸಿದ್ದಾರೆ. ಯಾವ್ಯಾವ ರಸ್ತೆ ಬಂದ್​ ಆಗಲಿವೆ ಇಲ್ಲಿದೆ ಮಾಹಿತಿ

ಈದ್​​ಮಿಲಾದ್​​: ಸೋಮವಾರ ಬೆಂಗಳೂರಿನ ಹಲವು ರಸ್ತೆಗಳಲ್ಲಿ ವಾಹನ ಸಂಚಾರ ಬಂದ್​​​, ಪಾರ್ಕಿಂಗ್​ ನಿಷೇಧ
ಈದ್​ ಮಿಲಾದ್​ ಟ್ರಾಫಿಕ್​ ಗೈಡ್​​ಲೈನ್ಸ್​​
ರಾಚಪ್ಪಾಜಿ ನಾಯ್ಕ್
| Edited By: |

Updated on:Sep 13, 2024 | 1:25 PM

Share

ಬೆಂಗಳೂರು, ಸೆಪ್ಟೆಂಬರ್​ 13: ಈದ್​ಮಿಲಾದ್ (Eid Milad) ಹಬ್ಬದಂದು ನೃಪತುಂಗ ರಸ್ತೆಯಲ್ಲಿನ ವಾಯ್​​​.ಎಮ್​​.ಸಿ.ಎ ಮೈದಾನಕ್ಕೆ ಸಾವಿರಾರು ಜನರು ಅಲಂಕೃತ ವಾಹನ ಹಾಗೂ ಮೆರವಣಿಗೆ ಮೂಲಕ ನಗರದ ವಿವಿಧ ಸ್ಥಳಗಳಿಂದ ಬಂದು ಸೇರಲಿದ್ದಾರೆ. ಸುಗಮ ಸಂಚಾರದ ಹಿತದೃಷ್ಟಿಯಿಂದ ಈ ಕೆಳಕಂಡಂತೆ ಸಂಚಾರ ಮಾರ್ಪಾಡುಗಳನ್ನು ಮಾಡಲಾಗಿದೆ ಎಂದು ಬೆಂಗಳೂರು ನಗರ ಸಂಚಾರಿ ಪೊಲೀಸರು (Bengaluru Traffic Police) ಮಾರ್ಗಸೂಚಿ ಹೊರಡಿಸಿದ್ದಾರೆ.

ಈದ್-ಮಿಲಾದ್ ಮೆರವಣಿಗೆ ಮಾರ್ಗಗಳು

  • ಜಿ.ಸಿ ನಗರ ದರ್ಗಾದಿಂದ ಹೊರಟು ಶಿವಾಜಿನಗರ ಕಂಟೋನ್ ಮೆಂಟ್ ಕಡೆಗೆ ಸಾಗುವುದು.
  • ಯಲಹಂಕ ಓಲ್ಡ್ ಟೌನ್ ಮಸೀದಿಯಿಂದ ಯಲಹಂಕ ಓಲ್ಡ್ ಟೌನ್ ಮಸೀದಿಯವರೆಗೆ
  • ಹಳೇ ಬಸ್ ನಿಲ್ದಾಣದಿಂದ ಸಣ್ಣ ಅಮಾನಿಕೆರೆಯವರೆಗೆ
  • ಬೆಳ್ಳಳ್ಳಿ ಕ್ರಾಸ್ ನಿಂದ ನಾಗವಾರ ಸಿಗ್ನಲ್​ವರೆಗೆ
  • ರಾಜಗೋಪಾಲನಗರ ಮುಖ್ಯರಸ್ತೆಯಿಂದ ಪೀಣ್ಯ 2ನೇ ಹಂತದವರೆಗೆ
  • ಸೌತ್ ಎಂಡ್ ಸರ್ಕಲ್ ನಿಂದ ಆರ್.ವಿ ರಸ್ತೆಯಲ್ಲಿ ಲಾಲ್‌ ಭಾಗ್ ವೆಸ್ಟ್ ಗೇಟ್ ಸರ್ಕಲ್​ವರೆಗೆ
  • ಗೀತಾ ಜಂಕ್ಷನ್​ (ಕೂಲ್​​ ಚಾಯಿಂಟ್​ ಜಂಕ್ಷನ್​​)ನಿಂದ ಸೌತ್​ಎಂಡ್​ ಸರ್ಕಲ್​
  • ಬೇಂದ್ರೆ ಜಂಕ್ಷನ್‌‌ ನಿಂದ ಓಬಳಪ್ಪ ಗಾರ್ಡನ್ ಜಂಕ್ಷನ್
  • ಮಹಾಲಿಂಗೇಶ್ವರ ಬಡಾವಣೆ ನಿಂದ ಆಡುಗೋಡಿ

ಈ ಮಾರ್ಗಗಳ ಮೂಲಕ ಎಲ್ಲ ಮೆರವಣಿಗಗಳು ವಾಯ್​.ಎಮ್​.ಸಿ.ಎ ಮೈದಾನಕ್ಕೆ ಬಂದು ಸೇರುತ್ತವೆ.

ಸಂಚಾರವನ್ನು ನಿರ್ಬಂಧಿಸಿರುವ ಮಾರ್ಗಗಳು

  • ನೇತಾಜಿ ಜಂಕ್ಷನ್​ನಿಂದ ಪಾಟರಿ ಸರ್ಕಲ್ ಮೂಲಕ ಟ್ಯಾನರಿ ರಸ್ತೆ ಕಡೆಗೆ ಸಂಚಾರವನ್ನು ನಿರ್ಬಂಧಿಸಲಾಗುತ್ತದೆ.
  • ಮಾಸ್ಕ್ ಜಂಕ್ಷನ್ ನಿಂದ ಎಂ.ಎಂ ರಸ್ತೆ ಮೂಲಕ ನೇತಾಜಿ ಜಂಕ್ಷನ್​ವರೆಗೆ ಎಂ.ಎಂ.ರಸ್ತೆ ರಸ್ತೆಯಲ್ಲಿ ದ್ವಿಮುಖ ಸಂಚಾರಕ್ಕೆ ಬದಲಾಗಿ ಏಕಮುಖ ಸಂಚಾರವನ್ನಾಗಿ ತಾತ್ಕಾಲಿಕವಾಗಿ ಮಾರ್ಪಾಡು ಮಾಡಲಾಗಿದ್ದು, ನೇತಾಜಿ ಜಂಕ್ಷನ್‌ನಿಂದ ಮಾಸ್ಕ್ ಜಂಕ್ಷನ್ ಕಡೆಗೆ ವಾಹನಗಳ ಸಂಚಾರಕ್ಕೆ ಅವಕಾಶವಿರುತ್ತದೆ.
  • ನೇತಾಜಿ ಜಂಕ್ಷನ್ ನಿಂದ ಹೇನ್ಸ್ ಜಂಕ್ಷನ್ ವರೆಗೆ ಹೇನ್ಸ್ ರಸ್ತೆಯಲ್ಲಿ ಸಂಚಾರವನ್ನು ನಿರ್ಬಂಧಿಸಲಾಗುತ್ತದೆ.
  • ನಾಗವಾರ ಜಂಕ್ಷನ್​ನಿಂದ ಪಾಟರಿ ಸರ್ಕಲ್ ರಸ್ತೆಯ ವರೆಗೆ ಭಾಗಶಃ ಸಂಚಾರವನ್ನು ನಿರ್ಬಂಧಿಸಲಾಗುತ್ತದೆ.

ಪರ್ಯಾಯ ಮಾರ್ಗಗಳು:

  • ಕೆ.ಆರ್ ಸರ್ಕಲ್‌ನಿಂದ ನೃಪತುಂಗ ರಸ್ತೆಯನ್ನು ಬಳಸಿ ಹಾದು ಹೋಗುವ ವಾಹನ ಚಾಲಕರು/ಸವಾರರು ಕೆ.ಆರ್ ವೃತ್ತದಲ್ಲಿ ಕಬ್ಬನ್ ಉದ್ಯಾನವನವನ್ನು ಪ್ರವೇಶಿಸಿ ಸಿದ್ದಲಿಂಗಯ್ಯ ವೃತ್ತದ ಕಡೆಗೆ ಅಥವಾ ಸೆಂಟ್ರಲ್ ಲೈಬ್ರರಿ ವೃತ್ತದ ಬಳಿ ಬಲ ತಿರುವು ಪಡೆದು ಏಕಮುಖ ಸಂಚಾರದ ವಿರುದ್ಧವಾಗಿ ಹಡ್ಸನ್​ ವೃತ್ತಕ್ಕೆ ಬಂದು ಮುಂದೆ ಹೋಗಬೇಕು.
  • ಸಿಟಿಮಾರ್ಕೆಟ್ ವೃತ್ತ ಮಾರ್ಗವಾಗಿ ಕೆಂಪೇಗೌಡ ಬಸ್ ನಿಲ್ದಾಣ ಕಡೆಗೆ ಸಂಚಾರಿಸುವ ಎಲ್ಲ ಮಾದರಿಯ ವಾಹನಗಳು ಜೆ.ಸಿ. ರಸ್ತೆ ಮೂಲಕ ಟೌನ್ ಹಾಲ್ ವೃತ್ತ – ಎನ್.ಆರ್.ವೃತ್ತ ಮಾರ್ಗವಾಗಿ ಕೆ.ಜಿ.ರಸ್ತೆಯಲ್ಲಿ ಚಲಿಸಿ ಕೆಂಪೇಗೌಡ ಬಸ್ ನಿಲ್ದಾಣ ತಲುಪಬಹುದು. ಹಾಗೂ ರಿಚ್ ಮಂಡ್ ರಸ್ತೆ ರೆಸಿಡೆನ್ಸಿ ರಸ್ತೆ ಕಡೆಗೆ ಹೋಗುವವರು ಪಿ.ಕೆ.ಬೇನ್ ಮತ್ತು ಓ.ಟಿ.ಸಿ. ರಸ್ತೆಯಲ್ಲಿ ಚಲಿಸಿ ಎನ್.ಆರ್.ವೃತ್ತದ ಮೂಲಕ ದೇವಾಂಗ ವೃತ್ತ, ವಿಷನ್ ರಸ್ತೆ ಮಾರ್ಗವಾಗಿ ಹೋಗಬಹುದಾಗಿದೆ.
  • ರಿಚ್​ಮಂಡ್ ರಸ್ತೆ ಕಡೆಯಿಂದ ಬರುವ ವಾಹನಗಳು ಆರ್.ಆರ್.ಎಂ.ಆರ್. ರಸ್ತೆ ಹಡ್ಸನ್​​ ವೃತ್ತ ಮೂಲಕ ಕೆ.ಜಿ.ರಸ್ತೆ ಕಡೆಗೆ ಹಾಗೂ ಎನ್.ಆರ್.ವೃತ್ತದ ಮೂಲಕ ಟೌನ್​​ಹಾಲ್​​ ಕಡೆಗೆ ಸಂಚರಿಸಬಹುದು.
  • ಪೊಲೀಸ್ ಕಾರ್ನರ್ ಕಡೆಯಿಂದ ಬರುವ ವಾಹನಗಳು ಹಡ್ಸನ್​ ವೃತ್ತದ ಮೂಲಕ ಕಬ್ಬನ್‌ಪಾರ್ಕ್ ಒಳಭಾಗ ಸಂಚರಿಸುವುದನ್ನು ನಿಷೇಧಿಸಿದ್ದು, ಸದರಿ ವಾಹನಗಳು ಕಸ್ತೂರಿಬಾ ರಸ್ತೆಯಲ್ಲಿ ಸಿದ್ದಲಿಂಗಯ್ಯ ವೃತ್ತದ ಕಡೆಗೆ ಸಂಚರಿಸಬಹುದಾಗಿದೆ.
  • ಮೈಸೂರು ರಸ್ತೆ ಸಿರ್ಸಿ ವೃತ್ತ ಸಿರ್ಸಿ ರಸ್ತೆ ಚಾಮರಾಜಪೇಟೆ 7ನೇ ಅಡ್ಡರಸ್ತೆ ಬಲ ತಿರುವು ಚಾಮರಾಜಪೇಟೆ 2, 3, 4 & 5ನೇ ಮುಖ್ಯರಸ್ತೆಯಲ್ಲಿ ಎಡತಿರುವು ಪಡೆದು ಸಿಟಿಮಾರುಕಟ್ಟೆ ಹಾಗು ಇತರೆ ಕಡೆಗೆ ಸಂಚರಿಸಬಹುದಾಗಿದೆ.
  • ನೇತಾಜಿ ರಸ್ತೆ ಕಡೆಯಿಂದ ಟ್ಯಾನರಿ ರಸ್ತೆ ಮೂಲಕ ನಾಗಾವರ ಕಡೆಗೆ ಹೋಗುವ ವಾಹನಗಳನ್ನು ಮಾರ್ಗ ಬದಲಾವಣೆ ಮಾಡಿದ್ದು, ನೇತಾಜಿ ಜಂಕ್ಷನ್​​ನಿಂದ  – ಬಲತಿರುವು – ಮಾಸ್ಕ್ ಜಂಕ್ಷನ್‌ನಲ್ಲಿ ಎಡತಿರುವು ಪಡೆದು ಕ್ಲಾರೆನ್ಸ್ ರೈಲ್ವೆ ಮೇಲ್ಲೇತುವೆಯಲ್ಲಿ ಪಾಟರಿ ರಸ್ತೆಗೆ ಬಲ ತಿರುವು ಪಡೆದು ಪಾಟರಿ ರಸ್ತೆ ಮತ್ತು ಹೆಣ್ಣೂರು ರಸ್ತೆ ಜಂಕ್ಷನ್ ನಲ್ಲಿ ಎಡ ತಿರುವು ಪಡೆದು ಹೆಣ್ಣೂರು ಮುಖ್ಯರಸ್ತೆ ಲಿಂಗರಾಜಪುರಂ ಪ್ರೈವರ್ ಮುಖೇನ ಹೆಣ್ಣೂರು, ಬಾಣಸವಾಡಿ ಹಾಗೂ ಹೊರ ವರ್ತುಲ ರಸ್ತೆ ಕಡೆಗೆ ಸಂಚರಿಸಲು ಅವಕಾಶ ಮಾಡಿಕೊಡಲಾಗುತ್ತದೆ.
  • ಮಾಸ್ಕ್ ಜಂಕ್ಷನ್‌ನಿಂದ ಎಂ.ಎಂ ರಸ್ತೆಯಲ್ಲಿ ನೇತಾಜಿ ಜಂಕ್ಷನ್ ಕಡೆಗೆ ಹೋಗುವ ವಾಹನಗಳನ್ನು ಮಾರ್ಗ ಬದಲಾವಣೆ ಮಾಡಿದ್ದು, ಮಾಸ್ಟ್ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಮಾಸ್ಕ್ ರಸ್ತೆ ಮೂಲಕ ಕೋಲ್ಡ್ ರಸ್ತೆ ತಲುಪಿ ಬಲತಿರುವು ಪಡೆದು ಕೋಲ್ಡ್ ರಸ್ತೆಯ ಹೆಚ್.ಪಿ ಪೆಟ್ರೋಲ್ ಬಂಕ್ ಹತ್ತಿರ ಸೌಂಡರ್ಸ್ ರಸ್ತೆಗೆ ಎಡತಿರುವು ಪಡೆದು ನೇರವಾಗಿ ಸೆಂಟ್ ಜಾನ್ಸ್ ಚರ್ಚ್ ರಸ್ತೆ ತಲುಪಿ ಕೋಲ್ಸ್ ಪಾರ್ಕ್ ಜಂಕ್ಷನ್​ನಲ್ಲಿ ಬಲತಿರುವು ಪಡೆದು ಸೆಂಟ್ ಜಾನ್ಸ್ ಚರ್ಚ್ ರಸ್ತೆ ಮೂಲಕ ಹೇನ್ಸ್ ಜಂಕ್ಷನ್ ತಲುಪಲು ಅವಕಾಶ ಮಾಡಿಕೊಡಲಾಗುತ್ತದೆ.
  • ನೇತಾಜಿ ಜಂಕ್ಷನ್‌ನಿಂದ ಹೇನ್ಸ್ ರಸ್ತೆಯಲ್ಲಿ ಹೇನ್ಸ್ ಜಂಕ್ಷನ್ ಕಡೆಗೆ ಹೋಗುವ ವಾಹನಗಳನ್ನು ಮಾರ್ಗ ಬದಲಾವಣೆ ಮಾಡಿದ್ದು, ನೇತಾಜಿ ಜಂಕ್ಷನ್‌ನಲ್ಲಿ ಎಡತಿರುವು ಪಡೆದು ಎಂ.ಎಂ ರಸ್ತೆ ಮೂಲಕ ಮಾಸ್ಕ್ ಜಂಕ್ಷನ್ ತಲುಪಿ ಬಲ ತಿರುವು ಪಡೆದು ಮಾಸ್ಕ್ ರಸ್ತೆ ಮೂಲಕ ಕೋಲ್ಡ್ ರಸ್ತೆ ತಲುಪಿ ಬಲತಿರುವು ಪಡೆದು ಕೋಲ್ಸ್ ರಸ್ತೆಯ ಹೆಚ್.ಪಿ ಪೆಟ್ರೋಲ್ ಬಂಕ್ ಹತ್ತಿರ ಸೌಂಡರ್ಸ್ ರಸ್ತೆಗೆ ಎಡತಿರುವು ಪಡೆದು ನೇರವಾಗಿ ಸೆಂಟ್ ಜಾನ್ಸ್ ಚರ್ಚ್ ರಸ್ತೆ ತಲುಪಿ ಕೋಲ್ಸ್ ಪಾರ್ಕ್ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು ಸೆಂಟ್ ಜಾನ್ಸ್ ಚರ್ಚ್ ರಸ್ತೆ ಮೂಲಕ ಹೇನ್ಸ್ ಜಂಕ್ಷನ್ ತಲುಪಲು ಅವಕಾಶ ಮಾಡಿಕೊಡಲಾಗುತ್ತದೆ.
  • ಥಣಿಸಂದ್ರ ಕಡೆಯಿಂದ ಶಿವಾಜಿನಗರ ಕಡೆಗೆ ಬರುವ ವಾಹನಗಳನ್ನು ಮಾರ್ಗ ಬದಲಾವಣೆ ಮಾಡಿ ನಾಗವಾರ ಜಂಕ್ಷನ್‌‌ನಿಂದ – ಎಡತಿರುವು – ಹೆಣ್ಣೂರು ಜಂಕ್ಷನ್ ಬಲತಿರುವು – ಸಿದ್ದಪ್ಪ ರೆಡ್ಡಿ ಜಂಕ್ಷನ್ – ಅಯೋದ್ಯ ಜಂಕ್ಷನ್ – ಲಿಂಗರಾಜಪುರಂ ಪ್ರೈ ಓವರ್‌ನಿಂದ – ಮಲಕೇಶಿನಗರ ಸಂಚಾರ ಠಾಣೆ ಕಡೆಯಿಂದ ಮಾರ್ಗ ಬದಲಾವಣೆ ಮಾಡಿ ರಾಬರ್ಟ್‌ನ್ ರಸ್ತೆ ಜಂಕ್ಷನ್ ನಲ್ಲಿ ಬಲತಿರುವು ಪಡೆದುಕೊಂಡು ಹೇನ್ಸ್ ರಸ್ತೆ ಮೂಲಕ ಶಿವಾಜಿನಗರ ತಲುಪುವುದು, ಹಾಗೂ ನಾಗವಾರ ಜಂಕ್ಷನ್ ನಿಂದ ಬಲತಿರುವು ಪಡೆದು ಹೆಬ್ಬಾಳ ಮುಖೇನ ನಗರಕ್ಕೆ ಸಂಚರಿಸಲು ಅವಕಾಶ ಮಾಡಿಕೊಡಲಾಗುತ್ತದೆ.
  • ಶಿವಾಜಿ ನಗರದ ಕಡೆಯಿಂದ ನಾಗವಾರ ಜಂಕರ್ ಕಡೆಗೆ ಬರುವ ವಾಹನಗಳನ್ನು ಮಲಕೇಶಿನಗರ ಸಂಚಾರ ಪೊಲೀಸ್ ಠಾಣೆಯವರು ಮಾರ್ಗ ಬದಲಾವಣೆ ಮಾಡಿ ಸ್ಪುರ್ ರಸ್ತೆಯಲ್ಲಿ ಕಡ್ಡಾಯವಾಗಿ ಬಲತಿರುವು ಪಡೆದುಕೊಂಡು ಸ್ಪೆನ್ಸರ್ ರಸ್ತೆ ಮೂಲಕ ಕೋಲ್ಡ್ ರಸ್ತೆ ತಮ್ಮ ಮೇಲರ್ ರಸ್ತೆ ಮೂಲಕ ಹೆಣ್ಣೂರು, ಬಾಣಸವಾಡಿ, ಹಲಸೂರು ಕಡೆ ಹೋಗಬಹು.
  • ಆರ್.ಟಿ.ನಗರ ದಿಂದ ಕಾವಲ್ ಬೈರಸಂದ್ರ ಮೂಲಕ ಬರುವ ವಾಹನಗಳನ್ನು ಪುಪ್ಪಾಂಜಲಿ ಟಾಕೀಸ್ಟ್ ಎಡ್ಡ ತಿರುವು ಪಡೆದು ವೀರಣ್ಣ ಪಾಳ್ಯ ಜಂಕ್ಷನ್ ಕಡೆಗೆ ಬಲ ತಿರುವು ಪಡೆದು ನಾಗವಾರ ಜಂಕ್ಷನ್ ರಸ್ತೆ ಗೆ ತಲುಪಬಹುದಾಗಿರುತ್ತದೆ.

ಇದನ್ನೂ ಓದಿ: ಈದ್​ಮಿಲಾದ್​ನಲ್ಲಿ ಡಿಜೆ ಬಳಸದಂತೆ, ಹರಿತವಾದ ಆಯುಧ ಇಟ್ಟುಕೊಳ್ಳದಂತೆ ಸೂಚನೆ

ವಾಹನ ನಿಲುಗಡೆ ನಿರ್ಬಂಧಿಸಿರುವ ರಸ್ತೆಗಳು

  1. ನೃಪತುಂಗ ರಸ್ತೆ, ಕೆ.ಆರ್ ವೃತ್ತದಿಂದ ಪೊಲೀಸ್ ಕಾರ್ನರ್​ವರೆಗೆ
  2. ಕೆ.ಜಿ.ರಸ್ತೆ, ಪೊಲೀಸ್ ಕಾರ್ನರ್​ನಿಂದ ಮೈಸೂರು ಬ್ಯಾಂಕ್ ವೃತ್ತದವರೆಗೆ
  3. ಎನ್​.ಆರ್​.ರಸ್ತೆ ಟೌನ್​ಹಾಲ್​ ಜಂಕ್ಷನ್​​ನಿಂದ ಪೊಲೀಸ್​ ಕಾರ್ನರ್​ವರೆಗೆ
  4. ಪಿ.ಕಾಳಿಂಗರಾವ್ ರಸ್ತೆ, ಎನ್.ಆರ್ ಜಂಕ್ಷನ್ ನಿಂದ ಸುಬ್ಬಯ್ಯ ವೃತ್ತದವರೆಗೆ
  5. ಕಸ್ತೂರಿಬಾ ರಸ್ತೆ, ಹಲ್ಸನ್ ವೃತ್ತದಿಂದ ಸಿದ್ದಲಿಂಗಯ್ಯ ವೃತ್ತದ ವರೆಗೆ ಹಾಗೂ ಸಿದ್ದಲಿಂಗಯ್ಯ ವೃತ್ತದಿಂದ ಕ್ಲೀನ್ಸ್ ವೃತ್ತದವರೆಗೆ
  6. ಮಲ್ಯ ಆಸ್ಪತ್ರೆ ರಸ್ತೆ, ಸಿದ್ದಲಿಂಗಯ್ಯ ವೃತ್ತದಿಂದ ಆರ್.ಆರ್.ಎಂ.ಆರ್. ಜಂಕ್ಷನ್ ವರೆಗೆ
  7. ಆರ್.ಆರ್.ಎಂ.ಆರ್ ರಸ್ತೆ, ರಿಚ್ಮಂಡ್ ವ್ಯಸ್ತದಿಂದ ಹನ್ಸನ್ ವೃತ್ತದ ವರೆಗೆ
  8. ಎಂ.ಜಿ.ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಕ್ಲೀನ್ಸ್ ವೃತ್ತದ ವರೆಗೆ
  9. ಸೆಂಟ್ರಲ್​​ ಸ್ಟ್ರೀಟ್​​, ಅನಿಲ್​ ಕುಂಬ್ಳೆ ವೃತ್ತದಿಂದ ಬಿಆರ್​ವಿ ಜಂಕ್ಷನ್​ವರೆಗೆ.‘
  10. ಕ್ವಿನ್ಸ್ ರಸ್ತೆ, ಬಾಳೇಕುಂದ್ರಿ ವೃತ್ತದಿಂದ ಕ್ಲೀನ್ಸ್ ವೃತ್ತದವರೆಗೆ
  11. ಡಾ: ಬಿ.ಆರ್.ಅಂಬೇಡ್ಕರ್ ರಸ್ತೆ, ಕೆ.ಆರ್.ವೃತ್ತದಿಂದ ಬಾಳೇಕುಂದ್ರಿ ವೃತ್ತದವರೆಗೆ
  12. ಶೇಷಾದ್ರಿ ರಸ್ತೆ, ಮಹಾರಾಣಿ ವೃತ್ತದಿಂದ ಕೆ.ಆರ್.ವೃತ್ತದವರೆಗೆ
  13. ಹಳೇ ಅಂಚೆ ಕಚೇರಿ ಮೈಸೂರು ಬ್ಯಾಂಕ್ ವೃತ್ತದಿಂದ ಕೆ.ಆರ್.ವೃತ್ತದ ವರೆಗೆ
  14. ಕಬ್ಬನ್ ಉದ್ಯಾನವನದ ಓಳ ಅವರಣ
  15. ನೇತಾಜಿ ರಸ್ತೆ, ಹೇನ್ಸ್ ರಸ್ತೆ, ಎಂ.ಎಂ ರಸ್ತೆ, ಮಾಸ್ಕ್ ರಸ್ತೆ, ಕೋಲ್ಸ್ ರಸ್ತೆ, ಸೌಂಡರ್ಸ್ ರಸ್ತೆ, ಸೆಂಟ್ ಜಾನ್ಸ್ ಚರ್ಚ್ ರಸ್ತೆ ಹಾಗೂ ಮಿಲ್ಲರ್ ರಸ್ತೆ ಎಕ್ಸ್‌ ಟೆಂಕ್ಷನ್ ನಲ್ಲಿ ಎರಡೂ ಬದಿಯಲ್ಲಿ ಎಲ್ಲಾ ರೀತಿಯ ವಾಹನಗಳ ಪಾರ್ಕಿಂಗ್ ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
  16. ಪಾಟರಿ ಸರ್ಕಲ್​ನಿಂದ ನಾಗವಾರ ಸಿಗ್ನಲ್ ವರೆಗೆ ಎರಡು ಬದಿಯಲ್ಲಿ ವಾಹನಗಳ ಪಾರ್ಕಿಂಗ್ ನಿಷೇಧ ಮಾಡಲಾಗಿದೆ.
  17. ಗೋವಿಂದಪುರ ಜಂಕ್ಷನ್‌ನಿಂದ ಗೋವಿಂದಮರ ಕಾ. & ಸು. ಪೊಲೀಸ್ ಠಾಣೆಯವರೆಗೆ ಎರಡು ಬದಿಯಲ್ಲಿ ಪಾರ್ಕಿಂಗ್ ನಿಷೇದ ಮಾಡಲಾಗಿರುತ್ತದೆ.
  18. ಹೆಚ್.ಬಿ.ಆರ್ ಬಡಾವಣೆಯ ಸಿದ್ದಪ್ಪ ರೆಡ್ಡಿ ಜಂಕ್ಷನ್ ನಿಂದ ನರೇಂದ್ರ ಟೆಂಟ್ ಜಂಕ್ಷನ್ ವರೆಗೆ ಎರಡು ಬದಿಯಲ್ಲಿ ಪಾರ್ಕಿಂಗ್ ನಿಷೇದ ಮಾಡಿಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:16 pm, Fri, 13 September 24