ಬೆಂಗಳೂರಿನಲ್ಲಿ ಶಿಕ್ಷಕಿ ಬೈದಿದ್ದಕ್ಕೆ ನೊಂದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು, ಶಾಲೆ ಮುಂದೆ ಪೋಷಕರ ಪ್ರತಿಭಟನೆ

ನಿನ್ನೆ ಸಂಜೆ ಧೀರಜ್ ಪೋಷಕರು ಸ್ಕೂಲ್ಗೆ ಬಂದು ಮಗ ಮಾಡಿದ್ದ ತಪ್ಪಿಗೆ ಅಪೋಲಜಿ ಲೆಟರ್ ಬರೆದುಕೊಟ್ಟ ಹೋಗಿದ್ದರು. ಇದಾದ ಬಳಿಕ ಧೀರಜ್ನನ್ನು ಮನೆಗೆ ಕಳಿಸದೆ ಅವನ ಸ್ನೇಹಿತರ ಮುಂದೆ ಅವಮಾನ ಮಾಡಿದ್ದರಂತೆ. ಇದರಿಂದ ನೊಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಬೆಂಗಳೂರಿನಲ್ಲಿ ಶಿಕ್ಷಕಿ ಬೈದಿದ್ದಕ್ಕೆ ನೊಂದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು, ಶಾಲೆ ಮುಂದೆ ಪೋಷಕರ ಪ್ರತಿಭಟನೆ
ಧೀರಜ್
Follow us
TV9 Web
| Updated By: ಆಯೇಷಾ ಬಾನು

Updated on:Mar 24, 2022 | 5:43 PM

ಬೆಂಗಳೂರು: ಶಿಕ್ಷಕಿ ಬೈದಿದ್ದಕ್ಕೆ ನೊಂದು ವಿದ್ಯಾರ್ಥಿ ಆತ್ಮಹತ್ಯೆ(Student Suicide) ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ. ಬೆಂಗಳೂರಿನ R.R.ನಗರದಲ್ಲಿರುವ ಸ್ವರ್ಗ ರಾಣಿ ಸ್ಕೂಲ್ನಲ್ಲಿ ಎಂಟನೇ ತರಗತಿ ಮುಖ್ಯ ಪರೀಕ್ಷೆ ನಡೆಯುತ್ತಿದ್ದ ವೇಳೆ 8ನೇ ತರಗತಿಯ ವಿದ್ಯಾರ್ಥಿ ಧೀರಜ್ ಕಾಪಿ ಹೊಡೆಯುತ್ತಿದ್ದ ಅಂತ ಟೀಚರ್ ಪ್ರಿನ್ಸಿಪಾಲ್ ರೂಮ್ಗೆ ಕರೆದುಕೊಂಡು ಹೋಗಿ ಧೀರಜ್ ಪೋಷಕರನ್ನು ಶಾಲೆಗೆ ಕರೆಸಿ ಈ ಬಗ್ಗೆ ತಿಳಿಸಿದ್ದಾರೆ. ಹೀಗಾಗಿ ಮನ ನೊಂದ ವಿದ್ಯಾರ್ಥಿ ಮನೆಯಲ್ಲಿ ನಿನ್ನೆ ಸಂಜೆ ನೇಣಿಗೆ ಶರಣಾಗಿದ್ದಾನೆ. ಸ್ವರ್ಗ ರಾಣಿ ಶಾಲೆಯ ಮುಂದೆ ಪೋಷಕರು ಪ್ರತಿಭಟನೆ ನಡೆಸಿದ್ದಾರೆ.

ನಿನ್ನೆ ಸಂಜೆ ಧೀರಜ್ ಪೋಷಕರು ಸ್ಕೂಲ್ಗೆ ಬಂದು ಮಗ ಮಾಡಿದ್ದ ತಪ್ಪಿಗೆ ಅಪೋಲಜಿ ಲೆಟರ್ ಬರೆದುಕೊಟ್ಟ ಹೋಗಿದ್ದರು. ಇದಾದ ಬಳಿಕ ಧೀರಜ್ನನ್ನು ಮನೆಗೆ ಕಳಿಸದೆ ಅವನ ಸ್ನೇಹಿತರ ಮುಂದೆ ಅವಮಾನ ಮಾಡಿದ್ದರಂತೆ. ಇದರಿಂದ ನೊಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಸದ್ಯ ಇತರೆ ವಿದ್ಯಾರ್ಥಿಗಳ ಪೋಷಕರು ಶಾಲೆಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದು ಶಾಲಾ ಆಡಳಿತ ಮಂಡಳಿ ಬಂದು ನಿನ್ನೆ ಏನಾಯ್ತು? ಯಾಕೆ ಧೀರಜ್ ಆತ್ಮಹತ್ಯೆ ಮಾಡಿಕೊಂಡ ಎಂಬ ಬಗ್ಗೆ ಮಾಹಿತಿ ನೀಡಬೇಕು ಇಲ್ಲಾಂದ್ರೆ ನಾವು ಇಲ್ಲಿಂದ ಹೋಗಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಧೀರಜ್ ಪೋಷಕರು ನಾವು ಇದರಲ್ಲಿ ಭಾಗಿಯಾಗಲ್ಲ ಎಂದು ಆರ್.ಆರ್. ನಗರದ ಮನೆಯಲ್ಲಿ ಉಳಿದುಕೊಂಡಿದ್ದಾರೆ. ಧೀರಜ್ ಮೃತದೇಹ ಮನೆಯಲ್ಲಿ ಇಡಲಾಗಿದೆ.

ಕ್ಯಾಂಟರ್ ಹಾಗು ದ್ವಿಚಕ್ರ ವಾಹನ ನಡುವೆ ಅಪಘಾತ ಕ್ಯಾಂಟರ್ ಹಾಗೂ ದ್ವಿಚಕ್ರ ವಾಹನದ ಮಧ್ಯೆ ಡಿಕ್ಕಿ ಸಂಭವಿಸಿದ್ದು ಸವಾರ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕಾಡುಬೀಸನಹಳ್ಳಿ ಬಳಿ ನಡೆದಿದೆ. ಕ್ಯಾಂಟರ್‌ ಟೈರ್‌ಗೆ ಸಿಲುಕಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿದ್ದಾರೆ. ಕೇರಳ ಮೂಲದ ಜೋಸೆಫ್ ಮೃತ ದುರ್ದೈವಿ. ಓಲ್ಡ್ ಏರ್‌ಪೋರ್ಟ್ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲು.

ವಿಡಿಯೋ ಮಾಡುತ್ತ ಅಜ್ಜಿ ಮೇಲೆ ಕಾರು ಹತ್ತಿಸಿದ ಚಾಲಕ ವಿಡಿಯೋ ಕಾಲ್​ನಲ್ಲಿ ಮಾತನಾಡುತ್ತ ರಿವರ್ಸ್ ಬಂದು ಅಜ್ಜಿ ಮೇಲೆ ಚಾಲಕ ಕಾರು ಹತ್ತಿಸಿದ ಘಟನೆ ಎಲೆಕ್ಟ್ರಾನಿಕ್ ಸಿಟಿಯ ರಾಯದ್ರದಲ್ಲಿ ನಿನ್ನೆ ನಡೆದಿದೆ. 75 ವರ್ಷದ ವೃದ್ಧೆ ದೇವಮ್ಮ ಮೇಲೆ ಹಿಂಬದಿಯಿಂದ ಚಾಲಕ ಕಾರು ಹತ್ತಿಸಿದ್ದಾನೆ. ಜನ ರಕ್ಷಣೆಗೆ ಓಡಿಬರೋದನ್ನ ಗಮನಿಸಿ ಕಾರ್ ಕೆಳಗೆ ಸಿಲುಕಿದ್ದ ಅಜ್ಜಿ ಮೇಲೆ ಮತ್ತೊಮ್ಮೆ ಕಾರ್ ಹತ್ತಿಸಿಕೊಂಡೇ ಎಸ್ಕೇಪ್ ಆಗಿದ್ದಾನೆ. ವೃದ್ದೆ ದೇವಮ್ಮ ಸ್ಥಿತಿ ಚಿಂತಾಜನಕವಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸರು ಚಾಲಕ ಮತ್ತು ಕಾರನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಫೋಟೋದಲ್ಲಿರುವ ಪುಟಾಣಿಯನ್ನು ಗುರುತಿಸಬಲ್ಲಿರಾ?

Realme GT Neo 3: 5 ನಿಮಿಷದಲ್ಲಿ 50% ಚಾರ್ಜ್: 150W ಫಾಸ್ಟ್ ಚಾರ್ಜರ್​​ನ ಹೊಸ ರಿಯಲ್ ಮಿ ಫೋನ್ ಬಿಡುಗಡೆ

Published On - 2:56 pm, Thu, 24 March 22

ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ