AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮನಕಲಕುವ ಘಟನೆ: ಪುತ್ರ ವೃದ್ಧಾಶ್ರಮ ಸೇರಿಸಿದ್ದಕ್ಕೆ ನೊಂದು ವೃದ್ಧ ದಂಪತಿ ಆತ್ಮಹತ್ಯೆ

ಹೆತ್ತವರು ಮಕ್ಕಳ ಮೇಲೆ ಸಾಕಷ್ಟು ಕನಸು ಕಂಡಿರುತ್ತಾರೆ. ಮುಪ್ಪಿನ ಕಾಲದಲ್ಲಿ ಮಕ್ಕಳು ನಮ್ಮನ್ನು ನೋಡಿಕೊಳ್ಳುತ್ತಾರೆ ಅಂತ ತಂದೆ, ತಾಯಿ ಅಂದುಕೊಂಡಿರುತ್ತಾರೆ. ಆದರೆ, ಕೆಲ ಮಕ್ಕಳು ಮಾತ್ರ ತಂದೆ, ತಾಯಿನ್ನು ವೃದ್ಧಾಶ್ರಮಕ್ಕೆ ಸೇರಿಸುತ್ತಾರೆ. ಈ ಘಟನೆಯಲ್ಲಿ ವೃದ್ಧಾಶ್ರಮಕ್ಕೆ ಸೇರಿದ ದಂಪತಿ ಬಾರದ ಲೋಕಕ್ಕೆ ತೆರಳಿದ್ದಾರೆ. ಏನಾಯ್ತು ವೃದ್ಧ ದಂಪತಿಗೆ?

ಬೆಂಗಳೂರಿನಲ್ಲಿ ಮನಕಲಕುವ ಘಟನೆ: ಪುತ್ರ ವೃದ್ಧಾಶ್ರಮ ಸೇರಿಸಿದ್ದಕ್ಕೆ ನೊಂದು ವೃದ್ಧ ದಂಪತಿ ಆತ್ಮಹತ್ಯೆ
ಮೃತ ವೃದ್ಧ ದಂಪತಿ
ವಿವೇಕ ಬಿರಾದಾರ
|

Updated on:Jun 25, 2025 | 9:40 PM

Share

ಬೆಂಗಳೂರು, ಜೂನ್​ 25: ತಂದೆ, ತಾಯಿ ಮಕ್ಕಳಿಗೆ ಕೈತುತ್ತು ನೀಡಿ, ಸಾಕಿ ಸಲುಹಿ ದೊಡ್ಡವರನ್ನಾಗಿ ಮಾಡುತ್ತಾರೆ. ಎದೆ ಎತ್ತರಕ್ಕೆ ಬೆಳೆದು ನಿಂತ ಮಕ್ಕಳು ಮುಪ್ಪಿನ ಕಾಲದಲ್ಲಿ ನಮ್ಮನ್ನು ನೋಡಿಕೊಳ್ಳುತ್ತಾರೆ ಅಂತ ತಂದೆ, ತಾಯಿ ಅಂದುಕೊಂಡಿರುತ್ತಾರೆ. ಆದರೆ, ಕೆಲ ಮಕ್ಕಳು ವೃದ್ಧ ತಂದೆ, ತಾಯಿಯನ್ನು ನೋಡಿಕೊಳ್ಳುವ ಬದಲಿಗೆ ವೃದ್ಧಾಶ್ರಮಕ್ಕೆ (Old Age Home) ಸೇರಿಸುತ್ತಾರೆ. ಪುತ್ರ ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ಮನನೊಂದ ವೃದ್ಧ ದಂಪತಿ (Couple) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Benagluru) ಜೆ.ಪಿ.ನಗರದ 8ನೇ ಹಂತದಲ್ಲಿ ನಡೆದಿದೆ. ಕೃಷ್ಣಮೂರ್ತಿ (81 ವರ್ಷ), ರಾಧಾ (74 ವರ್ಷ) ಮೃತ ದಂಪತಿಗಳು.

ಸೊಸೆ ಮಾಡಿದ ಅಡುಗೆ ಇಷ್ಟವಿಲ್ಲ, ಹೊಂದಾಣಿಕೆಯಾಗದ ಕಾರಣ ಬೇರ ಮನೆ ಮಾಡಿಕೊಡುವಂತೆ ಮಗನಿಗೆ ತಂದೆ, ತಾಯಿ ಕೇಳಿದ್ದರು. ಆದರೆ, ಪುತ್ರ 2021ರಲ್ಲಿ ತಂದೆ, ತಾಯಿಯನ್ನು ಬ್ಯಾಟರಾಯನಪುರದ ವೃದ್ಧಾಶ್ರಮಕ್ಕೆ ಸೇರಿಸಿದ್ದನು. 2023ರಲ್ಲಿ ತಂದೆ, ತಾಯಿಯನ್ನು ವಾಪಸ್ ಮನೆಗೆ ಕರೆದುಕೊಂಡು ಬಂದಿದ್ದನು. ವೃದ್ಧಾಶ್ರಮದಿಂದ ವಾಪಸ್​ ಬಂದ ನಂತರ ವೃದ್ಧ ದಂಪತಿಗೆ ಮನೆಯಲ್ಲಿ ಹೊಂದಾಣಿಕೆಯಾಗಿರಲಿಲ್ಲ. ಹೀಗಾಗಿ, ಕಳೆದ ತಿಂಗಳು ಮತ್ತೆ ಬನಶಂಕರಿ ನಗರದಲ್ಲಿರುವ ವೃದ್ಧಾಶ್ರಮಕ್ಕೆ ತಂದೆ, ತಾಯಿಯನ್ನು ಪುತ್ರ ಸೇರಿಸಿದ್ದನು.

ಇದನ್ನೂ ಓದಿ: ಅಯ್ಯೋ ವಿಧಿಯೇ..ಸಮವಸ್ತ್ರ ಧರಿಸದೇ ಶಾಲೆಗೆ ಹೋದ್ರೆ ಬೈಯುತ್ತಾರೆಂದು ಜೀವ ಕಳೆದುಕೊಂಡ ವಿದ್ಯಾರ್ಥಿನಿ

ಇದನ್ನೂ ಓದಿ
Image
ಯುವಕನ ಹಿಂದೆ ಬಿದ್ದ ಎರಡು ಮಕ್ಕಳ ತಾಯಿ: ಲಾಂಗ್​ ಡ್ರೈವ್ ಕೊಲೆ ರಹಸ್ಯ ಬಯಲು!
Image
ಬಾತ್‌ರೂಮಲ್ಲೇ ವ್ಯಕ್ತಿಯ ಬರ್ಬರ ಹತ್ಯೆ, ಜಾಲಿ ಜಾಲಿ ಎಂದವರು ಜೈಲಿಗೆ
Image
79 ವರ್ಷ ವಯಸ್ಸಲ್ಲೂ ಸ್ವಾವಲಂಬಿ ಜೀವನ ನಡೆಸುತ್ತಿರುವ ಅಜ್ಜಿ
Image
ಸರ್ಕಾರದ ಸವಲತ್ತುಗಳನ್ನು ನಮ್ಮವರೆಗೆ ತಲುಪಿಸಿ ಸಾಕು: ಜಂಬುಲಿಂಗ, ರೈತ

ಆದರೆ, ವೃದ್ಧ ದಂಪತಿ ಮೊನ್ನೆ ಬೆಳಿಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆ ಪೊಲೀಸರು ಅಸ್ವಾಭಾವಿಕ ಸಾವು (UDR) ಎಂದು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಆದರೆ, ಟಿವಿ ನೋಡುವ ವಿಚಾರಕ್ಕೆ ಇಬ್ಬರ ನಡುವೆ ಮನಸ್ತಾಪ ಉಂಟಾಗಿತ್ತು ಎಂದು ವೃದ್ಧಾಶ್ರಮದ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಸೊಸೆ ಟ್ರೈನಿಂಗ್​ಗೆ ಹೋದ ಮೇಲೆ ಮನೆಗೆ ಹೋಗಲು ನಿರ್ಧರಿಸಿದ್ದ ದಂಪತಿ

ಪ್ರಕರಣ ಸಂಬಂಧ ವೃದ್ದಾಶ್ರಮದ ಮೇಲ್ವಿಚಾರಕಿ ಶೋಭಾ ಮಾತನಾಡು, ಮೇ 15 ರಂದು ಅವರ ಮಗ ವಿಜಯ್ ಎಂಬುವರು ಆಶ್ರಮಕ್ಕೆ ಸೇರಿಸಿದರು. ಆಶ್ರಮಕ್ಕೆ ಬಂದ ದಿನವೇ ಅವರನ್ನು ನಾವು ಕೌನ್ಸಲಿಂಗ್ ಮಾಡಿದ್ವಿ. ಆದರೂ, ಅವರು ಇಲ್ಲೇ ಇರುತ್ತೇವೆ ಅಂತ ಒಪ್ಪಿಕೊಂಡರು. ಇನ್ನೊಂದು ತಿಂಗಳಲ್ಲಿ ಮನೆಗೆ ವಾಪಸ್ ಹೋಗುವುದಾಗಿ ಹೇಳಿದ್ದರು. ಸೊಸೆ ಟ್ರೈನಿಂಗ್​ಗೆ ಹೋಗುತ್ತಾಳೆ ಆಗ ವಾಪಸ್ ಹೋಗುತ್ತೇವೆ ಅಂದಿದ್ದರು ಎಂದು ತಿಳಿಸಿದರು.

ಸೋಮವಾರ ಸಂಜೆ ರಾಧ ಮತ್ತು ಕೃಷ್ಣಕುಮಾರ್ ಒಟ್ಟಿಗೆ ಟಿವಿ ನೋಡುತ್ತಿದ್ದರು. ಈ ವೇಳೆ ರಾಧ ಅವರಿಗೆ ಸಿರಿಯಲ್ ನೋಡಬೇಕಿತ್ತು, ಕೃಷ್ಣಕುಮಾರ್ ಅವರಿಗೆ ದೇವರ ಗೀತೆಗಳು ನೋಡಬೇಕಿತ್ತು. ಈ ವಿಚಾರಕ್ಕೆ ಇಬ್ಬರ ನಡುವೆ ಮನಸ್ತಾಪ ಆಗಿತ್ತು. ನಂತರ ಇಬ್ಬರು ರೂಮ್​ಗೆ ಹೋಗಿದ್ದರು. ಮಂಗಳವಾರ ಬೆಳಿಗ್ಗೆ ತಿಂಡಿ ಕೊಡಲು  ಹೋದ ವೇಳೆ ಬಾಗಿಲು ತೆರೆಯಲಿಲ್ಲ. ನಮ್ಮ ಸಿಬ್ಬಂದಿ ಬಾಗಿಲು ತೆರೆದ ವೇಳೆ ಇಬ್ಬರು ನೇಣಿಗೆ ಶರಣಾಗಿರುವುದು ಗೊತ್ತಾಗಿದೆ ಎಂದರು.

ವರದಿ: ಪ್ರದೀಪ್ ಚಿಕ್ಕಾಟಿ, ಟಿವಿ9 ಬೆಂಗಳೂರು 

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:56 pm, Wed, 25 June 25

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!