ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ​; ಸಚಿವ ಜಮೀರ್ ವಿರುದ್ಧದ ಕೇಸ್​ಗೆ ಹೈಕೋರ್ಟ್​ ತಡೆ

ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ವಿರುದ್ಧ ನವಲಗುಂದ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಇದೀಗ ಈ ಕೇಸ್​ಗೆ ಹೈಕೋರ್ಟ್(High Court) ಏಕಸದಸ್ಯ ಪೀಠ ಮಧ್ಯಂತರ ಆದೇಶ ಹೊರಡಿಸಿದೆ.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ​; ಸಚಿವ ಜಮೀರ್ ವಿರುದ್ಧದ ಕೇಸ್​ಗೆ ಹೈಕೋರ್ಟ್​ ತಡೆ
ಸಚಿವ ಜಮೀರ್ ಅಹ್ಮದ್ ಖಾನ್
Follow us
Ramesha M
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 26, 2024 | 3:21 PM

ಬೆಂಗಳೂರು, ಜು.26: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ವಿರುದ್ಧದ ಕೇಸ್​ಗೆ ಹೈಕೋರ್ಟ್(High Court) ಏಕಸದಸ್ಯ ಪೀಠ ಮಧ್ಯಂತರ ಆದೇಶ ಹೊರಡಿಸಿದೆ. ಇನ್ನು ಕಳೆದ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ನವಲಗುಂದ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಜಮೀರ್ ವಿರುದ್ದದ ಚುನಾವಣಾ ತಕರಾರು ಅರ್ಜಿ ವಜಾಗೊಳಿಸಿದ್ದ ಹೈಕೋರ್ಟ್

ಇತ್ತೀಚೆಗೆ ಸಚಿವ ಜಮೀರ್ ಅಹ್ಮದ್​ ಖಾನ್ ವಿರುದ್ಧ ಸಲ್ಲಿಸಲಾಗಿದ್ದ ಚುನಾವಣಾ ತಕರಾರು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತ್ತು. ಜಮೀರ್ ಆಯ್ಕೆ ಪ್ರಶ್ನಿಸಿ ಅದೇ ಕ್ಷೇತ್ರದ ಮತದಾರರೊಬ್ಬರು ಅರ್ಜಿ ಸಲ್ಲಿಸಿದ್ದರು. ಅದನ್ನು  ಪರಿಶೀಲಿಸಿದ ನ್ಯಾಯಮೂರ್ತಿ.ಎಂ.ಐ.ಅರುಣ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿತ್ತು.

ಇದನ್ನೂ ಓದಿ:ಜಮೀರ್ ಅಹ್ಮದ್​​ ಖಾನ್​ಗೆ ವಿರುದ್ಧದ ಚುನಾವಣಾ ತಕರಾರು ಅರ್ಜಿ ವಜಾ

ಇನ್ನು ನ್ಯಾಯಾಲಯ ಸುಪ್ರೀಂಕೋರ್ಟ್​ನ ತೀರ್ಪು ಉಲ್ಲೇಖಿಸಿ “ಪ್ರಣಾಳಿಕೆಯಲ್ಲಿನ ಉಚಿತ ಕೊಡುಗೆಗಳಿಂದ ಮತದಾರರ ಮೇಲೆ ಪ್ರಭಾವ ಬೀರಬಹುದು. ಉಚಿತ ಕೊಡುಗೆಗಳಿಂದ ಪಕ್ಷಗಳ ನಡುವೆ ಸಮಾನತೆ ಇರುವುದಿಲ್ಲ. ಚುನಾವಣಾ ಆಯೋಗ ಈ ಬಗ್ಗೆ ಮಾರ್ಗಸೂಚಿ ರೂಪಿಸಬೇಕು. ಈ ಬಗ್ಗೆ ಸೂಕ್ತ ಶಾಸನ ರೂಪಿಸಬೇಕು ಎಂದು ಸುಪ್ರೀಂಕೋರ್ಟ್ ಸರ್ಕಾರಕ್ಕೆ ​ಸೂಚಿಸಿದೆ ಎಂದು ಹೈಕೋರ್ಟ್, ​ಸುಪ್ರೀಂಕೋರ್ಟ್ ತೀರ್ಪು ಉಲ್ಲೇಖಿಸಿ, ಆದೇಶ ಹೊರಡಿಸಿತ್ತು. ಇದೀಗ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ​ಕ್ಕೂ ತಡೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:15 pm, Fri, 26 July 24

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?