ಬೆಂಗಳೂರು ವೋಟರ್ ಐಡಿ ಅಕ್ರಮ ಪ್ರಕರಣದ ತನಿಖೆಗಾಗಿ 7 IAS ಅಧಿಕಾರಿಗಳನ್ನು ನೇಮಿಸಿದ ಕೇಂದ್ರ ಚುನಾವಣೆ ಆಯೋಗ

ಬೆಂಗಳೂರಿನಲ್ಲಿ ನಡೆದ ವೋಟರ್ ಐಡಿ ಪರಿಷ್ಕರಣೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣೆ ಆಯೋಗ ಇಬ್ಬರು ಐಎಎಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದು, ತನಿಖೆಗಾಗಿ ಏಳು ಐಎಎಸ್ ಅಧಿಕಾರಿಗಳ‌ನ್ನ ನೇಮಕ ಮಾಡಿದೆ.

ಬೆಂಗಳೂರು ವೋಟರ್ ಐಡಿ ಅಕ್ರಮ ಪ್ರಕರಣದ ತನಿಖೆಗಾಗಿ 7 IAS ಅಧಿಕಾರಿಗಳನ್ನು ನೇಮಿಸಿದ ಕೇಂದ್ರ ಚುನಾವಣೆ ಆಯೋಗ
ಚುನಾವಣಾ ಆಯೋಗ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Nov 25, 2022 | 10:13 PM

ನವದೆಹಲಿ/ಬೆಂಗಳೂರು:  ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌ ಸಿಕ್ಕಿದ್ದು, ಪ್ರಕರಣದಲ್ಲಿ ಐಎಎಸ್‌ ಅಧಿಕಾರಿಗಳೂ ಭಾಗಿಯಾಗಿರುವುದು ದೃಢವಾಗಿದೆ. ಕೇವಲ ಕೆಳಹಂತದ ಅಧಿಕಾರಿಗಳು ಭಾಗಿಯಾಗಿದ್ರು ಎನ್ನಲಾಗುತ್ತಿತ್ತು. ಆದ್ರೆ ಇಬ್ಬರು ಐಎಎಸ್‌ ಅಧಿಕಾರಿಗಳಾದ ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಭಾಗಿಯಾಗಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಈ ಇಬ್ಬರನ್ನು ಕೇಂದ್ರ ಚುನಾವಣೆ ಆಯೋಗ ಅಮಾನತು ಮಾಡಿದ್ದು,  ವೋಟರ್ ಐಡಿ ಅಕ್ರಮದ ಬಗ್ಗೆ ತನಿಖೆಗಾಗಿ ಏಳು ಜನ ಐಎಎಸ್ ಅಧಿಕಾರಿಗಳ‌ನ್ನು ನೇಮಿಸಿದೆ.

ವೋಟರ್ ಐಡಿ ಅಕ್ರಮ: ಬಿಬಿಎಂಪಿ ವಿಶೇಷ ಆಯುಕ್ತ, ಬೆಂಗಳೂರು DC ಸಸ್ಪೆಂಡ್ ಮಾಡಿ ತನಿಖೆಗೆ ಆದೇಶಿಸಿದ ಕೇಂದ್ರ ಚುನಾವಣೆ ಆಯೋಗ

ಮತದಾರ ಪಟ್ಟಿಯಿಂದ ತೆಗೆದು ಹಾಕಿರುವುದು, ಸೇರ್ಪಡೆ, ತಿದ್ದುಪಡಿ ಬಗ್ಗೆ ಪೂರ್ಣಪರಿಶೀಲನೆ ಎಂದು ಏಳು ಜನ ಐಎಎಸ್ ಅಧಿಕಾರಿಗಳ‌ನ್ನು ನೇಮಕ ಮಾಡಿ ಕೇಂದ್ರ ಚುನಾವಣಾ ಆಯೋಗದಿಂದ ಆದೇಶ ಹೊರಡಿಸಿದೆ. ಅದರಲ್ಲೂ ಚಿಕ್ಕಪೇಟೆ, ಶಿವಾಜಿನಗರ, ಮಹಾದೇವಪುರ ವಲಯದಲ್ಲಿ ವಿಶೇಷವಾಗಿ ಪರಿಶೀಲನೆ ಮಾಡಲು ಸೂಚನೆ ನೀಡಿದೆ.

ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ತನಿಖೆಗೆ ಐಎಎಸ್ ಅಧಿಕಾರಿ ವಿಶಾಲ್ ಅವರನ್ನು ನೇಮಕ ಮಾಡಲಾಗಿದೆ. ಮಹಾದೇವಪುರ ವಲಯಕ್ಕೆ ಅಜೇಯ್ ನಾಗಭೂಷಣ್ ಹಾಗೂ ಶಿವಾಜಿನಗರ ಕ್ಷೇತ್ರಕ್ಕೆ ಪ್ರಿಯಾಂಕಾ ಮೇರಿ ಅವರನ್ನು ನೇಮಿಸಿದೆ.

ಖಾಸಗಿ ಸಂಸ್ಥೆಯಿಂದ ಮತದಾರರ ಮಾಹಿತಿ ಸಂಗ್ರಹಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿಯಿಂದ ಮತದಾರರ ಹೆಸರು ಡಿಲೀಟ್ ಆದವರ ಬಗ್ಗೆ ಕೂಲಂಕಷವಾಗಿ ಪರಿಶೀಲನೆಗೆ ಆದೇಶಿಸಿದ್ದು, ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ, ಹಾಗೂ ಬೆಂಗಳೂರು ಜಿಲ್ಲಾಧಿಕಾರಿ ಶ್ರೀನಿವಾಸ್ ಕೂಡಾ ಅಮಾನತು ಮಾಡಿದೆ. ಅಲ್ಲದೇ ಇಬ್ಬರು ಅಧಿಕಾರಿಗಳ ವಿರುದ್ಧ ತನಿಖೆಗೆ ಕೇಂದ್ರ ಚುನಾವಣಾ ಆಯೋಗ ಆದೇಶ ಮಾಡಿದೆ.

Published On - 9:41 pm, Fri, 25 November 22

ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್