Karnataka Assembly Election 2023: ಬೆಂಗಳೂರಿನಲ್ಲಿ 65% ಮತದಾನದ ಟಾರ್ಗೆಟ್ ನೀಡಿದ ಚುನಾವಣಾ ಆಯೋಗ

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರು ವ್ಯಾಪ್ತಿಯಲ್ಲಿ ಶೇ 65 ರಷ್ಟು ಮತದಾನವಾಗಬೇಕೆಂದು ಕೇಂದ್ರ ಚುನಾವಣಾ ಆಯೋಗ ಬೆಂಗಳೂರು ನಗರ ಜಿಲ್ಲಾಡಳಿತಕ್ಕೆ ಗುರಿ ನೀಡಿದೆ.

Karnataka Assembly Election 2023: ಬೆಂಗಳೂರಿನಲ್ಲಿ 65% ಮತದಾನದ ಟಾರ್ಗೆಟ್ ನೀಡಿದ ಚುನಾವಣಾ ಆಯೋಗ
ಸಾಂಧರ್ಬಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on: Mar 06, 2023 | 7:35 AM

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ (Karnataka Assembly Election) ಹತ್ತಿರವಾಗುತ್ತಿದೆ. ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬವಾದ ಮತದಾನಕ್ಕೆ ದಿನಗಣನೆ ಶುರುವಾಗಿದೆ. ಮತದಾನ ರಾಜಕೀಯ ನಾಯಕರ, ಪಕ್ಷದ ಮತ್ತು ದೇಶದ ಚಿತ್ರಣವನ್ನೇ ಬದಲಾಯಿಸುತ್ತದೆ. ಮತದಾನ ನಮ್ಮೆಲ್ಲರ ಕರ್ತವ್ಯವಾಗಿದೆ. ಈ ಹಿನ್ನೆಲೆ ಪ್ರತಿ ಚುನಾವಣೆಯಲ್ಲೂ, ಕೇಂದ್ರ ಚುನಾವಣಾ ಆಯೋಗ (Indian Election Commission) ಗರಿಷ್ಠ ಮತದಾನ ಆಗಬೇಕು ಎಂಬ ಗುರಿಯೊಂದಿಗೆ ಕಾರ್ಯನಿರ್ವಹಿಸುತ್ತದೆ. ಹೀಗೆ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರು ವ್ಯಾಪ್ತಿಯಲ್ಲಿ (Bengaluru) ಶೇ 65 ರಷ್ಟು ಮತದಾನವಾಗಬೇಕೆಂದು (65% Voting) ಕೇಂದ್ರ ಚುನಾವಣಾ ಆಯೋಗ ಗುರಿ ಇಟ್ಟುಕೊಂಡಿದೆ. ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲು ಬೆಂಗಳೂರು ನಗರ ಜಿಲ್ಲಾ ಮತ್ತು ಬೃಹತ್​ ಬೆಂಗಳೂರು ಮಹಾನಗರ ಪಾಲಿಕ (BBMP)ಗೆ ಸೂಚನೆ ನೀಡಿದೆ.

ಈ ಗುರಿಯು ಬೆಂಗಳೂರು ನಗರ ಜಿಲ್ಲೆ ಮತ್ತು ಬಿಬಿಎಂಪಿ ವ್ಯಾಪ್ತಿಗೆ ಒಳಪಡುವ ಎಲ್ಲ ನಗರಗಳಿಗೆ ಅನ್ವಯವಾಗುತ್ತದೆ. 28 ವಿಧಾನಸಭಾ ಕ್ಷೇತ್ರಗಳಲ್ಲಿ ಆನೆಕಲ್​, ಬೆಂಗಳೂರು ದಕ್ಷಿಣ, ಯಶವಂತಪುರ, ದಾಸರಹಳ್ಳಿ, ಬ್ಯಾಟರಾಯನಪುರ, ಮಹದೇವಪುರ ಮತ್ತು ಯಲಹಂಕ ಜಿಲ್ಲಾಡಳಿತಕ್ಕೆ ಒಳಪಡುತ್ತವೆ. ಇನ್ನುಳಿದ ವಿಧಾನಸಭಾ ಕ್ಷೇತ್ರಗಳು ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುತ್ತವೆ ಎಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ತಿಳಿಸಿದ್ದಾರೆ.

ಕಳೆದ ಚುನಾವಣೆಗಳಲ್ಲಿ ಬೆಂಗಳೂರಲ್ಲಿ ಶೇ 50 ರಿಂದ 55 ರಷ್ಟು ಮತದಾನವಾಗಿತ್ತು. ಎಂದಿಗೂ ಶೇ 60 ಕ್ಕಿಂತ ಹೆಚ್ಚಿನ ಮತದಾನವಾಗಿಲ್ಲ. ಬೆಂಗಳೂರಲ್ಲಿನ 90 ಲಕ್ಷ ಮತದಾರರಲ್ಲಿ 32 ಲಕ್ಷ ಮತದಾರರು ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುತ್ತಾರೆ. ಕಳೆದ ಬಾರಿ 2018ರ ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿ ಶೇ 54.1 ರಷ್ಟು ಮತದಾನವಾಗಿತ್ತು. ಬೆಂಗಳೂರು ನಗರ ಜಿಲ್ಲೆಯೊಂದರಲ್ಲೇ ಶೇ 57.8 ರಷ್ಟು ಮತದಾನವಾಗಿತ್ತು. ಇನ್ನು ದಾಸರಹಳ್ಳಿಯಲ್ಲಿ ಶೇ 48 ರಷ್ಟು ಮಾತ್ರ ಮತದಾನವಾಗಿತ್ತು ಎಂದು ಹೇಳಿದ್ದಾರೆ. ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಭಾರತದಲ್ಲೆ ಅತಿ ದೊಡ್ಡದಾದ ವಿಧಾನಸಭಾ ಕ್ಷೇತ್ರವಾಗಿದೆ. ಸಾಮಾನ್ಯವಾಗಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 2-3 ಲಕ್ಷ ಮತದಾರರಿರುತ್ತಾರೆ. ಆದರ ಬೆಂಗಳೂರು ದಕ್ಷಿಣ ಒಂದರಲ್ಲೆ 6.5 ಲಕ್ಷ ಮತದಾರರಿದ್ದಾರೆ. ಅಲ್ಲದೆ ಬೇರೆ ವಿಧಾನಸಭಾ ಕ್ಷೇತ್ರದಲ್ಲು 3-4 ಲಕ್ಷ ಮತದಾರರಿದ್ದಾರೆ ಎಂದು ತಿಳಿಸಿದರು.

ಇನ್ನು ಕಡಿಮೆ ಮತದಾನಕ್ಕೆ ಕಾರಣ ನೋಡುವುದಾದರೇ, ಕಡಿಮೆ ಮತದಾನವಾಗಿರುವ ವಿಧಾನಸಭಾ ಕ್ಷೇತ್ರಗಳನ್ನು ವಿಶ್ಲೇಷಿಸಿದಾಗ ವಾರಾಂತ್ಯದ ರಜೆಯ ನಂತರ ಮತದಾರರು ತಮ್ಮ ಊರುಗಳಿಗೆ ಹೋಗುವುದು. ಒಂದು ಮತದಿಂದ ಯಾವುದೇ ಬದಲಾವಣೆಯಾಗುವುದಿಲ್ಲ ಎಂಬ ನಕಾರಾತ್ಮಕ ಮನಸ್ಥಿತಿ ಮತ್ತು ಮತದಾನ ಪಟ್ಟಿಯಲ್ಲಿನ ದೋಷಗಳು ಕಡಿಮೆ ಮತದಾನಕ್ಕೆ ಕಾರಣವಾಗಿದೆ. ಈ ಎಲ್ಲ ಸಮಸ್ಯೆಗಳಿಂದ ಮತದಾನ ಪ್ರಕ್ರಿಯೆಯಿಂದ ಮತದಾರರು ಹಿಂದುಳಿಯುತ್ತಿದ್ದಾರೆ. ಆದರೆ ಈಗ ನಾವು ಈ ಸಮಸ್ಯೆಗಳನ್ನು ಪರಿಹರಿಸಿದ್ದೇವೆ ಎಂದು ತಿಳಿಸಿದ್ದಾರೆ.

ರೌಡಿ ಶೀಟರ್‌ಗಳಿಗೆ ಖಡಕ್​ ಎಚ್ಚರಿಕೆ

ಸಮಾಜ ವಿರೋಧಿ ಚಟುವಟಿಕೆಗಳು ಅಥವಾ ಅಪರಾಧ ಹಿನ್ನೆಲೆಯುಳ್ಳವರ ಚಟುವಟಿಕೆಗಳ ಮೇಲೆ ಜಿಲ್ಲಾಡಳಿತ ಕಣ್ಣಿಟ್ಟಿದೆ. ಪೊಲೀಸ್ ವರದಿಯ ಆಧಾರದ ಮೇಲೆ ನಾವು ಈಗಾಗಲೇ ಮೂವರು ರೌಡಿ ಶೀಟರ್‌ಗಳನ್ನು ಜೈಲಿಗೆ ಕಳುಹಿಸಿದ್ದೇವೆ. 10 ರೌಡಿ ಶೀಟರ್‌ಗಳಿಗೆ ನೋಟಿಸ್ ನೀಡಿದ್ದೇವೆ. ಪೊಲೀಸರ ಶಿಫಾರಸಿನ ಆಧಾರದ ಮೇಲೆ ರೌಡಿಶೀಟರ್​ಗಳಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡುತ್ತೇವೆ. ವಿಚಾರಣೆಯಲ್ಲಿ, ಚುನಾವಣಾ ಪ್ರಕ್ರಿಯೆಗೆ ಅಡ್ಡಿಪಡಿಸಲು ಯೋಜಿಸುತ್ತಿದ್ದಾರೆ ಎಂದು ಸಾಬೀತಾದರೆ ಅವರನ್ನು ಬಂಧಿಸಿ ಕಸ್ಟಡಿಗೆ ತೆಗೆದುಕೊಳ್ಳಲಾಗುವುದು ಮಾಹಿತಿ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್