Karnataka Bypolls 2021: ಉಪಚುನಾವಣಾ ಪ್ರಚಾರಕ್ಕೆ ಸಮಯ, ಅಭ್ಯರ್ಥಿಗಳ ಚುನಾವಣಾ ವೆಚ್ಚ ನಿಗದಿಗೊಳಿಸಿ ಆದೇಶ

Karnataka Byelection: ಚುನಾವಣಾ ಅಭ್ಯರ್ಥಿಗಳ ಚುನಾವಣಾ ವೆಚ್ಚ 30,80,000 ರೂಪಾಯಿ ಎಂದು ನಿಗದಿಪಡಿಸಲಾಗಿದೆ. ಚುನಾವಣಾ ವೆಚ್ಚ ಮಿತಿಗೊಳಿಸಿ ಆಯೋಗದಿಂದ ಆದೇಶ ಹೊರಡಿಸಲಾಗಿದೆ.

Karnataka Bypolls 2021: ಉಪಚುನಾವಣಾ ಪ್ರಚಾರಕ್ಕೆ ಸಮಯ, ಅಭ್ಯರ್ಥಿಗಳ ಚುನಾವಣಾ ವೆಚ್ಚ ನಿಗದಿಗೊಳಿಸಿ ಆದೇಶ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on: Oct 07, 2021 | 6:25 PM

ಬೆಂಗಳೂರು: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಾದ ಸಿಂದಗಿ ಹಾಗೂ ಹಾನಗಲ್​ನಲ್ಲಿ ನಡೆಯಲಿರುವ ಉಪಚುನಾವಣೆಗೆ ಈಗಾಗಲೇ ದಿನಾಂಕ ನಿರ್ಣಯವಾಗಿದೆ. ಅಭ್ಯರ್ಥಿಗಳ ಘೋಷಣೆ ಹಾಗೂ ನಾಮಪತ್ರ ಸಲ್ಲಿಕೆ ನಡೆಯುತ್ತಿರುವ ಬೆನ್ನಲ್ಲೇ ಚುನಾವಣಾ ಕಣ ರಂಗೇರಿದೆ. ಅಕ್ಟೋಬರ್ 30 ರಂದು ನಡೆಯಲಿರುವ ಸಿಂದಗಿ, ಹಾನಗಲ್ ಕ್ಷೇತ್ರಗಳ ಉಪಚುನಾವಣೆ ಪ್ರಚಾರ ಸಂಬಂಧಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಅದರಂತೆ, ಉಪಚುನಾವಣಾ ಪ್ರಚಾರಕ್ಕೆ ಸಮಯ ಮಿತಿಗೊಳಿಸಲಾಗಿದೆ.

ಕೇಂದ್ರ ಚುನಾವಣಾ ಆಯೋಗದಿಂದ ಉಪಚುನಾವಣಾ ಪ್ರಚಾರಕ್ಕೆ ಸಮಯ ನಿಗದಿ ಮಾಡಲಾಗಿದೆ. ಸಂಜೆ 7 ರಿಂದ ಬೆಳಗ್ಗೆ 10 ರವರೆಗೆ ಪ್ರಚಾರ ನಡೆಸುವಂತಿಲ್ಲ ಎಂದು ಆದೇಶಿಸಲಾಗಿದೆ. ಕೊರೊನಾ ವೈರಸ್​ ಹರಡುವ ಭೀತಿಯಿಂದ ಈ ನಿರ್ಬಂಧ ಹೇರಲಾಗಿದೆ. ಅಷ್ಟೇ ಅಲ್ಲದೆ, ಚುನಾವಣಾ ಅಭ್ಯರ್ಥಿಗಳ ಚುನಾವಣಾ ವೆಚ್ಚ 30,80,000 ರೂಪಾಯಿ ಎಂದು ನಿಗದಿಪಡಿಸಲಾಗಿದೆ. ಚುನಾವಣಾ ವೆಚ್ಚ ಮಿತಿಗೊಳಿಸಿ ಆಯೋಗದಿಂದ ಆದೇಶ ಹೊರಡಿಸಲಾಗಿದೆ.

ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ಹಾನಗಲ್ ಹಾಗೂ ಸಿಂದಗಿ ಪಟ್ಟಣಗಳಲ್ಲಿ ಅಕ್ಟೋಬರ್ 30 ರಂದು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಹಾವೇರಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಇಂದು (ಅಕ್ಟೋಬರ್ 7) ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಹಾನಗಲ್ ಪಟ್ಟಣದ ತಹಶೀಲ್ದಾರ್​​ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಲಾಗಿದೆ. ಸಿಂದಗಿ ಉಪ‌ಚುನಾವಣೆ ಹಿನ್ನಲೆ ಕಾಂಗ್ರೆಸ್ ಅಭ್ಗರ್ಥಿ ಅಶೋಕ ಮನಗೂಳಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇಂದು ಪ್ರತ್ಯೇಕ ಎರಡು ನಾಮಪತ್ರ ಸಲ್ಲಿಸಿದ ಅಶೋಕ ಮನಗೂಳಿ, ಚುನಾವಣಾಧಿಕಾರಿ ರಾಹುಲ್ ಶಿಂಧೆಗೆ ನಾಮಪತ್ರ ನೀಡಿದ್ದಾರೆ. ನಾಳೆ ಕಾಂಗ್ರೆಸ್ ನಾಯಕರೊಂದಿಗೆ ಅಶೋಕ ಮನಗೂಳಿ ನಾಮಪತ್ರ ಸಲ್ಲಿಸಲಿದ್ದಾರೆ.

ಹಾವೇರಿ ಜಿಲ್ಲೆ ಹಾನಗಲ್ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ‌ ನಿಯಾಜ್ ಶೇಖ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಿಖಿಲ್ ಕುಮಾರಸ್ವಾಮಿ ಮತ್ತು ಮಾಜಿ ಶಾಸಕ ಎನ್.ಎಚ್. ಕೋನರೆಡ್ಡಿ ಜೊತೆ ಆಗಮಿಸಿ ನಿಯಾಜ್ ಶೇಖ ನಾಮಪತ್ರ ಸಲ್ಲಿಸಿದ್ದಾರೆ. ಹಾನಗಲ್ ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಲಾಗಿದೆ. ಇತ್ತ ಸಿಂದಗಿ ಜೆಡಿಎಸ್ ಅಭ್ಯರ್ಥಿ ನಾಝಿಯಾ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಸಿಂದಗಿ ಚುನಾವಣಾಧಿಕಾರಿ ರಾಹುಲ್‌ಗೆ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಮಾಜಿ ಸಿಎಂ ಹೆಚ್.​ಡಿ. ಕುಮಾರಸ್ವಾಮಿ ಉಪಸ್ಥಿತರಿದ್ದರು.

ಹಾನಗಲ್ ಬಿಜೆಪಿ ಟಿಕೆಟ್ ಶಿವರಾಜ ಸಜ್ಜನರಿಗೆ ನೀಡಿದ್ದಕ್ಕೆ ಕಾರ್ಯಕರ್ತರ ಆಕ್ರೋಶ ಮಾಜಿ ಶಾಸಕ ಶಿವರಾಜ ಸಜ್ಜನರಗೆ ಬಿಜೆಪಿ ಟಿಕೆಟ್ ಘೋಷಣೆ ಆಗ್ತಿದ್ದಂತೆ ಬಿಜೆಪಿ ಕಾರ್ಯಕರ್ತರ ಆಕ್ರೋಶ ವ್ಯಕ್ತವಾಗಿದೆ. ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಶಿವರಾಜ ಸಜ್ಜನರ ಹೆಸರು ಘೋಷಣೆ ಆಗಿದ್ದಕ್ಕೆ ಬಿಜೆಪಿ ಕಾರ್ಯಕರ್ತರ ಆಕ್ಷೇಪ ಕೇಳಿಬಂದಿದೆ. ಬ್ಯಾಡಾ‌ ಬ್ಯಾಡಾ ಸಜ್ಜನ ಬ್ಯಾಡಾ ಎಂದು ಘೋಷಣೆ ಕೂಗಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದ ಉದಾಸಿ ಕಲ್ಯಾಣ ಮಂಟಪದ‌ ಮುಂಭಾಗದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಬಿಜೆಪಿ ಕಾರ್ಯಕರ್ತರು ಟೈರ್​ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೇವತಿ ಉದಾಸಿ ಪರವಾಗಿ ಘೋಷಣೆ ಕೂಗಿ ಶಿವರಾಜ ಸಜ್ಜನ ವಿರುದ್ಧ ಘೋಷಣೆ ಕೂಗಿದ್ದಾರೆ.

ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ಜೋರಾಗಿದೆ. ಸಂಸದ ಶಿವಕುಮಾರ ಉದಾಸಿ ಅಭಿಮಾನಿ ಕುಮಾರೇಶ್ವರ ಮಠದ ಮುಂದೆ ಅರೆಬೆತ್ತಲಾಗಿ ದೀಡ್ ನಮಸ್ಕಾರ ಹಾಕಿದ್ದಾರೆ. ಬಿಜೆಪಿ ಕಾರ್ಯಕರ್ತರು, ಬಿಜೆಪಿ ಕಚೇರಿ ಮುಂದೆಯೂ ಟೈರ್ ಸುಟ್ಟು ಬಿಜೆಪಿ ಹೈಕಮಾಂಡ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಕಾರ್ಯಕರ್ತರು, ದಿವಂಗತ ಸಿ.ಎಂ. ಉದಾಸಿ ಸಮಾಧಿ ಮುಂದೆ ಧರಣಿ ಮಾಡಿದ್ದಾರೆ. ಉದಾಸಿ ಸಮಾಧಿ ಮುಂದೆ ಉದಾಸಿ ಕುಟುಂಬದ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಮೌನ ಪ್ರತಿಭಟನೆ ಮಾಡಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪ, ವಿಜಯೇಂದ್ರ ಆಪ್ತರ ವಿರುದ್ಧ ಶಾಸಕ ಯತ್ನಾಳ್ ಐಟಿ ದಾಳಿ ಮಾಡಿಸಿದ್ದಾರಾ ಹೇಗೆ: ಹೆಚ್​ಡಿ ಕುಮಾರಸ್ವಾಮಿ ಪ್ರಶ್ನೆ

ಇದನ್ನೂ ಓದಿ: Karnataka Bypolls 2021: ಹಾನಗಲ್ ಉಪಚುನಾವಣೆ: ಮೂರೂ ಪಕ್ಷಗಳಲ್ಲಿ ಸಿದ್ಧತೆ ಚುರುಕು, ತ್ರಿಕೋನ ಸ್ಪರ್ಧೆ ನಿರೀಕ್ಷಿತ

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ