AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಚುನಾವಣಾ ಆಯೋಗದಿಂದ ಚುನಾವಣೆ ಘೋಷಣೆ: ಮೇ 20ರಂದು ಮತದಾನ, ಮೇ 22ರಂದು ಫಲಿತಾಂಶ

ಆನೇಕಲ್ ಪುರಸಭೆಯ ಮೂರು ಸ್ಥಾ‌ನಗಳಾದ ಚನ್ನಗಿರಿ, ಹೊಳೆನರಸೀಪುರ, ಜೇವರ್ಗಿ ಮತ್ತು ಸಂಕೇಶ್ವರ ಪುರಸಭೆಗಳ ತಲಾ 1 ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆ ಮಾಡಲಾಗಿದೆ. ಮೇ 20ರಂದು ಮತದಾನ ನಡೆಯಲಿದ್ದು, ಮೇ 22 ರಂದು ಫಲಿತಾಂಶ ಪ್ರಕಟವಾಗಲಿದೆ. 

ರಾಜ್ಯ ಚುನಾವಣಾ ಆಯೋಗದಿಂದ ಚುನಾವಣೆ ಘೋಷಣೆ: ಮೇ 20ರಂದು ಮತದಾನ, ಮೇ 22ರಂದು ಫಲಿತಾಂಶ
ಸಾಂದರ್ಭಿಕ ಚಿತ್ರ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Apr 29, 2022 | 9:14 PM

Share

ಬೆಂಗಳೂರು: ರಾಜ್ಯ ಚುನಾವಣಾ ಆಯೋಗದಿಂದ ಚುನಾವಣೆ (Election) ಘೋಷಣೆ ಮಾಡಿದ್ದು, ತುಮಕೂರು ಜಿಲ್ಲೆಯ ಶಿರಾ ನಗರಸಭೆ, ದಾವಣಗೆರೆ ಮಹಾನಗರ ಪಾಲಿಕೆಯ 2 ವಾರ್ಡ್​ಗಳಿಗೆ, ಬಸವಕಲ್ಯಾಣ ನಗರಸಭೆಯ 1 ಸ್ಥಾ‌ನಕ್ಕೆ, ಆನೇಕಲ್ ಪುರಸಭೆಯ ಮೂರು ಸ್ಥಾ‌ನಗಳಾದ ಚನ್ನಗಿರಿ, ಹೊಳೆನರಸೀಪುರ, ಜೇವರ್ಗಿ ಮತ್ತು ಸಂಕೇಶ್ವರ ಪುರಸಭೆಗಳ ತಲಾ 1 ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆ ಮಾಡಲಾಗಿದೆ. ಮೇ 20ರಂದು ಮತದಾನ ನಡೆಯಲಿದ್ದು, ಮೇ 22 ರಂದು ಫಲಿತಾಂಶ ಪ್ರಕಟವಾಗಲಿದೆ.

ಚುನಾವಣಾ ವರ್ಷ ಆರಂಭಗೊಳ್ಳುತ್ತಿದ್ದಂತೆಯೇ ಎಲ್ಲ ಪಕ್ಷಗಳ ನಾಯಕರು ಅಭಿವೃದ್ಧಿ ಕಾರ್ಯಗಳತ್ತ ಗಮನಹರಿಸಿದ್ದಾರೆ!

ಬೆಂಗಳೂರು:  ಕರ್ನಾಟಕ ವಿಧಾನ ಸಭೆ ಚುನಾವಣೆಗೆ ಇನ್ನೂ ಒಂದು ವರ್ಷವಿರುವಾಗಲೇ ರಾಜಕೀಯ ಪಕ್ಷಗಳು ಮತದಾರನ್ನು ಓಲೈಸುವ ಸರ್ಕಸ್ ಶುರುವಿಟ್ಟುಕೊಂಡಿವೆ. ಕಳೆದ ನಾಲ್ಕು ವರ್ಷಗಳಿಂದ ಕೋವಿಡ್ ಸೇರಿದಂತೆ ನಾನಾ ಕಾರಣಗಳಿಗೆ ಸ್ಥಗಿತಗೊಂಡಿದ್ದ ಅಥವಾ ಆರಂಭವೇಗೊಂಡಿರದ ಅಭಿವೃದ್ಧಿ ಕಾಮಗಾರಿಗಳು ಚುನಾವಣಾ ವರ್ಷದಲ್ಲಿ ಆರಂಭಗೊಳ್ಳುತ್ತಿರುವುದು ಆಶ್ಚರ್ಯವನ್ನೇನೂ ಹುಟ್ಟಿಸುವುದಿಲ್ಲ. ಈ ವಿಡಿಯೋನಲ್ಲಿ ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಬೆಂಗಳೂರು ನಗರ ಪುಲಿಕೇಶಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ಮುಸ್ಲಿಂ ಸಮುದಾಯದ ಜನರಿಗೆ ಆಹಾರ ಸಾಮಗ್ರಿಗಳನ್ನೊಳಗೊಂಡ ಕಿಟ್ ವಿತರಿಸುತ್ತಿರುವುದು ನಿಮಗೆ ಕಾಣುತ್ತದೆ. ಮುಸ್ಲಿಮರ ಪವಿತ್ರ ರಂಜಾನ್ ಹಬ್ಬ ಕೇವಲ ಒಂದು ವಾರ ದೂರ ಇರುವುದರಿಂದ ಈ ಕಿಟ್ ಗಳು ಬಡಜನರಿಗೆ ಬಹಳ ನೆರವಾಗಲಿವೆ.

ಹಾಗೆ ನೋಡಿದರೆ, ಮುಸ್ಲಿಮೇತರ ಕುಟುಂಬಗಳು ಸಹ ಕಿಟ್ ಗಳನ್ನು ಪಡೆಯುತ್ತಿರುವುದು ವಿಡಿಯೋನಲ್ಲಿ ಕಾಣುತ್ತದೆ. ಬಡವರು ಯಾವ ಸಮುದಾಯವದರಾದರೇನು ಬಡವರೇ. ನಮಗೆ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಪುಲಿಕೇಶಿನಗರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಸಹ ಸಿದ್ದರಾಮಯ್ಯ ಹಾಗೂ ಶ್ರೀನಿವಾಸಮೂರ್ತಿ ಬುಧವಾರ ಉದ್ಘಾಟಿಸಿದರು.

ಅದನ್ನೇ ನಾವು ಹೇಳಿದ್ದು, ಪಕ್ಷ ಯಾವುದಾದರು ಆಗಿರಲಿ ಅಭಿವೃದ್ಧಿ ಕಾಮಗಾರಿಗಳು ಚುನಾವಣಾ ವರ್ಷದಲ್ಲೇ ಜಾಸ್ತಿ ನಡೆಯುತ್ತವೆ! ಮುಂದಿನ ವರ್ಷ ಚುನಾವಣೆ ಮುಗಿದು ಬಹುಮತ ಪಡೆಯುವ ಪಕ್ಷ ಸರ್ಕಾರ ರಚಿಸಿದ ಬಳಿಕ ಆ ಮೊದಲ ವರ್ಷದಲ್ಲಿ ಕೆಲಸಗಳು ನಡೆಯುತ್ತವೆ, ಇಲ್ಲವೆಂದೇನಿಲ್ಲ. ಸಚಿವರಾಗಿ ಅಧಿಕಾರ ಸ್ವೀಕರಿಸಿದ ಖುಷಿಯಲ್ಲಿ ಕೆಲಸಗಳನ್ನು ಕೈಗೆತ್ತಿಕೊಳ್ಳುತ್ತಾರೆ. ವರ್ಷದ ಬಳಿಕ ಅವು ಸ್ಥಗಿತಗೊಂಡು ಚುನಾವಣಾ ವರ್ಷದಲ್ಲಿ ಪುನರಾರಂಭಗೊಳ್ಳುತ್ತವೆ.

ಇದನ್ನೂ ಓದಿ:

ಮದೀನಾದಲ್ಲಿ ಪಾಕ್ ಪ್ರಧಾನಿ ನೇತೃತ್ವದ ನಿಯೋಗವನ್ನು ನೋಡಿ ‘ಚೋರ್ ಚೋರ್’ ಎಂದು ಕೂಗಿದ ಯಾತ್ರಿಕರು

ಪಿಎಸ್‌ಐ ಮರುಪರೀಕ್ಷೆ: ಬಡತನದಲ್ಲಿ ಓದಿ ಪಾಸಾದ ಬಾಗಲಕೋಟೆಯ ಈ ಯುವತಿ ಕಷ್ಟ ಕೇಳೋರು ಯಾರು?

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!