Karnataka News: ರಾಜ್ಯದಲ್ಲಿ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ, ತೆರವಾಗಿರುವ ಸ್ಥಾನಗಳಿಗೂ ಚುನಾವಣೆ

| Updated By: ಸಾಧು ಶ್ರೀನಾಥ್​

Updated on: Nov 29, 2021 | 1:49 PM

ಡಿಸೆಂಬರ್ 27ರಂದು ಚಿಕ್ಕಮಗಳೂರು, ಶಿರಾ, ಗದಗ-ಬೆಟಗೇರಿ, ಹೊಸಪೇಟೆ-ಹೆಬ್ಬಗೋಡಿ ನಗರಸಭೆಗಳಿಗೆ ಮತದಾನ ನಡೆಯಲಿದೆ. 5 ನಗರಸಭೆ, 3 ಪುರಸಭೆ, 1 ಪಟ್ಟಣ ಪಂಚಾಯಿತಿಯಲ್ಲಿ ತೆರವಾಗಿರುವ ಸ್ಥಾನಗಳಿಗೂ ಡಿಸೆಂಬರ್ 27ರಂದು ಚುನಾವಣೆ ನಡೆಯಲಿದೆ.

Karnataka News: ರಾಜ್ಯದಲ್ಲಿ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ, ತೆರವಾಗಿರುವ ಸ್ಥಾನಗಳಿಗೂ ಚುನಾವಣೆ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು: ಅವಧಿ ಮುಕ್ತಾಯಗೊಂಡ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ (karnataka local body elections) ಘೋಷಣೆ ಮಾಡಿದೆ. 4 ನಗರಸಭೆ, 19 ಪುರಸಭೆ, 35 ಪ.ಪಂ.ಗೆ ಡಿ. 27ರಂದು ಮತದಾನ ನಡೆಯಲಿದೆ. ಡಿಸೆಂಬರ್ 30ರಂದು ಫಲಿತಾಂಶ ಹೊರಬೀಳಲಿದೆ. ಡಿಸೆಂಬರ್ 27ರಂದು ಚಿಕ್ಕಮಗಳೂರು, ಶಿರಾ, ಗದಗ-ಬೆಟಗೇರಿ, ಹೊಸಪೇಟೆ-ಹೆಬ್ಬಗೋಡಿ ನಗರಸಭೆಗಳಿಗೆ ಮತದಾನ ನಡೆಯಲಿದೆ. 5 ನಗರಸಭೆ, 3 ಪುರಸಭೆ, 1 ಪಟ್ಟಣ ಪಂಚಾಯಿತಿಯಲ್ಲಿ ತೆರವಾಗಿರುವ ಸ್ಥಾನಗಳಿಗೂ ಡಿಸೆಂಬರ್ 27ರಂದು ಚುನಾವಣೆ ನಡೆಯಲಿದೆ. ವಿವಿಧ ಗ್ರಾಮ ಪಂಚಾಯತ್ ಗಳಲ್ಲಿ ತೆರವಾಗಿರುವ 386 ಸ್ಥಾನಗಳಿಗೂ ಉಪಚುನಾವಣೆ ನಡೆಯಲಿದೆ

ಡಿಸೆಂಬರ್ 27ರಂದು ಅಥಣಿ, ಅಣ್ಣಿಗೇರಿ, ಬಂಕಾಪುರ, ಜಿಗಣಿ, ಚಂದಾಪುರ, ಬಿಡದಿ, ಮಲೆಬೆನ್ನೂರು, ಕಾಪು, ಹಾರೋಗೇರಿ, ಮುಗಳಖೋಡ, ಮುನವಳ್ಳಿ, ಉಗಾರಖುರ್ದ, ಕಾರಟಗಿ, ಕುರೆಕುಪ್ಪ, ಕುರುಗೋಡು, ಹಗರಿಬೊಮ್ಮನಹಳ್ಳಿ, ಮಸ್ಕಿ, ಕೆಂಭಾವಿ, ಕಕ್ಕೇರಾ ಪುರಸಭೆಗಳಿಗೆ ಮತದಾನ ನಡೆಯಲಿದೆ. ಡಿ. 27ರಂದು 35 ಪಟ್ಟಣ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ. ಅವು ನಾಯಕನಹಟ್ಟಿ, ವಿಟ್ಲ, ಕೋಟೆಕಾರು, ಎಂ.ಕೆ.ಹುಬ್ಬಳ್ಳಿ, ಕಂಕನವಾಡಿ, ನಾಗನೂರ, ಯಕ್ಸಾಂಬಾ, ಕಿತ್ತೂರು, ಅರಭಾವಿ, ಐನಾಪುರ, ಶೇಡಬಾಳ, ಚಿಂಚಿಲಿ, ಬೋರಗಾಂವ್, ಕಲ್ಲೋಳಿ, ನಲತವಾಡ, ನಿಡಗುಂದಿ, ದೇವರಹಿಪ್ಪರಗಿ, ಅಲಮೇಲ, ಮನಗೂಳಿ, ಕೊಲ್ಹಾರ, ಕಮತಗಿ, ಬೆಳಗಲಿ, ಅಮೀನಗಡ, ಗುತ್ತಲ, ಜಾಲಿ, ತಾವರಗೇರಾ, ಕುಕನೂರ, ಭಾಗ್ಯನಗರ, ಕನಕಗಿರಿ, ಮರಿಯಮ್ಮನಹಳ್ಳಿ, ಕವಿತಾಳ, ತುರವಿಹಾಳ, ಬಳಗಾನೂರು, ಸಿರವಾರ ಪಟ್ಟಣ ಪಂಚಾಯಿತಿಗೆ ಮತದಾನ ನಡೆಯಲಿದೆ.

ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯತ್​ಗಳಿಗೆ ಚುನಾವಣೆ ಘೋಷಣೆ

ಡಿಸೆಂಬರ್ 13 ಚುನಾವಣಾ ಅಧಿಸೂಚನೆ
ಡಿಸೆಂಬರ್ 17 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ
ಡಿಸೆಂಬರ್ 27 ಮತದಾನ
ಡಿಸೆಂಬರ್ 30 ಫಲಿತಾಂಶ
ಡಿಸೆಂಬರ್ 13 ರಿಂದ ನೀತಿಸಂಹಿತೆ ಜಾರಿ

Published On - 1:46 pm, Mon, 29 November 21