AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಟ್ರಾನ್ಸ್‌ಫಾರ್ಮರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಯುವತಿ ಸಾವು; ಬೆಸ್ಕಾಂ ಅಧಿಕಾರಿಗಳ ವಿರುದ್ಧ ಎಫ್‌ಐಆರ್

Electric Transformer Blast | BESOM: ಮಂಗನಹಳ್ಳಿ ಬ್ರಿಡ್ಜ್​ ಬಳಿ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಮೃತಪಟ್ಟಿದ್ದಾರೆ. ಯುವತಿಯ ತಂದೆ ನಿನ್ನೆ (ಬುಧವಾರ) ನಿಧನರಾಗಿದ್ದರು. ಪ್ರಕರಣ ಸಂಬಂಧ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಬೆಂಗಳೂರು: ಟ್ರಾನ್ಸ್‌ಫಾರ್ಮರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಯುವತಿ ಸಾವು; ಬೆಸ್ಕಾಂ ಅಧಿಕಾರಿಗಳ ವಿರುದ್ಧ ಎಫ್‌ಐಆರ್
ಟ್ರಾನ್ಸ್​ಫಾರ್ಮರ್​ ಸ್ಫೋಟಗೊಂಡ ಸ್ಥಳ
TV9 Web
| Edited By: |

Updated on: Mar 24, 2022 | 9:05 AM

Share

ಬೆಂಗಳೂರು: ಮಂಗನಹಳ್ಳಿ ಬ್ರಿಡ್ಜ್​ ಬಳಿ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಮೃತಪಟ್ಟಿದ್ದಾರೆ. ಸ್ಫೋಟದಲ್ಲಿ ಗಾಯಗೊಂಡಿದ್ದ ತಂದೆ ಶಿವರಾಜ್ ಹಾಗೂ ಪುತ್ರಿ ಚೈತನ್ಯಾಗೆ (19) ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಿಸದೇ ನಿನ್ನೆಯೇ (ಬುಧವಾರ) ಶಿವರಾಜ್ (55) ಮೃತಪಟ್ಟಿದ್ದರು. ಇಂದು ಮುಂಜಾನೆ 2.15ರ ಸುಮಾರಿಗೆ ಯುವತಿ ಕೂಡ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕಲ್ಯಾಣ ಮಂಟಪ ಬುಕ್ ಮಾಡಿ ಬರಲು ತೆರಳಿದ್ದ ತಂದೆ- ಮಗಳು ತೆರಳುತ್ತಿದ್ದರು. ಜ್ಞಾನಭಾರತೀ ಠಾಣಾ ವ್ಯಾಪ್ತಿಯ ಉಳ್ಳಾಲದಲ್ಲಿ ಘಟನೆ ನಡೆದಿದೆ. ಟ್ರಾನ್ಸ್​ಫಾರ್ಮರ್ ಸ್ಫೋಟಗೊಂಡ ಪ್ರಕರಣದಲ್ಲಿ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ.

ಜ್ಞಾನಭಾರತಿ ಠಾಣೆಯಲ್ಲಿ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಎಫ್​ಐಆರ್:

ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡು ತಂದೆ-ಮಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಬೆಂಗಳೂರಿನ ಜ್ಞಾನಭಾರತಿ ಠಾಣೆಯಲ್ಲಿ ಸೆಕ್ಷನ್ 304(a)ರಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮೊದಲೇ ಮಾಹಿತಿ ನೀಡಿದ್ದರೂ ಬರದ ಬೆಸ್ಕಾಂ; ಪರಿಚಯಸ್ಥರ ಹೇಳಿಕೆ:

ಬೆಳಗ್ಗೆ 11.30ಕ್ಕೆ ಟ್ರಾನ್ಸ್​​ಫಾರ್ಮರ್​ನಲ್ಲಿ ಪ್ರಾಬ್ಲಂ ಇತ್ತು. ಸಮಸ್ಯೆ ಇದ್ದ ಬಗ್ಗೆ ಬೆಳಗ್ಗೆ ಬೆಸ್ಕಾಂಗೆ ಕರೆ ಮಾಡಿ ಹೇಳಿದ್ದೆವು. ಮೆಸೇಜ್​ ಕೂಡ ಬಂತು. ಆದರೆ, ಯಾರೂ ಬರಲಿಲ್ಲ. ಬೆಸ್ಕಾಂ ನಿರ್ಲಕ್ಷ್ಯದಿಂದಲೇ ಈ ದುರ್ಘಟನೆ ನಡೆದಿದೆ ಎಂದು ಮೃತ ಶಿವರಾಜ್​​ ಪರಿಚಯಸ್ಥ ಅನಿಲ್ ಕುಮಾರ್ ಹೇಳಿಕೆ ನೀಡಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ್ದ ಸಚಿವ ಎಸ್​​.ಟಿ.ಸೋಮಶೇಖರ್ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ದುರಂತ ನಡೆದಿದೆ. ಟ್ರಾನ್ಸ್​ಫಾರ್ಮರ್ ಸಮಸ್ಯೆ ಬಗ್ಗೆ ಮಾಹಿತಿ ನೀಡಿದ್ದರೂ ನಿರ್ಲಕ್ಷ್ಯ ತೋರಿದ್ದಾರೆ. ಬೆಸ್ಕಾಂ ಇಇ ವಿರುದ್ಧ ಎಫ್‌ಐಆರ್ ದಾಖಲಿಸಲು ಜ್ಞಾನಭಾರತಿ ಠಾಣೆಯ ಇನ್ಸ್‌ಪೆಕ್ಟರ್‌ಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದರು.

ಸಾಮಾನ್ಯ ಜನರಿಗೆ ಬೆಲೆ ಏರಿಕೆಯ ಶಾಕ್; ಏಪ್ರಿಲ್​ನಿಂದ ದುಬಾರಿಯಾಗಲಿವೆಯೇ ಹಲವು ಸೇವೆಗಳು? ಇಲ್ಲಿದೆ ಪೂರ್ಣ ವಿವರ

‘ಪುಟಿನ್ ಪ್ರೇಯಸಿಯನ್ನು ಹೊರಹಾಕಿ’ ಎಂಬ ಮನವಿ ಜಾಲತಾಣಗಳಲ್ಲಿ ವೈರಲ್; ಯಾರು ಪುಟಿನ್ ಗೆಳತಿ?

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ