ವಿದ್ಯುತ್​ ಚಾಲಿತ ವಾಹನ ಇನ್ನು ಮುಂದೆ ಅನಿವಾರ್ಯ, ಅವುಗಳಿಗೆ ಹೆಚ್ಚು ಪ್ರೋತ್ಸಾಹ ನೀಡುತ್ತೇವೆ: ಇಂಧನ ಸಚಿವ ಸುನಿಲ್‌ಕುಮಾರ್

TV9 Digital Desk

| Edited By: Skanda

Updated on: Sep 09, 2021 | 9:50 AM

ವಿದ್ಯುತ್ ಚಾಲಿತ ವಾಹನಗಳಿಗೆ ಸಬ್ಸಿಡಿ ನೀಡಲಾಗುತ್ತಿದೆ. ಕೇಂದ್ರ, ರಾಜ್ಯ ಸರ್ಕಾರಗಳು ಸೂಕ್ತ ಸಬ್ಸಿಡಿ ನೀಡುತ್ತಿವೆ. ವಿದ್ಯುತ್ ಚಾಲಿತ ವಾಹನಗಳ ಬಳಕೆಯನ್ನು ಹೆಚ್ಚು ಮಾಡಿದರೆ ಮುಂದಿನ ದಿನಗಳಲ್ಲಿ ಪೆಟ್ರೋಲ್ ಬೆಲೆ ಕಡಿಮೆಯಾಗುತ್ತೆ: ಸಚಿವ ಕೆ.ಸಿ.ನಾರಾಯಣಗೌಡ

ವಿದ್ಯುತ್​ ಚಾಲಿತ ವಾಹನ ಇನ್ನು ಮುಂದೆ ಅನಿವಾರ್ಯ, ಅವುಗಳಿಗೆ ಹೆಚ್ಚು ಪ್ರೋತ್ಸಾಹ ನೀಡುತ್ತೇವೆ: ಇಂಧನ ಸಚಿವ ಸುನಿಲ್‌ಕುಮಾರ್
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್

Follow us on

ಬೆಂಗಳೂರು: ವಿದ್ಯುತ್​ ಚಾಲಿತ ವಾಹನಗಳಿಗೆ ಪ್ರೋತ್ಸಾಹ ನೀಡಲು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಬೆಂಗಳೂರಿನಲ್ಲಿ 136 ಕಡೆ ವಿದ್ಯುತ್ ರೀ ಚಾರ್ಜಿಂಗ್ ಸೆಂಟರ್ ಆರಂಭವಾಗುತ್ತಿದೆ. ಮುಂದಿನ ದಿನಗಳಲ್ಲಿ 500ಕ್ಕೂ ಹೆಚ್ಚು ಸೆಂಟರ್ ನಿರ್ಮಾಣವಾಗಲಿದೆ. ವಿದ್ಯುತ್ ಚಾಲಿತ ವಾಹನಗಳು ಭವಿಷ್ಯಕ್ಕೆ ಅನಿವಾರ್ಯವಾಗಿರುವ ಕಾರಣ ನಾವು ವಿದ್ಯುತ್ ಚಾಲಿತ ವಾಹನಗಳಿಗೆ ಹೆಚ್ಚು ಪ್ರೋತ್ಸಾಹ ನೀಡಲಿದ್ದೇವೆ ಎಂದು ಬೆಂಗಳೂರಿನಲ್ಲಿ ಇಂಧನ ಸಚಿವ ಸುನಿಲ್‌ಕುಮಾರ್ ಹೇಳಿಕೆ ನೀಡಿದ್ದಾರೆ.

ವಿದ್ಯುತ್​ ಚಾಲಿತ ವಾಹನಗಳಿಗೆ ಬೇಕಾದ ಅಗತ್ಯ ಸೌಕರ್ಯ ಒದಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಯೋಜನೆಗಳನ್ನು ರೂಪಿಸಲಿದೆ. ಈ ವಾಹನಗಳ ಬಳಕೆ ಹೆಚ್ಚಾಗಲಿದ್ದು, ಭವಿಷ್ಯದಲ್ಲಿ ಇದು ಅನಿವಾರ್ಯವಾಗಲಿದೆ. ಹೀಗಾಗಿ ರೀ ಚಾರ್ಜಿಂಗ್​ ಸೆಂಟರ್​ ಸ್ಥಾಪಿಸಲು ಹೆಚ್ಚು ಒತ್ತು ನೀಡಲಿದ್ದೇವೆ. ಇದು ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಸಚಿವ ಮುನಿರತ್ನ, ವಿದ್ಯುತ್ ಚಾಲಿತ ವಾಹನಗಳಿಗೆ ರೀಚಾರ್ಜ್ ಸೆಂಟರ್​ ಮಾಡುವಾಗ ಅವುಗಳನ್ನು ಈಗ ಇರುವ ಪೆಟ್ರೋಲ್ ಬಂಕ್ ಬಳಿಯೇ ಮಾಡಬೇಕು. ಜತೆಗೆ, ವಿದ್ಯುತ್ ಚಾಲಿತ ವಾಹನಗಳ ಬೆಲೆ ಕಡಿಮೆ ಮಾಡಬೇಕು. ಪೆಟ್ರೋಲ್​ ವಾಹನಗಳ ಬೆಲೆಗಿಂತ ಶೇ.40ರಷ್ಟು ಕಡಿಮೆ ದರದಲ್ಲಿ ವಿದ್ಯುತ್​ ಚಾಲಿತ ವಾಹನಗಳು ಮಾರುಕಟ್ಟೆಯಲ್ಲಿ ಲಭ್ಯವಿರಬೇಕು. ಈ ಕುರಿತು ವಾಹನ ಕಂಪನಿಗಳಿಗೆ ಬೆಲೆ ಕಡಿಮೆ ಮಾಡಲು ಕೋರುತ್ತೇನೆ ಎಂದು ತಿಳಿಸಿದ್ದಾರೆ.

ಇದೇ ವಿಚಾರವಾಗಿ ಅಭಿಪ್ರಾಯ ಹಂಚಿಕೊಂಡ ಸಚಿವ ಕೆ.ಸಿ.ನಾರಾಯಣಗೌಡ, ನಮ್ಮ ಆರೋಗ್ಯ, ಪರಿಸರ ಕಾಪಾಡಿಕೊಳ್ಳಬೇಕು ಎಂದರೆ ವಿದ್ಯುತ್ ಚಾಲಿತ ವಾಹನ ಬಳಕೆ ಹೆಚ್ಚಾಗಬೇಕು. ವಿದ್ಯುತ್ ಚಾಲಿತ ವಾಹನಗಳಿಗೆ ಸಬ್ಸಿಡಿ ನೀಡಲಾಗುತ್ತಿದೆ. ಕೇಂದ್ರ, ರಾಜ್ಯ ಸರ್ಕಾರಗಳು ಸೂಕ್ತ ಸಬ್ಸಿಡಿ ನೀಡುತ್ತಿವೆ. ವಿದ್ಯುತ್ ಚಾಲಿತ ವಾಹನಗಳ ಬಳಕೆಯನ್ನು ಹೆಚ್ಚು ಮಾಡಿದರೆ ಮುಂದಿನ ದಿನಗಳಲ್ಲಿ ಪೆಟ್ರೋಲ್ ಬೆಲೆ ಕಡಿಮೆಯಾಗುತ್ತೆ. ಮುಖ್ಯವಾಗಿ ನಮ್ಮ ಶರೀರವನ್ನ ,ನಮ್ಮ ಪರಿಸರವನ್ನ ಕಾಪಾಡಿಕೊಳ್ಳಬೇಕು ಎಂದರೆ ಇವುಗಳು ಅನಿವಾರ್ಯ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಪರಾಧ ಸುದ್ದಿಗಳು: ಬೆಂಗಳೂರಿನಲ್ಲಿ ಹೆಚ್ಚಿದ ಪೆಟ್ರೋಲ್ ಕಳ್ಳರ ಹಾವಳಿ 

ವಿದ್ಯುತ್ ಟ್ರಾನ್ಸ್​ಫಾರ್ಮರ್ ಹಾಳಾದರೆ 24 ಗಂಟೆಯಲ್ಲಿ ಬದಲಿಸಬೇಕು: ಇಂಧನ ಸಚಿವ ಸುನೀಲ್ ಕುಮಾರ್

(Electric vehicles are need of future so we will focus more says Energy Minister Sunil Kumar)

ತಾಜಾ ಸುದ್ದಿ

Related Stories

Most Read Stories

Click on your DTH Provider to Add TV9 Kannada