ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆಯಲ್ಲಿ ಮೂರು ಪಟ್ಟು ಏರಿಕೆ

ಸಿಲಿಕಾನ್‌ ಸಿಟಿ ಮಂದಿಗೆ ಪೆಟ್ರೋಲ್ ಡಿಸೇಲ್​​‌ಗಿಂತ ಇದೀಗ ಎಲೆಕ್ಟ್ರಿಕ್ ವಾಹನಗಳೇ ಫೆವರೇಟ್ ಆದಂತೆ ಕಾಣ್ತಿದೆ. ನಗರದಲ್ಲಿ ಎಲೆಕ್ಟ್ರಿಕ್ ವಾಹನಗಳ‌ ಸಂಖ್ಯೆಯಲ್ಲಿ 2-3 ಪಟ್ಟು ಏರಿಕೆಯಾಗಿರುವುದೇ ಇದಕ್ಕೆ ಉದಾಹರಣೆ.

ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆಯಲ್ಲಿ ಮೂರು ಪಟ್ಟು ಏರಿಕೆ
ಸಾಂದರ್ಭಿಕ ಚಿತ್ರ
Follow us
Kiran Surya
| Updated By: Ganapathi Sharma

Updated on: Dec 21, 2023 | 7:22 AM

ಬೆಂಗಳೂರು, ಡಿಸೆಂಬರ್ 21: ವಾಹನಗಳ ವಿಚಾರದಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿಗರು (Bengaluru) ಇದೀಗ ಹೊಸ ನಿರ್ಧಾರ ತಗೊಂಡಂತೆ ಕಾಣಿಸುತ್ತಿದೆ. ಇಷ್ಟು ದಿನ ಪೆಟ್ರೋಲ್, ಡಿಸೇಲ್ ಹಾಕಿಸಿಕೊಂಡು ರಸ್ತೆಯಿಡಿ ಹೊಗೆ ಉಗುಳುತ್ತಿದ್ದವರು ಇದೀಗ ಎಲೆಕ್ಟ್ರಿಕ್ ವಾಹನದತ್ತ (electric vehicles) ಮುಖ ಮಾಡಿದ್ದಾರೆ‌. ಏರುತ್ತಿರುವ ಪೆಟ್ರೋಲ್, ಡಿಸೇಲ್ ರೇಟ್ ಜನರ ಜೇಬಿಗೆ ಕತ್ತರಿ ಹಾಕಿದೆ. ವಾಹನಗಳು ಉಗುಳುವ ಹೊಗೆ ಮಾಲಿನ್ಯವಾಗಿ ಜನರ ಜೀವ ಹಿಂಡುತ್ತಿದೆ. ಇದಕ್ಕೆ ಮುಕ್ತಿ ನೀಡಲು ಬೆಂಗಳೂರು ನಗರವಾಸಿಗಳು ಮುಂದಾಗಿದ್ದಾರೆ.

ಸಿಲಿಕಾನ್‌ ಸಿಟಿ ಮಂದಿಗೆ ಪೆಟ್ರೋಲ್ ಡಿಸೇಲ್​​‌ಗಿಂತ ಇದೀಗ ಎಲೆಕ್ಟ್ರಿಕ್ ವಾಹನಗಳೇ ಫೆವರೇಟ್ ಆದಂತೆ ಕಾಣ್ತಿದೆ. ನಗರದಲ್ಲಿ ಎಲೆಕ್ಟ್ರಿಕ್ ವಾಹನಗಳ‌ ಸಂಖ್ಯೆಯಲ್ಲಿ 2-3 ಪಟ್ಟು ಏರಿಕೆಯಾಗಿರುವುದೇ ಇದಕ್ಕೆ ಉದಾಹರಣೆ. ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಾಗಿರೋದು, ನಿಜಕ್ಕೂ ಉತ್ತಮ ಬೆಳವಣಿಗೆ ಅನ್ನೋದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರ ಮಾತು.

2017-2018ರ ಹಣಕಾಸಿನ ವರ್ಷದಲ್ಲಿ ದ್ವಿಚಕ್ರ, ತ್ರಿ ಚಕ್ರ, ನಾಲ್ಕು ಚಕ್ರದ ವಾಹನ ಸೇರಿ ಒಟ್ಟು 1992 ವಾಹನಗಳು ನೋಂದಣಿಯಾಗಿದ್ದವು. 2018-19 ರಲ್ಲಿ 5542, 2019-20ರಲ್ಲಿ 6674, 2020-21 ರಲ್ಲಿ 11,593 ಎಲೆಕ್ಟ್ರಿಕಲ್ ವಾಹನಗಳು ರಿಜಿಸ್ಟ್ರೇಷನ್ ಆಗಿವೆ. 2021ರ ಬಳಿಕ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆಯಲ್ಲಿ ಮೂರು ಪಟ್ಟು ಹೆಚ್ಚಳವಾಗಿದ್ದು, 2021-22ರಲ್ಲಿ 44,217, 2022-23ರಲ್ಲಿ 1,10,492 ವಾಹನಗಳು ನೋಂದಣಿಯಾಗಿದ್ರೆ, 2023-24 ರಲ್ಲಿ ಬರೋಬ್ಬರಿ 1,03,009 ಎಲೆಕ್ಟ್ರಿಕಲ್ ವಾಹನಗಳು ರಿಜಿಸ್ಟ್ರೇಷನ್ ಆಗಿವೆ.

ಇದನ್ನೂ ಓದಿ: ಹೊಸ ಬಗೆಯ ಆಹಾರದೊಂದಿಗೆ ಗ್ರಾಹಕರ ಸೇವೆಗೆ ಸಿದ್ದಗೊಂಡ ಇಂದಿರಾ ಕ್ಯಾಂಟೀನ್: ಹೊಸ ಮೆನು ಬಿಡುಗಡೆ ಮಾಡಿದ ಸಿಎಂ

ಒಟ್ಟಿನಲ್ಲಿ ಪೆಟ್ರೋಲ್ -ಡಿಸೇಲ್ ವಾಹನಗಳಿಗಿಂತ ಜನರು ಎಲೆಕ್ಟ್ರಿಕಲ್ ವಾಹನಗಳನ್ನ ಹೆಚ್ಚು ಬಳಕೆ ಮಾಡ್ತಿರೋದು, ಮಾಲಿನ್ಯದ ಹಿತತೃಷ್ಟಿಯಿಂದ ನಿಜಕ್ಕೂ ಒಳ್ಳೆಯ ಬೆಳವಣಿಗೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ