AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಜನತೆಗೆ ವಿದ್ಯುತ್​ ದರ ಏರಿಕೆ ಶಾಕ್! ಇಂದಿನಿಂದ ಪರಿಷ್ಕೃತ ವಿದ್ಯುತ್ ದರ ಜಾರಿ

ಮೂರು ತಿಂಗಳಿಗೊಮ್ಮೆ ವಿದ್ಯುತ್ ದರ ಏರಿಸಿ ಎಂದು ಇಂಧನ ಇಲಾಖೆ ಗ್ರಾಹಕರಿಗೆ ಹೊರೆ ಮಾಡಿದೆ. ಏಪ್ರಿಲ್, ಜುಲೈ ಆಯ್ತು ಇಂದಿನಿಂದಲೂ ಹೆಚ್ಚುವರಿ ವಿದ್ಯುತ್ ದರ ಪರಿಷ್ಕರಣೆ ಆಗಲಿದೆ.

ರಾಜ್ಯದ ಜನತೆಗೆ ವಿದ್ಯುತ್​ ದರ ಏರಿಕೆ ಶಾಕ್! ಇಂದಿನಿಂದ ಪರಿಷ್ಕೃತ ವಿದ್ಯುತ್ ದರ ಜಾರಿ
Electricity (ಸಂಗ್ರಹ ಚಿತ್ರ)
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Oct 01, 2022 | 8:04 AM

Share

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಪರಿಷ್ಕೃತ ವಿದ್ಯುತ್ (Electricity) ದರ ಅನ್ವಯವಾಗುತ್ತಿದ್ದು, ರಾಜ್ಯದ ಜನತೆಗೆ ವಿದ್ಯುತ್​ ದರ ಏರಿಕೆ ಬಿಸಿ ತಟ್ಟಲಿದೆ. ಎಸ್ಕಾಂಗಳು ಸಲ್ಲಿಸಿದ್ದ ಮನವಿಯ ಮೇರೆಗೆ ಪ್ರತಿ ಯೂನಿಟ್ ಮೇಲೆ 23-43 ಪೈಸೆವರೆಗೆ ಹೆಚ್ಚಿಸಿ KERC ಆದೇಶ ಹೊರಡಿಸಿದೆ. ಮೂರು ತಿಂಗಳಿಗೊಮ್ಮೆ ವಿದ್ಯುತ್ ದರ ಏರಿಸಿ ಎಂದು ಇಂಧನ ಇಲಾಖೆ ಗ್ರಾಹಕರಿಗೆ ಹೊರೆ ಮಾಡಿದೆ. ಏಪ್ರಿಲ್, ಜುಲೈ ಆಯ್ತು ಇಂದಿನಿಂದಲೂ ಹೆಚ್ಚುವರಿ ವಿದ್ಯುತ್ ದರ ಪರಿಷ್ಕರಣೆ ಆಗಲಿದೆ. ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್​ಗೆ 24 ಪೈಸೆ ಹೆಚ್ಚುವರಿ ಶುಲ್ಕ ಪಾವತಿ ಮಾಡಬೇಕು. ಸೆಸ್ಕಾಂ ಅಡಿಯಲ್ಲಿ ಬರುವ ವಿದ್ಯುತ್ ಗ್ರಾಹಕರಿಗೆ ಹೆಚ್ಚುವರಿ 35 ಪೈಸೆ ಏರಿಕೆ ಮಾಡಲಾಗಿದೆ. ಹೆಸ್ಕಾಂ ಹಾಗೂ ಜೆಸ್ಕಾಂ ಅಡಿಯ ವಿದ್ಯುತ್ ಗ್ರಾಹಕರು ಪ್ರತಿ ಯೂನಿಟ್​ಗೆ 35 ಪೈಸೆ ಹೆಚ್ಚುವರಿ ವಿದ್ಯುತ್ ಶುಲ್ಕ ಕಟ್ಟಬೇಕು. ವಿದ್ಯುತ್ ಸರಬರಾಜು ಕಂಪನಿಗಳ ನಷ್ಟ ಸರಿದೂಗಿಸಲು ದರ ಏರಿಕೆ ಮಾಡಿದ್ದು, ವಿದ್ಯುತ್ ಸರಬರಾಜು ಕಂಪನಿಗಳಿಂದ ಇಂದಿನಿಂದ ಹೊಸ ವಿದ್ಯುತ್ ದರ ಜಾರಿಗೆ ಬರಲಿದೆ.

ಪ್ರತಿ ಮೂರು ತಿಂಗಳಿಗೊಮ್ಮೆ ಪರಿಷ್ಕರಣೆ ಮಾಡಬೇಕು. ಹಾಗಾಗಿ ಪ್ರತಿ ಮೂರು ತಿಂಗಳಿಗೊಮ್ಮೆ ದರ ಪರಿಷ್ಕರಣೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ವಿದ್ಯುತ್ ದರ ಬಗ್ಗೆ ಒಮ್ಮೆ ಹೆಚ್ಚಾದ್ದಾರೆ ಮತ್ತೊಮ್ಮೆ ದರ ಕಡಿಮೆಯಾಗಲಿದೆ. ನಮ್ಮ ಸರ್ಕಾರ ಬಂದಾಗಲಾಗಲಿ ಅಥವಾ ನಾನು ಸಚಿವನಾದ ಮೇಲೆ ಈ ನೀತಿ ಜಾರಿಗೆ ಬಂದಿಲ್ಲ. ಕಳೆದ 7 ವರ್ಷಗಳಿಂದ ಈ ಪರಿಷ್ಕರಣೆ ನಡೆಯುತ್ತಲೇ ಇದೆ ಎಂದು ಸಚಿವ ಸುನೀಲ್ ಕುಮಾರ್ ಹೇಳಿದ್ದರು.

ವಿದ್ಯುತ್ ದರ ಹೆಚ್ಚಳ ಅನಿವಾರ್ಯ: ಬೆಸ್ಕಾಂ ತಾಂತ್ರಿಕ ನಿರ್ದೇಶಕ ನಾಗಾರ್ಜುನ್

ಎಫ್​ಎಸಿ ಬೆಲೆ ಹೆಚ್ಚಾದರೆ ವಿದ್ಯುತ್ ದರ ಹೆಚ್ಚಳ ಅನಿವಾರ್ಯ. ಉತ್ಪಾದನೆ ವೆಚ್ಚ ಹೆಚ್ಚಾದರೆ ವಿದ್ಯುತ್ ದರ ಏರಿಸಬೇಕಾಗುತ್ತೆ ಎಂದು ಟಿವಿ9ಗೆ ಬೆಸ್ಕಾಂ ತಾಂತ್ರಿಕ ನಿರ್ದೇಶಕ ನಾಗಾರ್ಜುನ್ ಹೇಳಿಕೆ ನೀಡಿದರು. ಮಾರುಕಟ್ಟೆಯಲ್ಲಿ ಕಲ್ಲಿದ್ದಲು ದರ ಹೆಚ್ಚಾಗಿದೆ. ವಿದ್ಯುತ್​ ಉತ್ಪಾದನೆಗೆ ಬೇಕಾದ ಕಚ್ಚಾ ಸಾಮಾಗ್ರಿ ದರ ಹೆಚ್ಚಾಗಿದೆ. ಖರೀದಿ ವೇಳೆ ದರ ಕಡಿಮೆ ಇದ್ದರೆ KERCಗೆ ಪ್ರಸ್ತಾವನೆ ಸಲ್ಲಿಸಲ್ಲ. ಕಲ್ಲಿದ್ದಲು ಇತರೆ ಕಚ್ಚಾ ಸಾಮಾಗ್ರಿ ಏರಿಕೆಯಾದ್ರೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ. ಈ ಪ್ರಕ್ರಿಯೆ ಪ್ರತಿ ಮೂರು ತಿಂಗಳಿಗೊಮ್ಮೆ ನಡೆಸಲಾಗುತ್ತದೆ. ಉತ್ಪಾದನೆ ದರ ಕಡಿಮೆಯಾದರೆ ವಿದ್ಯುತ್ ದರ ಕಡಿಮೆ ಆಗಬಹುದು. ಇಲ್ಲವಾದರೆ ಹಾಗೇ ಮುಂದುವರಿಯಲೂಬಹುದು. ಇದನ್ನ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ನಿರ್ಧರಿಸುತ್ತೆ ಎಂದು ನಾಗಾರ್ಜುನ್ ತಿಳಿಸಿದರು.

ಹೋಟೆಲ್ ಮಾಲೀಕರ ಸಂಘ ವಿರೋಧ

ವಿದ್ಯುತ್ ದರ ಏರಿಕೆಗೆ ಸರ್ಕಾರ ನಿರ್ಧಾರ ಮಾಡಿದ್ದು, ಈ ನಿರ್ಧಾರಕ್ಕೆ ಹೋಟೆಲ್ ಮಾಲೀಕರ ಸಂಘ ವಿರೋಧ ವ್ಯಕ್ತಪಡಿಸಿದೆ. ಪ್ರತಿ ಯೂನಿಟ್​ಗೆ 43 ಪೈಸೆ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಅ.1ರಿಂದ ಪರಿಷ್ಕೃತ ವಿದ್ಯುತ್ ದರ ಜಾರಿಗೆ ಬರುತ್ತಿದೆ. ದರ ಏರಿಕೆ ನಿರ್ಧಾರ ಮುಂದಿನ ವರ್ಷ ಏಪ್ರಿಲ್​ವರೆಗೆ ಮುಂದೂಡುವಂತೆ ಬೆಂಗಳೂರು ಹೋಟೆಲ್ ಮಾಲೀಕರ ಸಂಘದಿಂದ ಆಗ್ರಹಿಸಿದೆ. ಈಗಾಗಲೇ ವಿದ್ಯುತ್ ಮೇಲಿನ ತೆರಿಗೆ ಶೇ‌ಕಡಾ 9ರಷ್ಟು ಇದೆ. ಇದನ್ನು ಶೇಕಡಾ 4ಕ್ಕೆ ಇಳಿಸುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗುತ್ತಿದೆ. ಈ ಸಂಬಂಧ ಮುಂದಿನ ವಾರ ಇಂಧನ ಸಚಿವರನ್ನು ಭೇಟಿಯಾಗಿ ಮನವಿ ಸಲಿಸುವುದಾಗಿ ಬೆಂಗಳೂರು ಹೋಟೆಲ್ ಮಾಲೀಕರ ಸಂಘದಿಂದ ಮಾಹಿತಿ ನೀಡಲಾಗಿತ್ತು.

ಈ ವರ್ಷ ಏಪ್ರಿಲ್​ನಲ್ಲಿ ಬೆಸ್ಕಾಂ ವಿದ್ಯುತ್ ದರ ಹೆಚ್ಚಿಸಿತ್ತು. ಪ್ರತಿ ಯೂನಿಟ್​ಗೆ 35 ಪೈಸೆ ಏರಿಕೆ ಮಾಡಿದ್ದ ಬೆಸ್ಕಾಂ, ಕೊರೊನಾ ಬಳಿಕ ಈಗಷ್ಟೇ ಹೋಟೆಲ್​​ ಉದ್ಯಮದಲ್ಲಿ ಚೇತರಿಕೆ ಕಾಣುತ್ತಿದೆ. ವಿದ್ಯುತ್​ ದರ ಮತ್ತೆ ಏರಿಸಿದರೆ ಉದ್ಯಮಕ್ಕೆ ಸಮಸ್ಯೆ ಆಗಲಿದೆ ಎಂದು ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿಸಿ ರಾವ್ ತಿಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 7:51 am, Sat, 1 October 22

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​