Electricity Price Hike: ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆ, ಎಷ್ಟು ಗೊತ್ತಾ?

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣವು ಎಲ್ಲಾ ಎಲ್​ಟಿ ಮತ್ತು ಎಚ್​ಟಿ ವಿಭಾಗಗಳಿಗೆ ಪ್ರತಿ ಯುನಿಟ್​ಗೆ 70 ಪೈಸೆ ದರ ಹೆಚ್ಚಳಕ್ಕೆ ಅನುಮೋದನೆ ನೀಡಿದೆ.

Electricity Price Hike: ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆ, ಎಷ್ಟು ಗೊತ್ತಾ?
ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆ
Edited By:

Updated on: May 12, 2023 | 7:49 PM

ಬೆಂಗಳೂರು: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (Karnataka Electricity Regulatory Commission -KERC) ಎಲ್ಲಾ ಹೈಟೆನ್ಷನ್ (HT)​ ಮತ್ತು ಲೋಟೆನ್ಷನ್ (LT) ವಿಭಾಗಗಳಿಗೆ ಪ್ರತಿ ಯೂನಿಟ್​ಗೆ ಸರಾಸರಿ 70 ಪೈಸೆ ಹೆಚ್ಚಳಕ್ಕೆ (Electricity Tariff Hike) ಅನುಮೋದನೆ ನೀಡಿದೆ. ಇದು ಒಟ್ಟಾರೆ ಶೇ. 8.31ರಷ್ಟು ಹೆಚ್ಚಳಕ್ಕೆ ಕಾರಣವಾಗಿದ್ದು, ಹೊಸ ಶುಲ್ಕವು ಏಪ್ರಿಲ್​ ತಿಂಗಳಿಂದ ಪೂರ್ವಾನ್ವಯವಾಗಲಿದೆ.

ಕರ್ನಾಟಕದಾದ್ಯಂತ ವಿದ್ಯುತ್ ಸರಬರಾಜು ಕಂಪನಿಗಳು (ಎಸ್ಕಾಮ್‌ಗಳು) ನವೆಂಬರ್ 2022 ರಲ್ಲಿ ಆಯೋಗಕ್ಕೆ ಶುಲ್ಕ ಪರಿಷ್ಕರಣೆ ಪ್ರಸ್ತಾವನೆಗಳನ್ನು ಸಲ್ಲಿಸಿದ್ದವು. 70 ಪೈಸೆ ಹೆಚ್ಚಳದಲ್ಲಿ 57 ಪೈಸೆಯನ್ನು ಫಿಕ್ಸೆಡ್ ಚಾರ್ಜ್ ಮೂಲಕ ಮತ್ತು ಉಳಿದ 13 ಪೈಸೆಯನ್ನು ಇಂಧನ ಶುಲ್ಕವಾಗಿ ಪಡೆಯಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:46 pm, Fri, 12 May 23