ಕಲಾಸಿಪಾಳ್ಯದಲ್ಲಿ ಮೂತ್ರ ವಿಸರ್ಜನೆ ವೇಳೆ ವಿದ್ಯುತ್ ತಂತಿ ಸ್ಪರ್ಶ, ಇಬ್ಬರು ಯುವ ಕಾರ್ಮಿಕರ ದುರ್ಮರಣ

Electrocution in Kalasipalya: ವಿದ್ಯುತ್ ತಂತಿ ತಗುಲಿ ಕಾರ್ಮಿಕರಿಬ್ಬರು ಮೃತಪಟ್ಟಿದ್ದಾರೆ. ಮೂತ್ರ ವಿಸರ್ಜನೆ ವೇಳೆ ಗೊತ್ತಿಲ್ಲದೆ ವಿದ್ಯುತ್ ತಂತಿ ಸ್ಪರ್ಶ ಮಾಡಿದ್ದಾರೆ. ವಿದ್ಯುತ್ ತಂತಿ ಹಿಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಬಗ್ಗೆ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಲಾಸಿಪಾಳ್ಯದಲ್ಲಿ ಮೂತ್ರ ವಿಸರ್ಜನೆ ವೇಳೆ ವಿದ್ಯುತ್ ತಂತಿ ಸ್ಪರ್ಶ, ಇಬ್ಬರು ಯುವ ಕಾರ್ಮಿಕರ ದುರ್ಮರಣ
ಕಲಾಸಿಪಾಳ್ಯದಲ್ಲಿ ಮೂತ್ರ ವಿಸರ್ಜನೆ ವೇಳೆ ವಿದ್ಯುತ್ ತಂತಿ ಸ್ಪರ್ಶ, ಇಬ್ಬರು ಯುವ ಕಾರ್ಮಿಕರ ದುರ್ಮರಣ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jun 22, 2021 | 9:19 AM

ಬೆಂಗಳೂರು: ಮೂತ್ರ ವಿಸರ್ಜನೆ ವೇಳೆ ಕರೆಂಟ್ ಶಾಕ್ ಹೊಡೆದು ಇಬ್ಬರು ಕಾರ್ಮಿಕರು ದುರ್ಮರಣಕ್ಕೀಡಾಗಿದ್ದಾರೆ. ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ನಿನ್ನೆ ಈ ಘಟನೆ ನಡೆದಿದೆ. ಕರಿಯಪ್ಪ(22) ಹಾಗೂ ನಾಗರಾಜು (19) ಮೃತ ಕಾರ್ಮಿಕರು. ಮೃತರು ಮೂಲತಃ ರಾಯಚೂರು ಜಿಲ್ಲೆಯ ಕಾರ್ಮಿಕರು. ಒಜಾಸ್ ಕಂಪೆನಿಯಲ್ಲಿ ಕಳೆದ ಒಂದು ವರ್ಷದಿಂದ ಉದ್ಯೋಗದಲ್ಲಿದ್ದರು. ಓಜಾಸ್ ಕಂಪೆನಿ ಮೂಲಕ ರಾಜಕಾಲುವೆ ಸ್ವಚ್ಛಗೊಳಿಸುವ ಕೆಲಸ ಮಾಡಿಕೊಂಡಿದ್ದರು.

ನಿನ್ನೆ ಮಲ್ಲಸಂದ್ರ ಬಳಿಯ ರಾಜಕಾಲುವೆ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಕಾರ್ಮಿಕರು ಎಚ್ ಎಸ್ ಆರ್ ಲೇಔಟ್ ಮನೆಗೆ ಹೊರಟಿದ್ದರು. ಈ ವೇಳೆ ಲಾಲ್ ಬಾಗ್ ರಸ್ತೆಯ ನಾಲ ರಸ್ತೆ ಬಳಿ ತಮ್ಮ ಸಂಗಡಿಗರು ಕೆಲಸ ಮಾಡುತ್ತಿರುವುದನ್ನು ಕರಿಯಪ್ಪ ಹಾಗೂ ನಾಗರಾಜು ನೋಡಿದ್ದಾರೆ.

ಅವರನ್ನು ತಮ್ಮ ಕರೆದೊಯ್ಯಲು ಅಲ್ಲಿ ನಿಂತಿದ್ದಾರೆ. ಅದೇ ವೇಳೆ ಮೂತ್ರ ವಿಸರ್ಜನೆಗೆ ಹೋದಾಗ, ವಿದ್ಯುತ್ ತಂತಿ ತಗುಲಿ ಕಾರ್ಮಿಕರಿಬ್ಬರೂ ಮೃತಪಟ್ಟಿದ್ದಾರೆ. ಮೂತ್ರ ವಿಸರ್ಜನೆ ವೇಳೆ ಗೊತ್ತಿಲ್ಲದೆ ವಿದ್ಯುತ್ ತಂತಿ ಸ್ಪರ್ಶ ಮಾಡಿದ್ದಾರೆ. ವಿದ್ಯುತ್ ತಂತಿ ಹಿಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಬಗ್ಗೆ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(electrocution in kalasipalya bangalore 2 labourers died)

Published On - 9:18 am, Tue, 22 June 21

ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ