AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಡೀಪುರದಲ್ಲಿ ಚಿತ್ರ ಸೆರೆ ಹಿಡಿಯಲು ನಿಂತ ಪ್ರವಾಸಿಗರು: ಆನೆ ತುಳಿತದಿಂದ ಕೂದಲೆಳೆ ಅಂತರದಿಂದ ಪಾರಾದ ವ್ಯಕ್ತಿ

ಕೇರಳದಿಂದ ಕರ್ನಾಟಕಕ್ಕೆ ಬರುವ ಮಾರ್ಗದಲ್ಲಿ ಇಬ್ಬರು ವ್ಯಕ್ತಿಗಳು ಚಿತ್ರ ತೆಗೆಯಲು ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಾರಿನಿಂದ ಕೆಳೆಗೆ ಇಳಿದಿದ್ದಾರೆ.ಕೆಳಗೆ ಇಳಿದು ಸೆರೆ ಹಿಡಿಯುವಾಗ ಆನೆ ಪ್ರತ್ಯಕ್ಷವಾಗಿದ್ದು, ಇಬ್ಬರನ್ನು ಅಟ್ಟಿಸಿಕೊಂಡು ಬಂದಿದೆ. ಆನೆಯ ದಾಳಿಯಿಂದ ತಪ್ಪಿಸಿಕೊಳ್ಳಲು ಓಡಲು ಆರಂಭಿಸಿದ್ದಾರೆ.ಮುಂದೇನಾಯ್ತು ಈ ಸ್ಟೋರಿ ಓದಿ..

ವಿವೇಕ ಬಿರಾದಾರ
|

Updated on:Feb 02, 2024 | 12:38 PM

Share

ಬೆಂಗಳೂರು, ಫೆಬ್ರವರಿ 02: ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ (Bandipur Tiger Reserve Forest) ಫೋಟೋ ತೆಗೆಯಲು ಕಾರಿನಿಂದ ಇಳಿದ ಇಬ್ಬರು ಪ್ರವಾಸಿಗರನ್ನು ಆನೆಯೊಂದು (Elephant) ಅಟ್ಟಿಸಿಕೊಂಡು ಹೋಗುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ (Social Media) ವೈರಲ್ ಆಗುತ್ತಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ಮತ್ತು ಮೂಲೆಹೊಳೆ ನಡುವೆ ಘಟನೆ ನಡೆದಿದೆ. ಇಬ್ಬರು ಪ್ರವಾಸಿಗರು (Tourist) ಆನೆಯಿಂದ ತಪ್ಪಿಸಿಕೊಂಡು ಓಡಿ ಹೋಗುತ್ತಿರುವಾಗ, ಓರ್ವ ಕೆಳೆಗೆ ಬಿದ್ದಿದ್ದಾನೆ. ಕೂಡಲೆ ವ್ಯಕ್ತಿ ಪಕ್ಕಕ್ಕೆ ಸರಿದಿದ್ದು, ಅದೃಷ್ಟವಶಾತ್ ಆನೆ ತುಳಿತದಿಂದ ತಪ್ಪಿಸಿಕೊಂಡಿದ್ದಾನೆ. 20 ಸೆಕೆಂಡುಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗುತ್ತಿದೆ.

ಪ್ರಾಣಿಗಳ ದಾಳಿಯನ್ನು ತಪ್ಪಿಸಲು ಅರಣ್ಯ ಇಲಾಖೆಯು ಅರಣ್ಯದಲ್ಲಿ ತಮ್ಮ ವಾಹನಗಳನ್ನು ನಿಲ್ಲಿಸುವುದನ್ನು ನಿಷೇಧಿಸಿದೆ. ಆದರು ಕೂಡ ಕೇರಳದಿಂದ ಕರ್ನಾಟಕಕ್ಕೆ ಬರುವ ಮಾರ್ಗದಲ್ಲಿ ಇಬ್ಬರು ವ್ಯಕ್ತಿಗಳು ಚಿತ್ರ ತೆಗೆಯಲು ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಾರಿನಿಂದ ಕೆಳೆಗೆ ಇಳಿದಿದ್ದಾರೆ. ಕೆಳಗೆ ಇಳಿದು ಸೆರೆ ಹಿಡಿಯುವಾಗ ಆನೆ ಪ್ರತ್ಯಕ್ಷವಾಗಿದ್ದು, ಇಬ್ಬರನ್ನು ಅಟ್ಟಿಸಿಕೊಂಡು ಬಂದಿದೆ. ಆನೆಯ ದಾಳಿಯಿಂದ ತಪ್ಪಿಸಿಕೊಳ್ಳಲು ಓಡಲು ಆರಂಭಿಸಿದ್ದಾರೆ. ಓಡುವಾಗ ಓರ್ವ ವ್ಯಕ್ತಿ ಕೆಳಗೆ ಬಿದ್ದಿದ್ದಾನೆ. ಆನೆ ಆತನನ್ನು ಸೊಂಡಿಲಿನಿಂದ ತಿವಿದಿದ್ದು, ವ್ಯಕ್ತಿ ಪಕ್ಕದಲ್ಲಿರುವ ಮರದ ಹಿಂದೆ ಅವಿತುಕೊಂಡಿದ್ದಾನೆ. ನಂತರ ಆನೆ ಕಾಡಿನೊಳಗೆ ಹೋಗಿದೆ.

ಇದನ್ನೂ ಓದಿ: ಮೋದಿ ಭೇಟಿ ಬಳಿಕ ಬಂಡೀಪುರ ಸಫಾರಿ ಕೇಂದ್ರದ ಚಿತ್ರಣ ಬದಲಾಯಿತಾದರೂ ಪ್ರವಾಸಿಗರಿಗಿನ್ನೂ ನಿರಾಸೆ: ಕಾರಣ ಇಲ್ಲಿದೆ

ಈ ಸಂಪೂರ್ಣ ಘಟನೆಯನ್ನು ಮತ್ತೊಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಸೆರೆ ಹಿಡಿದಿದ್ದಾರೆ. ವಿಡಿಯೋದಲ್ಲಿ ಮಹಿಳೆಯೊಬ್ಬರು ಮಲಯಾಳಂನಲ್ಲಿ ಮಾತನಾಡುತ್ತಿರುವುದು ಕೇಳಿಬರುತ್ತಿದೆ. ಘಟನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಯಾಗುತ್ತಿದ್ದು, ಓರ್ವ ಎಕ್ಸ್ (ಟ್ವಿಟರ್) ಬಳಕೆದಾರರು “ಬಂಡಿಪುರ-ವಯನಾಡ್ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಆನೆ ದಾಳಿಯಿಂದ ಬದುಕುಳಿದ ವ್ಯಕ್ತಿ ತುಂಬಾ ಅದೃಷ್ಟಶಾಲಿ.” ಎಂದು ಬರೆದುಕೊಂಡಿದ್ದಾರೆ.

ಮದ್ದೂರು ವ್ಯಾಪ್ತಿಯಲ್ಲಿ ಇಂತಹ ಘಟನೆ ನಡೆಯುತ್ತಿರುವುದು ಇದೇ ಮೊದಲಲ್ಲ. ಈ ಘಟನೆ ಯಾವಾಗ ನಡೆದಿದೆ ಎಂಬುದನ್ನು ಪತ್ತೆ ಹಚ್ಚಲು ಅರಣ್ಯಾಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ. ನಿಯಮ ಉಲ್ಲಂಘಿಸಿದ ಚಾಲಕ ಹಾಗೂ ಪ್ರಯಾಣಿಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪರಿಸರ ಪ್ರೇಮಿಗಳು ಒತ್ತಾಯಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:08 pm, Fri, 2 February 24