AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಈ ಭಾಗದ ಜನರಿಗೆ ಸಿಹಿಸುದ್ದಿ: ಟ್ರಾಫಿಕ್ ದಟ್ಟಣೆಗೆ ಸಿಗಲಿದೆ ಶೀಘ್ರ ಮುಕ್ತಿ

ಬೆಂಗಳೂರಿನಲ್ಲಿ ಜಿಗುಪ್ಸೆ ಹುಟ್ಟಿಸುವ ಭಯಾನಕ ಟ್ರಾಫಿಕ್ ಜಾಮ್​ಗೆ ಸಾಕ್ಷಿಯಾಗುವ ಮತ್ತೊಂದು ಪ್ರದೇಶ ಅಂದರೆ ಅದು ಮಾರುತಿ ಸೇವಾನಗರ. ಬಾಣಸವಾಡಿ ಹಾಗೂ ಔಟರ್​ ರಿಂಗ್ ರೋಡ್​​ಗೆ ಸಂಪರ್ಕ ಕಲ್ಪಿಸುವ ಈ ಮಾರ್ಗದಲ್ಲಿನ ಓಡಾಟ ದುಸ್ತರವಾಗಿದೆ. ಹೀಗಾಗಿ ರೋಸಿಹೋಗಿದ್ದ ವಾಹನ ಸವಾರರಿಗೆ ಜಿಬಿಎ ಗುಡ್ ನ್ಯೂಸ್ ನೀಡಿದೆ. ಈ ಭಾಗದ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ನೀಡಲು ಪ್ಲ್ಯಾನ್ ಮಾಡಲಾಗಿದೆ. ಏನದು? ಎನ್ನುವ ವಿವರ ಇಲ್ಲಿದೆ.

ಬೆಂಗಳೂರಿನ ಈ ಭಾಗದ ಜನರಿಗೆ ಸಿಹಿಸುದ್ದಿ:  ಟ್ರಾಫಿಕ್ ದಟ್ಟಣೆಗೆ ಸಿಗಲಿದೆ ಶೀಘ್ರ ಮುಕ್ತಿ
ರಮೇಶ್ ಬಿ. ಜವಳಗೇರಾ
|

Updated on:Feb 26, 2026 | 6:07 PM

Share

ಬೆಂಗಳೂರು, (ಫೆಬ್ರವರಿ 26): ಸಿಲಿಕಾನ್ ಸಿಟಿ ಬೆಂಗಳೂರಿನ ಕೆಲವು ಭಾಗಗಳಲ್ಲಿ (Bengaluru) ವಿಪರೀತ ಟ್ರಾಫಿಕ್ ಸಮಸ್ಯೆ (Traffic) . ಅದರಂತೆ ಬಾಣಸವಾಡಿ ಹಾಗೂ ಔಟರ್​ ರಿಂಗ್ ರೋಡ್​​ಗೆ ಸಂಪರ್ಕ ಕಲ್ಪಿಸುವ ಮಾರುತಿ ಸೇವಾನಗರ ಸಹ ಒಂದು. ಈ ಭಾಗದಲ್ಲಿ ವಾಹನ ದಟ್ಟಣೆ ವ್ಯಾಪಕವಾಗಿದ್ದು, ವಾಹನ ಸವಾರರು ರೋಸಿ ಹೋಗಿದ್ದಾರೆ. ಇದರಿಂದ ಎಚ್ಚೆತ್ತುಕೊಂಡಿರುವ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ (ಜಿಬಿಎ), ಇದಕ್ಕೆ ಮುಕ್ತಿ ನೀಡಲು ಮುಂದಾಗಿದೆ. ಹೌದು… ಬಾಣಸವಾಡಿ ಮುಖ್ಯ ರಸ್ತೆಯ ಐಒಸಿ ಜಂಕ್ಷನ್‌ನಲ್ಲಿ ಎಲಿವೇಟೆಡ್ ರೋಟರಿ ಮೇಲ್ಸೇತುವೆ ನಿರ್ಮಾಣ ಯೋಜನೆ ಮತ್ತೆ ಮುನ್ನೆಲೆಗೆ ಬಂದಿದೆ. ಈ ನಿಟ್ಟಿನಲ್ಲಿ ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಬಿ-ಸ್ಮೈಲ್ ಹಾಗೂ ಕೆ-ರೈಡ್ ಅಧಿಕಾರಿಗಳೊಂದಿಗೆ ಜಂಟಿ ಪರಿಶೀಲನೆ ನಡೆಸಿದ್ದಾರೆ.

ಎಲಿವೇಟೆಡ್ ಮೇಲ್ಸೇತುವೆ ಪ್ಲ್ಯಾನ್

ಅಂದಾಜು 380 ಕೋಟಿ ರೂ. ವೆಚ್ಚದಲ್ಲಿ 3 ರಿಂದ 4 ಕಿಲೋ ಮೀಟರ್ ಉದ್ದದ ಎಲಿವೇಟೆಡ್ ಮೇಲ್ಸೇತುವೆ ನಿರ್ಮಿಸಲು ಫ್ಲ್ಯಾನ್ ನಡೆದಿದೆ. ಈ ಎಲಿವೇಟೆಡ್ ಮೇಲ್ಸೇತುವೆ ಏನಾದರೂ ನಿರ್ಮಾಣವಾದರೆ ಮಾರುತಿ ಸೇವಾನಗರದ ಟ್ರಾಫಿಕ್ ದಟ್ಟಣೆಗೆ ಮುಕ್ತಿ ದೊರೆಯಲಿದೆ. ಇದನ್ನೇ ಸಾರ್ವಜನಿಕರು ಕಾಯುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಸವಾರರಿಗೆ ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಮಾರುತಿ ಸೇವಾನಗರ-ಬಾಣಸವಾಡಿ-ಕಮ್ಮನಹಳ್ಳಿ-ಬೈಯ್ಯಪ್ಪನಹಳ್ಳಿ ಸುತ್ತಮುತ್ತ ಸದ್ಯ ವಾಹನ ಸಂಚಾರ ದುಸ್ತರವಾಗಿದೆ. ಸದ್ಯ ಇರುವ ಮೇಲ್ಸೇತುವೆ ಅವೈಜ್ಞಾನಿಕವಾಗಿದ್ದು, ವ್ಯವಸ್ಥಿತ ಪ್ಲಾನ್​ ಇಲ್ಲದ ಹಿನ್ನೆಲೆ ಕಿರಿದಾಗಿದೆ. ಹೀಗಾಗಿ ಸದಾ ಮಿತಿಮೀರಿದ ಟ್ರಾಫಿಕ್ ಇಲ್ಲಿ ವಾಹನ ಸವಾರರಿಗೆ ನರಕಕೂಪವಾಗುತ್ತಿದೆ. ಹೀಗಾಗಿ ಶೀಘ್ರವೇ ಈ ಹೊಸ ಮೇಲ್ಸೇತುವೆ ಕಾರ್ಯ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಬೈಯ್ಯಪ್ಪನಹಳ್ಳಿ ರೈಲ್ವೆ ಲೆವೆಲ್ ಕ್ರಾಸಿಂಗ್‌ನಲ್ಲಿ ಹೆಚ್ಚುವರಿ 2-ಲೇನ್ ರೈಲ್ವೆ ಮೇಲ್ಸೇತುವೆ ನಿರ್ಮಾಣದ ಕುರಿತು ಕೂಡ ಕೆ-ರೈಡ್ ಮತ್ತು ಬಿ-ಸ್ಮೈಲ್ ಅಧಿಕಾರಿಗಳು ಚರ್ಚಿಸಿದ್ದಾರೆ. ಒಟ್ಟಾರೆ ಮಾರುತಿ ಸೇವಾನಗರದಲ್ಲಿ ಉದ್ಭವಿಸಿರುವ ಟ್ರಾಫಿಕ್ ಜಂಜಾಟಕ್ಕೆ ಮುಕ್ತಿ ಸಿಕ್ಕರೆ, ಸಾವಿರಾರು ಮಂದಿ ನಿಟ್ಟುಸಿರು ಬಿಡಲಿದ್ದಾರೆ.

ವರದಿ: ಲಕ್ಷ್ಮಿ ನರಸಿಂಹ ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:39 pm, Thu, 26 February 26

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ