Bengaluru: ವಿಕ್ರಂ ಇನ್ವೆಸ್ಟ್ಮೆಂಟ್ ವಂಚನೆ ಪ್ರಕರಣ; ಇಡಿಯಿಂದ 35.70 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಆಸ್ತಿ ಜಪ್ತಿ ಮಾಡಲಾಗಿದೆ. 2002 ರಲ್ಲಿ ನಡೆದಿದ್ದ ವಿಕ್ರಂ ಇನ್ವೆಸ್ಟ್ಮೆಂಟ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಆಸ್ತಿ ಮುಟ್ಟುಗೋಲು ಹಾಕಲಾಗಿದೆ.
ಬೆಂಗಳೂರು: ವಿಕ್ರಂ ಇನ್ವೆಸ್ಟ್ಮೆಂಟ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದಿಂದ (ED) ವಿಕ್ರಂ ಇನ್ವೆಸ್ಟ್ಮೆಂಟ್ ಆಸ್ತಿ ಮುಟ್ಟುಗೋಲು ಹಾಕಲಾಗಿದೆ. ಜಮೀನು, ಕಚೇರಿ, ಫ್ಲ್ಯಾಟ್ಸ್, ಬ್ಯಾಂಕ್ ಬ್ಯಾಲೆನ್ಸ್ ಸೇರಿ ಒಟ್ಟು 35.70 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಆಸ್ತಿ ಜಪ್ತಿ ಮಾಡಲಾಗಿದೆ. 2002 ರಲ್ಲಿ ನಡೆದಿದ್ದ ವಿಕ್ರಂ ಇನ್ವೆಸ್ಟ್ಮೆಂಟ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಆಸ್ತಿ ಮುಟ್ಟುಗೋಲು ಹಾಕಲಾಗಿದೆ.
ತುಮಕೂರು: ಶಾರ್ಟ್ ಸರ್ಕ್ಯೂಟ್ನಿಂದ ಹೊತ್ತಿ ಉರಿದ ಬ್ಯಾಂಕ್ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬ್ಯಾಂಕ್ ಹೊತ್ತಿ ಉರಿದ ಘಟನೆ ತುಮಕೂರಿನಲ್ಲಿ ಸಂಭವಿಸಿದೆ. ತುಮಕೂರಿನ ಎಸ್ವಿಸಿ ಕೋ ಆಪರೇಟಿವ್ ಬ್ಯಾಂಕ್ನಲ್ಲಿ ಬೆಂಕಿ ಅವಘಡ ಘಟಿಸಿದೆ. ತುಮಕೂರು ನಗರದ ಎಂ.ಜಿ. ರಸ್ತೆಯಲ್ಲಿರುವ ಎಸ್ವಿಸಿ ಬ್ಯಾಂಕ್ನಲ್ಲಿ ದುರ್ಘಟನೆ ಸಂಭವಿಸಿದೆ. ಅಗ್ನಿ ಅವಘಡದಲ್ಲಿ ಬ್ಯಾಂಕ್ನಲ್ಲಿದ್ದ ದಾಖಲೆಗಳು ಸುಟ್ಟುಭಸ್ಮವಾಗಿದೆ. ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ.
ಇದನ್ನೂ ಓದಿ: Kolar Cyber Crime: ಭಾರತೀಯ ಸೇನೆ ಹೆಸರಿನಲ್ಲಿ ಕೋಲಾರ ಎಪಿಎಂಸಿ ಮಂಡಿ ಮಾಲೀಕನಿಗೆ ವಂಚನೆ!
ಇದನ್ನೂ ಓದಿ: ಸರ್ಕಾರಿ ಇಲಾಖೆ ಸಿಬ್ಬಂದಿಯಿಂದಲೇ ವಂಚನೆ; ಮೇಲಾಧಿಕಾರಿಗಳ ಸಹಿ ನಕಲು ಮಾಡಿ 2 ಕೋಟಿ ರೂ. ಲೂಟಿ
Published On - 9:49 pm, Tue, 2 November 21