Karnataka Assembly Election: ಚುನಾವಣಾ ನೀತಿ ಸಂಹಿತೆ ಜಾರಿ; ಲೈಸೆನ್ಸ್ ಹೊಂದಿರುವ ಶಸ್ತ್ರಾಸ್ತ್ರ ಬಳಕೆಗೆ ನಿರ್ಬಂಧ
ಕರ್ನಾಟಕದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಲೈಸೆನ್ಸ್ ಹೊಂದಿರುವ ಶಸ್ತ್ರಾಸ್ತ್ರಗಳ ಬಳಕೆಗೆ ನಿರ್ಬಂಧ ಹೇರಲಾಗಿದೆ. ಏಪ್ರಿಲ್ 10ರೊಳಗೆ ಶಸ್ತ್ರಾಸ್ತ್ರಗಳನ್ನು ತಮ್ಮ ವ್ಯಾಪ್ತಿಯ ಠಾಣೆಗೆ ಒಪ್ಪಿಸಲು ಮತ್ತು ಮೇ 16ರ ಬಳಿಕ ವಾಪಸ್ಸ್ ಪಡೆಯಲು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ನೀಡಿದ್ದಾರೆ.
ಬೆಂಗಳೂರು: ಕರ್ನಾಟಕದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಲೈಸೆನ್ಸ್ ಹೊಂದಿರುವವರ ಶಸ್ತ್ರಾಸ್ತ್ರಗಳ ಬಳಕೆಗೆ ನಿರ್ಬಂಧ ಹೇರಲಾಗಿದೆ. ಹೌದು ನಿನ್ನೆ(ಮಾ.29) ವಿಧಾನಸಭೆ ಚುನಾವಣೆ(Karnataka Assembly Election) ದಿನಾಂಕ ನಿಗದಿಯಾದ್ದರಿಂದ ಕಟ್ಟನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಏಪ್ರಿಲ್ 10ರೊಳಗೆ ಶಸ್ತ್ರಾಸ್ತ್ರಗಳನ್ನು ತಮ್ಮ ವ್ಯಾಪ್ತಿಯ ಠಾಣೆಗೆ ಒಪ್ಪಿಸಲು ಮತ್ತು ಮೇ 16ರ ಬಳಿಕ ವಾಪಸ್ಸ್ ಪಡೆಯಲು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ನೀಡಿದ್ದಾರೆ.
ಪರವಾನಗಿ ಪಡೆದ ಬಂದೂಕುಗಳನ್ನು ಜಮಾ ಮಾಡುವಂತೆ ಜಿಲ್ಲಾಧಿಕಾರಿ ಯಶವಂತ ಗುರುಕರ್ ಆದೇಶ
ಕಲಬುರಗಿ: ಪರವಾನಗಿ ಪಡೆದ ಬಂದೂಕುಗಳನ್ನು ಜಮಾ ಮಾಡುವಂತೆ ಕಲಬುರಗಿ ಜಿಲ್ಲಾಧಿಕಾರಿ ಯಶವಂತ ಗುರುಕರ್ ಆದೇಶ ಹೊರಡಿಸಿದ್ದಾರೆ. ಚುನಾವಣೆ ನೀತಿ ಸಂಹಿತೆ ಜಾರಿಯಾದ ಹಿನ್ನಲೆಯಲ್ಲಿ ಸಂಬಂಧಪಟ್ಟ ಠಾಣೆಗಳಲ್ಲಿ ಆಯುಧ ಹೊಂದಿದವರು ಜಮೆ ಮಾಡುವಂತೆ ಸೂಚನೆ ನೀಡಲಾಗಿದೆ. ಇನ್ನು ಇದರಲ್ಲಿ ಅನುಮೋದಿತ ಶೆಡ್ಯೂಲ್ ಬ್ಯಾಂಕ್ ಭದ್ರತಾ ಸಿಬ್ಬಂದಿ ಹೊರತುಪಡಿಸಿ, ಉಳಿದವರು ತಮ್ಮ ಬಂದೂಕುಗಳನ್ನು ಠಾಣೆಗೆ ಜಮೆ ಮಾಡಲು ಮತ್ತು ಚುನಾವಣೆ ಮುಗಿಯೋವರೆಗೂ ಆಯುಧಗಳನ್ನು ಠಾಣೆಯಲ್ಲಿಡಬೇಕು ಎಂದು ಆದೇಶ ಹೊರಡಿಸಿದ್ದಾರೆ.
ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ