ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪಿಕ್ ಅಪ್ ವಾಹನಗಳಿಗೆ ಪ್ರವೇಶ ದರ ನಿಗದಿ; ಕ್ಯಾಬ್, ಟ್ಯಾಕ್ಸಿ ಚಾಲಕರ ಆಕ್ರೋಶ

ಏರ್ಪೋಟ್ ಆಡಳಿತ ಮಂಡಳಿ ನಿನ್ನೆಯಿಂದ ದರ ನಿಗದಿ ಮಾಡಿ ಪಿಕ್ ಅಪ್ ವಾಹನಗಳ ಚಾಲಕರಿಂದ ಹಣ ವಸೂಲಿ ಮಾಡ್ತಿದೆ. ಪಿಕಪ್​ಗೆ ಹಣ ವಸೂಲಿ ಮಾಡ್ತಿದ್ದಂತೆ ಚಾಲಕರು ಆಕ್ರೋಶ ಹೊರ ಹಾಕಿದ್ದಾರೆ.ಪ್ರಯಾಣಿಕರನ್ನ ಪಿಕಪ್ ಮಾಡಲು ಪ್ರವೇಶ ದರ 07 ನಿಮಿಷಕ್ಕೆ 150 ರೂ. ನಿಗದಿ ಮಾಡಲಾಗಿದೆ. ಇನ್ನು 07 ನಿಮಿಷಕ್ಕಿಂತ ಹೆಚ್ಚು ಕಾಲ ನಿಂತರೆ 300 ರೂ. ಪಾವತಿಸಬೇಕು.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪಿಕ್ ಅಪ್ ವಾಹನಗಳಿಗೆ ಪ್ರವೇಶ ದರ ನಿಗದಿ; ಕ್ಯಾಬ್, ಟ್ಯಾಕ್ಸಿ ಚಾಲಕರ ಆಕ್ರೋಶ
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪಿಕ್ ಅಪ್ ವಾಹನಗಳಿಗೆ ಪ್ರವೇಶ ದರ ನಿಗದಿ
Edited By: ಆಯೇಷಾ ಬಾನು

Updated on: May 21, 2024 | 12:29 PM

ದೇವನಹಳ್ಳಿ, ಮೇ.21: ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru International Airport) ವಾಹನಗಳಿಗೆ ಪ್ರವೇಶ ದರ ನಿಗದಿ ಮಾಡಲಾಗಿದ್ದು ವಾಹನ ಚಾಲಕರು ಏರ್ಪೋಟ್ ಆಡಳಿತ ಮಂಡಳಿ (Airport Administration) ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ನಾಳೆ (ಮೇ.22) ದರ ನಿಗದಿ ವಿರುದ್ಧ ಏರ್ಪೋಟ್​ನಲ್ಲಿ ಪ್ರತಿಭಟನೆ ನಡೆಸಲು ವಾಹನ ಚಾಲಕರು ಸಜ್ಜಾಗಿದ್ದಾರೆ. ಏರ್ಪೋಟ್​ನಲ್ಲಿ ಆಗಮನದ ದ್ವಾರದ ಬಳಿ ವಾಹನಗಳಲ್ಲಿ ಪ್ರಯಾಣಿಕರನ್ನು ಪಿಕಪ್ ಮಾಡುವುದಕ್ಕೆ ದರ ನಿಗದಿ ಮಾಡಲಾಗಿದೆ.

ಏರ್ಪೋಟ್ ಆಡಳಿತ ಮಂಡಳಿ ನಿನ್ನೆಯಿಂದ ದರ ನಿಗದಿ ಮಾಡಿ ಪಿಕ್ ಅಪ್ ವಾಹನಗಳ ಚಾಲಕರಿಂದ ಹಣ ವಸೂಲಿ ಮಾಡ್ತಿದೆ. ಪಿಕಪ್​ಗೆ ಹಣ ವಸೂಲಿ ಮಾಡ್ತಿದ್ದಂತೆ ಚಾಲಕರು ಆಕ್ರೋಶ ಹೊರ ಹಾಕಿದ್ದಾರೆ. ಇಷ್ಟು ದಿನ ಚಾಲಕರು ಉಚಿತವಾಗಿ ಪಿಕಪ್ ಮಾಡ್ತಿದ್ದರು. ಆದರೆ ಪಿಕಪ್ ಗೆ ಹೆಚ್ಚುವರಿ ಲೈನ್ ಮಾಡಿ ಹಣ ವಸೂಲಿ ಮಾಡಲಾಗುತ್ತಿದೆ. ಪ್ರಯಾಣಿಕರನ್ನ ಪಿಕಪ್ ಮಾಡಲು ಪ್ರವೇಶ ದರ 07 ನಿಮಿಷಕ್ಕೆ 150 ರೂ. ನಿಗದಿ ಮಾಡಲಾಗಿದೆ. ಇನ್ನು 07 ನಿಮಿಷಕ್ಕಿಂತ ಹೆಚ್ಚು ಕಾಲ ನಿಂತರೆ 300 ರೂ. ಪಾವತಿ ಮಾಡಬೇಕು. ಬಸ್ ಗೆ 600 ರೂಪಾಯಿ, ಟಿಟಿಗೆ 300 ರೂ ಪ್ರವೇಶ ದರ ನಿಗದಿ ಮಾಡಲಾಗಿದೆ. ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತ ಮಂಡಳಿ ಕಳೆದ ಭಾನುವಾರ ಈ ಹೊಸ ನಿಯಮವನ್ನ ಜಾರಿ ಮಾಡಿತ್ತು.

ಇದನ್ನೂ ಓದಿ: ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡಿದ್ದ ಯುವಕ ಸಾವು; ಐವರಿಗೆ ಮುಂದುವರೆದ ಚಿಕಿತ್ಸೆ

ಮತ್ತೊಂದೆಡೆ ಏರ್ಪೋಟ್ ಆಡಳಿತ ಮಂಡಳಿ ಮಾಡಿರುವ ಈ ಹೊಸ ದರ ನಿಗದಿ ಕ್ರಮಕ್ಕೆ ಯಲ್ಲೋ ಹಾಗೂ ವೈಟ್ ಬೋರ್ಡ್ ಚಾಲಕರು ಕಂಗಾಲಾಗಿದ್ದರು. ಅಲ್ಲದೇ ದರ ನಿಗದಿ ವಿರೋಧಿಸಿ ಕ್ಯಾಬ್ ಮತ್ತು ಟ್ಯಾಕ್ಸಿ ಚಾಲಕರು ಸೋಮವಾರ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು. ಟ್ತಾಕ್ಸಿ ಮತ್ತು ಕ್ಯಾಬ್ ಚಾಲಕರು ನಿನ್ನೆ ಪ್ರತಿಭಟನೆ ಮಾಡಿದ್ದ ಪರಿಣಾಮ ದರ ನಿಗದಿ ಸಂಗ್ರಹಣೆಗೆ ತಾತ್ಕಾಲಿಕವಾಗಿ ಬ್ರೇಕ್ ಬಿದ್ದಿದೆ. ಆದರೆ ಆಡಳಿತ ಮಂಡಳಿ ಮತ್ತೆ ಈ ಕ್ರಮ ಶುರು ಮಾಡುತ್ತಾರೆ ಎಂದು ಏರ್‌ಪೋರ್ಟ್ ಟ್ಯಾಕ್ಸಿ ಚಾಲಕರು ಇಂದು ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರನ್ನ ಭೇಟಿ ಮಾಡಲು ಮುಂದಾಗಿದ್ದಾರೆ. ಅಲ್ಲದೆ ನಾಳೆ ದರ ನಿಗದಿ ವಿರುದ್ಧ ಏರ್ಪೋಟ್​ನಲ್ಲಿ ಪ್ರತಿಭಟನೆಗೆ ಚಾಲಕರು ಸಜ್ಜಾಗಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us