AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಉದ್ಘಾಟಿಸಿದ ವಂದೇ ಭಾರತ್​​ನಿಂದ 2 ಗಂಟೆ ಕಡಿಮೆಯಾಗಲಿದೆ ಎರ್ನಾಕುಲಂ-ಬೆಂಗಳೂರು ಪ್ರಯಾಣದ ಸಮಯ

ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲು ಬೆಂಗಳೂರು- ಎರ್ನಾಕುಲಂ ನಡುವಿನ ರೈಲು ಪ್ರಯಾಣದ ಸಮಯವನ್ನು 2 ಗಂಟೆಗಳಿಗೂ ಹೆಚ್ಚು ಕಡಿತಗೊಳಿಸಲಿದೆ. ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದ 4 ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಲ್ಲಿ ಬೆಂಗಳೂರು-ಎರ್ನಾಕುಲಂ ಮಾರ್ಗದ ರೈಲು ಕೂಡ ಸೇರಿದೆ. ಇದು ಪ್ರಯಾಣದ ಸಮಯವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ.

ಮೋದಿ ಉದ್ಘಾಟಿಸಿದ ವಂದೇ ಭಾರತ್​​ನಿಂದ 2 ಗಂಟೆ ಕಡಿಮೆಯಾಗಲಿದೆ ಎರ್ನಾಕುಲಂ-ಬೆಂಗಳೂರು ಪ್ರಯಾಣದ ಸಮಯ
Vande Bharat Express
ಸುಷ್ಮಾ ಚಕ್ರೆ
|

Updated on: Nov 08, 2025 | 4:29 PM

Share

ಬೆಂಗಳೂರು, ನವೆಂಬರ್ 8: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ವಾರಾಣಸಿ ಕ್ಷೇತ್ರದಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲು ಸೇವೆಗೆ ಚಾಲನೆ ನೀಡಿದ್ದಾರೆ. ಇದರಲ್ಲಿ ಬೆಂಗಳೂರು-ಎರ್ನಾಕುಲಂ ಮಾರ್ಗದ ವಂದೇ ಭಾರತ್ ರೈಲು ಕೂಡ ಸೇರಿದೆ. ಇಂದು ಉದ್ಘಾಟನೆಗೊಂಡ ಈ 4 ರೈಲುಗಳು ಪ್ರಮುಖ ನಿಲ್ದಾಣಗಳ ನಡುವಿನ ಪ್ರಯಾಣದ ಸಮಯವನ್ನು ಬಹಳ ಕಡಿಮೆ ಮಾಡುತ್ತದೆ. ಬೆಂಗಳೂರು-ಎರ್ನಾಕುಲಂ ರೈಲು ಮಾರ್ಗ ಎರಡೂ ನಗರಗಳ ನಡುವಿನ ಪ್ರಯಾಣದ ಸಮಯವನ್ನು 2 ಗಂಟೆ ಕಡಿಮೆ ಮಾಡುತ್ತದೆ.

ಬೆಂಗಳೂರು- ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್ ಕೇರಳ, ತಮಿಳುನಾಡು ಮತ್ತು ಕರ್ನಾಟಕವನ್ನು ಸಂಪರ್ಕಿಸುತ್ತದೆ. ಈ ರೈಲು ಮೊದಲ ಅಂತರ್ ರಾಜ್ಯ ಅರೆ-ಹೈ-ಸ್ಪೀಡ್ ಪ್ರೀಮಿಯಂ ರೈಲು ಸೇವೆಯಾಗಿದೆ. ಬೆಂಗಳೂರು-ಎರ್ನಾಕುಲಂ ರೈಲಿನ ಪ್ರಮುಖ ನಿಲ್ದಾಣಗಳು ತ್ರಿಶೂರ್, ಪಾಲಕ್ಕಾಡ್, ಕೊಯಮತ್ತೂರು, ತಿರುಪ್ಪೂರು, ಈರೋಡ್, ಸೇಲಂ, ಕೃಷ್ಣರಾಜಪುರಂ ಮತ್ತು ಬೆಂಗಳೂರು ರೈಲ್ವೆ ನಿಲ್ದಾಣ.

ಇದನ್ನೂ ಓದಿ: ಕರ್ನಾಟಕಕ್ಕೆ ಗುಡ್ ನ್ಯೂಸ್; ಬೆಂಗಳೂರು-ಎರ್ನಾಕುಲಂ ಮಾರ್ಗದಲ್ಲಿ ವಂದೇ ಭಾರತ್ ರೈಲು ಸಂಚಾರಕ್ಕೆ ಅನುಮೋದನೆ

ಈ ರೈಲು ಕೇರಳದಿಂದ ಚಲಿಸುವ ಮೂರನೇ ವಂದೇ ಭಾರತ್ ರೈಲು. ಇದು ಪ್ರಯಾಣದ ಸಮಯವನ್ನು 2 ಗಂಟೆ 20 ನಿಮಿಷಗಳ ಕಾಲ ಕಡಿತಗೊಳಿಸಲಿದೆ. ಇಂಟರ್‌ಸಿಟಿ ವಂದೇ ಭಾರತ್ ಎಕ್ಸ್‌ಪ್ರೆಸ್ 8 ಗಂಟೆ 40 ನಿಮಿಷಗಳಲ್ಲಿ 583 ಕಿ.ಮೀ ದೂರವನ್ನು ಕ್ರಮಿಸಲಿದೆ.

ಬೆಂಗಳೂರು-ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್ ಬುಧವಾರ ಹೊರತುಪಡಿಸಿ ವಾರದ ದಿನಗಳಲ್ಲಿ ಚಲಿಸಲಿದೆ. ನವೆಂಬರ್ 9ರಿಂದ ಸೇವೆಯನ್ನು ಪ್ರಾರಂಭಿಸುವ ಈ ರೈಲು ಬೆಂಗಳೂರಿನಿಂದ ಬೆಳಿಗ್ಗೆ 5.10ಕ್ಕೆ ಹೊರಟು ಮಧ್ಯಾಹ್ನ 1.50ಕ್ಕೆ ಎರ್ನಾಕುಲಂಗೆ ತಲುಪಲಿದೆ. ವಾಪಾಸ್ ಈ ರೈಲು ಮಧ್ಯಾಹ್ನ 2.20ಕ್ಕೆ ಎರ್ನಾಕುಲಂನಿಂದ ಹೊರಟು ರಾತ್ರಿ 11 ಗಂಟೆಗೆ ಬೆಂಗಳೂರಿಗೆ ಆಗಮಿಸುತ್ತದೆ.

ಇದನ್ನೂ ಓದಿ: Video: ವಾರಾಣಸಿಯಲ್ಲಿ ನಾಲ್ಕು ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ

ಇದು ಕೇರಳದಿಂದ ಚಲಿಸುವ ಮೂರನೇ ವಂದೇ ಭಾರತ್ ರೈಲು. ಇದು ಪ್ರಯಾಣದ ಸಮಯವನ್ನು 2 ಗಂಟೆ 20 ನಿಮಿಷಗಳಿಂದ ಕಡಿತಗೊಳಿಸಲಾಗಿದ್ದು, ಇಂಟರ್‌ಸಿಟಿ ವಂದೇ ಭಾರತ್ ಎಕ್ಸ್‌ಪ್ರೆಸ್ 8 ಗಂಟೆ 40 ನಿಮಿಷಗಳಲ್ಲಿ 583 ಕಿ.ಮೀ ದೂರವನ್ನು ಕ್ರಮಿಸಲಿದೆ.

ಪ್ರಸ್ತುತ, ಎರ್ನಾಕುಲಂ ಮತ್ತು ಬೆಂಗಳೂರು ನಡುವಿನ ಇಂಟರ್‌ಸಿಟಿ ಎಕ್ಸ್‌ಪ್ರೆಸ್ 583 ಕಿ.ಮೀ ಮಾರ್ಗವನ್ನು ಕ್ರಮಿಸಲು 11 ಗಂಟೆಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಹೊಸ ವಂದೇ ಭಾರತ್ ರೈಲು ಈ ಪ್ರಯಾಣದ ಸಮಯವನ್ನು ಕೇವಲ 8 ಗಂಟೆ 40 ನಿಮಿಷಗಳಿಗೆ ಇಳಿಸಲಿದ್ದು, ಎರಡೂ ನಗರಗಳ ನಡುವೆ ವೇಗದ ಸಂಪರ್ಕವನ್ನು ಕಲ್ಪಿಸುತ್ತದೆ.

ಬೆಂಗಳೂರಿನ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?