700 ಕೋಟಿ ರೂ. ಮೌಲ್ಯದ ಅರಣ್ಯ ಭೂಮಿ ಒತ್ತುವರಿ ತೆರವಿಗೆ ಈಶ್ವರ ಖಂಡ್ರೆ ಆದೇಶ

700 ಕೋಟಿ ರೂ. ಮೌಲ್ಯದ 9 ಎಕರೆ ಅರಣ್ಯ ಭೂಮಿ ಒತ್ತುವರಿಯನ್ನು ತೆರವುಗೊಳಿಸುವಂತೆ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಆದೇಶಿಸಿದ್ದಾರೆ. ಹಾಗೇ ಅರಣ್ಯ ಭೂಮಿ ಒತ್ತುವರಿ ಮಾಡಿದ್ದವರಿಗೆ ಅನುಕೂಲ ಮಾಡಿಕೊಡುವ ಪ್ರಯತ್ನ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ.

700 ಕೋಟಿ ರೂ. ಮೌಲ್ಯದ ಅರಣ್ಯ ಭೂಮಿ ಒತ್ತುವರಿ ತೆರವಿಗೆ ಈಶ್ವರ ಖಂಡ್ರೆ ಆದೇಶ
ಈಶ್ವರ ಖಂಡ್ರೆ
Edited By: ವಿವೇಕ ಬಿರಾದಾರ

Updated on: Sep 20, 2024 | 12:57 PM

ಬೆಂಗಳೂರು, ಸೆಪ್ಟೆಂಬರ್​ 20: ಬೆಂಗಳೂರು (Bengaluru) ಪೂರ್ವ ತಾಲೂಕು ಕೆ.ಆರ್.ಪುರ (KR Pura) ಹೋಬಳಿ ಕೊತ್ತನೂರಿನ ಸರ್ವೆ ನಂ.48ರಲ್ಲಿ ಸುಮಾರು 700 ಕೋಟಿ ರೂ. ಮೌಲ್ಯದ 9 ಎಕರೆ ಅರಣ್ಯ ಭೂಮಿ (Forest Land) ಒತ್ತುವರಿಯನ್ನು ತೆರವುಗೊಳಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ (Eshwar Khandre) ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರು ನಗರದಲ್ಲಿ ಹಸಿರು ಹೊದಿಕೆ ಹೆಚ್ಚಿಸಲು 1999-2000 ಸಾಲಿನಲ್ಲಿ ಕೊತ್ತನೂರು ಸರ್ವೆ ನಂ.48ರಲ್ಲಿ 22.08 ಎಕರೆ ಜಮೀನಿನಲ್ಲಿ ನೆಡುತೋಪು ಅಭಿವೃದ್ಧಿಪಡಿಸುವ ಸಲುವಾಗಿ ಈ ಭೂಮಿಯನ್ನು ಅರಣ್ಯ ಇಲಾಖೆಗೆ ನೀಡಲಾಗಿದೆ.

ಆದರೆ ಈ ಜಮೀನು ವಶಕ್ಕೆ ಪಡೆದು ಅರಣ್ಯ ಬೆಳೆಸುವಲ್ಲಿ ಹಿಂದಿನ ಅಧಿಕಾರಿಗಳ ವಿಫಲರಾಗಿದ್ದರು. 22.08 ಎಕರೆ ಭೂಮಿಯ ಪೈಕಿ 13 ಎಕರೆ ಜಮೀನನ್ನು ಅರಣ್ಯ ಇಲಾಖೆಗೆ ವಹಿಸಲಾಗಿದೆ ಎಂದು ಅಂದಿನ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಆರ್​ಹೆಚ್​ಎಸ್​ (2) 44/82-83 ಡಿಟಿ​ 25.01.2000ರ ಆದೇಶದಂತೆ ಪಹಣಿ (ಆರ್.ಟಿ.ಸಿ.) ಯಲ್ಲಿ ನಮೂದಾಗಿದೆ.

ಈ ಜಮೀನಿನ ನಕ್ಷೆ ಪಡೆದು ಉಳಿದ 9 ಎಕರೆಯ ದಾಖಲೆಗಳನ್ನೂ ಮಾಡಿಸಿ, ಸುಮಾರು 700 ಕೋಟಿ ರೂ. ಬೆಲೆ ಬಾಳುವ ಜಮೀನು ಒತ್ತುವರಿಯಾಗಿದ್ದರೆ ಕ್ರಮವಹಿಸಿ. ಜಮೀನನ್ನ ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು 64(ಎ) ಪ್ರಕ್ರಿಯೆ ಆರಂಭಿಸಲು ಅಧಿಕಾರಿಗಳಿಗೆ ಖಂಡ್ರೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಕಂದಾಯ ಅರಣ್ಯ ಭೂಮಿ ಒತ್ತುವರಿ ಆರೋಪ, ರೆಸಾರ್ಟ್ ಮಾಲೀಕರ ಜೊತೆ ಜಿಲ್ಲಾಧಿಕಾರಿ ಶಾಮೀಲು -ಸಿಬಿಐಗೆ ದೂರು

ಅರಣ್ಯ ಇಲಾಖೆಗೆ ಮಂಜೂರಾಗಿದ್ದ ಈ ಭೂಮಿಯನ್ನು ವಶಕ್ಕೆ ಪಡೆಯದೇ ಅಂದಿನ ಉಪ ವಿಭಾಗಾಧಿಕಾರಿಯಾಗಿದ್ದ ಎಂ.ಜಿ. ಶಿವಣ್ಣ ಮತ್ತು ತಹಶೀಲ್ದಾರ್ ಅಜಿತ್ ರೈ ಏಕಪಕ್ಷೀಯವಾಗಿ ‘ಸರ್ಕಾರಿ ಭೂಮಿ’ ಎಂದು ಬದಲಾಯಿಸಿದ್ದಾರೆ. ಅರಣ್ಯ ಭೂಮಿ ಒತ್ತುವರಿ ಮಾಡಿದ್ದವರಿಗೆ ಅನುಕೂಲ ಮಾಡಿಕೊಡುವ ಪ್ರಯತ್ನ ಮಾಡಿದ್ದಾರೆ. ಹೀಗಾಗಿ ಅಸಿಸ್ಟೆಂಟ್ ಕಮಿಷನರ್ ಮತ್ತು ತಹಶೀಲ್ದಾರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸೂಚನೆ ನೀಡಿದ್ದಾರೆ.

ಸಚಿವರ ಸೂಚನೆ ಮೇರೆಗೆ ಇಬ್ಬರು ಹಿರಿಯ ಕೆಎಎಸ್ ಅಧಿಕಾರಿಗಳ ವಿರುದ್ಧ ಅರಣ್ಯ ಸಂರಕ್ಷಣಾ ಕಾಯ್ದೆ 1980ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us