ಬೆಂಗಳೂರಿನಲ್ಲಿ ನಿವೃತ್ತ ಸೈನಿಕನ ಬರ್ಬರ ಹತ್ಯೆ, ಬಳ್ಳಾರಿಯಲ್ಲಿ ಕಸದ ರಾಶಿ ಕುಸಿದು ಇಬ್ಬರು ಕಾರ್ಮಿಕರ ಸಾವು

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಸುಲ್ತಾನಪುರದಲ್ಲಿ ಘಟನೆ ನಡೆದಿದೆ. ಕಬ್ಬಿಣ ಆಯುವ ಇಬ್ಬರು ಕೂಲಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಕುಡತಿನಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಬೆಂಗಳೂರಿನಲ್ಲಿ ನಿವೃತ್ತ ಸೈನಿಕನ ಬರ್ಬರ ಹತ್ಯೆ, ಬಳ್ಳಾರಿಯಲ್ಲಿ ಕಸದ ರಾಶಿ ಕುಸಿದು ಇಬ್ಬರು ಕಾರ್ಮಿಕರ ಸಾವು
ಬೆಂಗಳೂರಿನಲ್ಲಿ ನಿವೃತ್ತ ಸೈನಿಕನ ಬರ್ಬರ ಹತ್ಯೆ
Follow us
TV9 Web
| Updated By: ganapathi bhat

Updated on: Apr 13, 2022 | 6:35 PM

ಬೆಂಗಳೂರು: ನಗರದಲ್ಲಿ ದುಷ್ಕರ್ಮಿಗಳು ನಿವೃತ್ತ ಸೈನಿಕನನ್ನು ಬರ್ಬರವಾಗಿ ಹತ್ಯೆಗೈದ ದುರ್ಘಟನೆ ಸಂಭವಿಸಿದೆ. ಬೆಂಗಳೂರಿನ ಹಲಸೂರು ಠಾಣಾ ವ್ಯಾಪ್ತಿಯಲ್ಲಿ ನಿವೃತ್ತ ಸೈನಿಕ ಸುರೇಶ್ ಅಲಿಯಾಸ್ ಜೂಡ್ ಬರ್ಬರ ಹತ್ಯೆ ಮಾಡಲಾಗಿದೆ. ಮನೆಯಲ್ಲಿ ಒಂಟಿಯಾಗಿರುವಾಗ ಸುರೇಶ್​ ಬರ್ಬರ ಕೊಲೆ ನಡೆಸಲಾಗಿದೆ. ಇತ್ತ ಬಳ್ಳಾರಿಯ ಸುಲ್ತಾನಪುರ ಬಳಿ ಕಸದ ರಾಶಿ ಕುಸಿದು ಇಬ್ಬರು ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ. JSW ಡಂಪಿಂಗ್ ಯಾರ್ಡ್​ನಲ್ಲಿ ದುರ್ಘಟನೆ ನಡೆದಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಸುಲ್ತಾನಪುರದಲ್ಲಿ ಘಟನೆ ನಡೆದಿದೆ. ಕಬ್ಬಿಣ ಆಯುವ ಇಬ್ಬರು ಕೂಲಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಕುಡತಿನಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ವಿಚಾರಣಾಧೀನ ಕೈದಿ ಜತಿನ್ ಕುಮಾರ್ ಆತ್ಮಹತ್ಯೆಗೆ ಯತ್ನ

ಕೋರ್ಟ್​ನ 5ನೇ ಮಹಡಿಯಿಂದ ಜಿಗಿದು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿಚಾರಣಾಧೀನ ಕೈದಿ ಜತಿನ್ ಕುಮಾರ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. 2020ರಲ್ಲಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತನ್ನ ಮಕ್ಕಳನ್ನೇ ಹತ್ಯೆಗೈದ ಆರೋಪ ಜತಿನ್ ಮೇಲಿತ್ತು. ಹುಳಿಮಾವು ಪೊಲೀಸರಿಂದ ಬಂಧಿತನಾಗಿದ್ದ ಆರೋಪಿ ವಿಚಾರಣೆ ಹಿನ್ನೆಲೆ ಇಂದು ಕೋರ್ಟ್​ಗೆ ಕರೆತರಲಾಗಿತ್ತು. ಪೊಲೀಸರಿಂದ ತಪ್ಪಿಸಿಕೊಂಡು ಜತಿನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗಾಯಾಳು ಆರೋಪಿ ಜತಿನ್​ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣ; ತನಿಖೆ ಕೈಗೆತ್ತಿಕೊಂಡ ಆ್ಯಂಟಿ ಟೆರರಿಸಂ ಸೆಲ್

ನಗರದಲ್ಲಿ ಒಟ್ಟು 15 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿರುವ ಬಗ್ಗೆ ತಿಳಿದುಬಂದಿದ್ದು, 10 ಕ್ಕೂ ಅಧಿಕ ಇಮೇಲ್‌ಗಳಿಂದ ಬೆದರಿಕೆ ಬಂದಿದೆ. Proxy server ಬಳಸಿ ದುಷ್ಕರ್ಮಿಗಳು ಮೇಲ್ ಮಾಡಿದ್ದಾರೆ. 8- 10 Proxy server ಬಳಸಿರುವುದರಿಂದ ಹಲವಾರು ಲೇಯರ್‌ಗಳಿವೆ. ಒಂದು ಲೇಯರ್ ಪತ್ತೆ ಮಾಡಿದ್ರೆ, ಅದು ಇನ್ನೊಂದು ಲೇಯರ್‌ಗೆ ಕನೆಕ್ಟ್ ಆಗತ್ತೆ ಎಂಬ ಬಗ್ಗೆ ಮಾಹಿತಿ ಲಭಿಸಿದೆ. ಇಮೇಲ್ ಮೂಲ ಪತ್ತೆ ಹಚ್ಚಲು ಗೂಗಲ್ ಸಂಸ್ಥೆಗೆ ಪತ್ರ ಬರೆಯಲಾಗಿದೆ. ಐಟಿ ಆ್ಯಕ್ಟ್, 66F ಅಡಿ ಪ್ರಕರಣ ದಾಖಲಾಗಿರೋದ್ರಿಂದ ಪ್ರಕರಣಕ್ಕೆ ಗಂಭೀರತೆ ಇದೆ. ತನಿಖೆ ನಡೆಸ್ತಿರುವ ಪೊಲೀಸರಿಗೆ ಎಟಿಸಿಯಿಂದಲೂ ಸಾಥ್ ನೀಡಲಾಗುತ್ತದೆ ಎಂಬ ಬಗ್ಗೆ ಮಾಹಿತಿ ಲಭಿಸಿದೆ. ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಪ್ರಕರಣದ ತನಿಖೆ ಎಟಿಸಿ ಹೆಗಲಿಗೆ ನೀಡಲಾಗಿದೆ. ಆ್ಯಂಟಿ ಟೆರರಿಸಂ ಸೆಲ್ ತನಿಖೆಯನ್ನು ಕೈಗೆತ್ತಿಕೊಂಡಿದೆ.

ಯಾದಗಿರಿ: ಬಸ್​ನಲ್ಲಿದ್ದ ಖಾರದ ಪುಡಿ ಬ್ಯಾಗ್ ಒಡೆದು 15 ಪ್ರಯಾಣಿಕರ ಕಣ್ಣಲ್ಲಿ ಖಾರದಪುಡಿ ಬಿದ್ದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿಯಿಂದ ಗುರುಮಠಕಲ್​ ಕಡೆ ತೆರಳುತ್ತಿದ್ದ ಬಸ್​ನಲ್ಲಿ ಘಟನೆ ನಡೆದಿದೆ. ಮಕ್ಕಳು ಸೇರಿದಂತೆ 15 ಪ್ರಯಾಣಿಕರ ಕಣ್ಣಿಗೆ ಖಾರದ ಪುಡಿ ಬಿದ್ದಿದೆ.

ಉದ್ಯೋಗ ಖಾತ್ರಿ ಕೂಲಿ ಕೆಲಸಕ್ಕೆ ಹೋಗಿದ್ದ ಬಾಲಕ (16) ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್‌ ತಾಲೂಕಿನ ಗಾಜರಕೋಟ್ ಗ್ರಾಮದಲ್ಲಿ ಸಂಭವಿಸಿದೆ. ಅಜ್ಜಿ ಪಾಲಿನ ಕೆಲಸಕ್ಕೆ ಹೋಗಿದ್ದ ಬಾಲಕ ಕೆರೆಯಲ್ಲಿ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಸಾವಿಗೆ ಅಧಿಕಾರಿಗಳೆ ಕಾರಣ‌ ಎಂದು ಆರೋಪ ಮಾಡಲಾಗಿದೆ. ಪಂಚಾಯತ್ ಅಧಿಕಾರಿಗಳ ವಿರುದ್ಧ ಬಾಲಕನ ಕುಟುಂಬಸ್ಥರ ಆರೋಪ ವ್ಯಕ್ತವಾಗಿದೆ.

ಇದನ್ನೂ ಓದಿ: Bengaluru Crime ಲೆಕ್ಚರರ್ ಮಗನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಯುವಕ ಅರೆಸ್ಟ್​

ಇದನ್ನೂ ಓದಿ: Bengaluru Crime: ವಾಕಿಂಗ್ ಮಾಡುವ ಮಹಿಳೆಯರ ಪೋಟೋ ವಿಡಿಯೋ ತೆಗೆಯುತ್ತಿದ್ದ ವ್ಯಕ್ತಿಯ ಬಂಧನ

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?