ಉಕ್ರೇನ್ನಿಂದ ಬಂದ ಎಂಬಿಬಿಎಸ್ ವಿದ್ಯಾರ್ಥಿಗಳ ಭವಿಷ್ಯವೇನು? ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಟ್ವೀಟ್
ಕರ್ನಾಟಕದ 800-1000 ಮಕ್ಕಳು ಸೇರಿ ಭಾರತದ 20,000ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳು ತಾಯ್ನಾಡಿಗೆ ಮರಳಿದ್ದಾರೆ. ಇನ್ನೂ ಕೆಲವರು ಬರುವವರಿದ್ದಾರೆ. ಅವರೆಲ್ಲರ ಶೈಕ್ಷಣಿಕ ಭವಿಷ್ಯ ಏನು? ಪೋಷಕರು ಸಾಲ ಮಾಡಿ ಮಕ್ಕಳನ್ನು ಉಕ್ರೇನ್ಗೆ ಕಳಿಸಿದ್ದರು.
ಬೆಂಗಳೂರು: ಉಕ್ರೇನ್ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಭಾರತೀಯ ವಿದ್ಯಾರ್ಥಿಗಳು (Students) ದೇಶಕ್ಕೆ ವಾಪಸಾಗುತ್ತಿದ್ದಾರೆ. ಯುದ್ಧದ ಹಿನ್ನೆಲೆ ವಿದ್ಯಾಭ್ಯಾಸ ಅರ್ಧಕ್ಕೆ ನಿಲ್ಲಿಸಿ ಬಂದಿರುವ ವಿದ್ಯಾರ್ಥಿಗಳ ಮುಂದಿನ ಭವಿಷ್ಯವೇನು? ಎಂಬ ಪ್ರಶ್ನೆ ಸದ್ಯ ಎಲ್ಲರನ್ನು ಕಾಡುತ್ತಿದೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಕೂಡಾ ಟ್ವೀಟ್ ಮಾಡಿದ್ದು, ಮಕ್ಕಳ ಭವಿಷ್ಯದ ಬಗ್ಗೆ ಪ್ರಶ್ನಿಸಿದ್ದಾರೆ. ‘ಆಪರೇಷನ್ ಗಂಗಾ’ ಹೆಸರಿನಲ್ಲಿ ಕೇಂದ್ರ ಸರಕಾರ ಉಕ್ರೇನ್ನಿಂದ ವಿದ್ಯಾರ್ಥಿಗಳನ್ನು ಏರ್ ಲಿಫ್ಟ್ ಮಾಡಿದೆ. ಆದರೆ ಆ ವೈದ್ಯ ವಿದ್ಯಾರ್ಥಿಗಳ ಭವಿಷ್ಯವೇನು? ಮತ್ತೆ ಆ ದೇಶಕ್ಕೆ ಹೋಗಲು ಸಾಧ್ಯವಿಲ್ಲ. ಅಲ್ಲಿನ ಶಿಕ್ಷಣ ಸಂಸ್ಥೆ, ವಿವಿಗಳನ್ನೂ ರಷ್ಯಾ ಸೇನೆ ಧ್ವಂಸ ಮಾಡಿದೆ ಎಂದು ಮಾಧ್ಯಮಗಳೇ ತೋರಿಸುತ್ತಿವೆ ಎಂದು ಟ್ವೀಟ್ ಮಾಡಿದ್ದಾರೆ.
ಕರ್ನಾಟಕದ 800-1000 ಮಕ್ಕಳು ಸೇರಿ ಭಾರತದ 20,000ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳು ತಾಯ್ನಾಡಿಗೆ ಮರಳಿದ್ದಾರೆ. ಇನ್ನೂ ಕೆಲವರು ಬರುವವರಿದ್ದಾರೆ. ಅವರೆಲ್ಲರ ಶೈಕ್ಷಣಿಕ ಭವಿಷ್ಯ ಏನು? ಪೋಷಕರು ಸಾಲ ಮಾಡಿ ಮಕ್ಕಳನ್ನು ಉಕ್ರೇನ್ಗೆ ಕಳಿಸಿದ್ದರು. ಯುದ್ಧದಿಂದ ಅವರ ಶಿಕ್ಷಣ ಅತಂತ್ರವಾಗಿದೆ ಅಂತ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಯುದ್ಧಭೂಮಿಯಿಂದ ಜೀವ ಉಳಿಸಿಕೊಂಡು ಬಂದ ವಿದ್ಯಾರ್ಥಿಗಳ ಭವಿಷ್ಯವನ್ನು ಮತ್ತೆ ಕಟ್ಟಿಕೊಡುವುದು ಕೇಂದ್ರ ಸರಕಾರದ ಕರ್ತವ್ಯ. ಕರ್ನಾಟಕದಲ್ಲಿ 50-60 ವೈದ್ಯ ಕಾಲೇಜುಗಳಿವೆ. ಅಗತ್ಯಬಿದ್ದರೆ ಒಂದು ಪ್ರವೇಶ ಪರೀಕ್ಷೆ ನಡೆಸಿ, ಇಷ್ಟೂ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲಿ. ಪ್ರತಿ ಕಾಲೇಜು ತಲಾ 10 ಮಕ್ಕಳಿಗಾದರೂ ಉಚಿತ ಶಿಕ್ಷಣ ನೀಡಲಿ ಅಂತ ಹೆಚ್ಡಿಕೆ ಒತ್ತಾಯಿಸಿದ್ದಾರೆ.
2,65,720 ಕೋಟಿ ರೂ.ಗಳಷ್ಟು ಬಜೆಟ್ ಗಾತ್ರದ ಕರ್ನಾಟಕಕ್ಕೆ 50ರಿಂದ 100 ಕೋಟಿ ರೂ. ಖರ್ಚು ಮಾಡುವುದು ಕಷ್ಟವೇ ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ಈ ಮೊತ್ತದಲ್ಲಿ ಅರ್ಧಪಾಲನ್ನು ಕೇಂದ್ರ ಸರಕಾರವೇ ನೀಡಲಿ. ನೀಟ್ ಮೂಲಕ ಶೇ.50 ಸೀಟುಗಳನ್ನು ಕೇಂದ್ರ ಇಟ್ಟುಕೊಳ್ಳುವುದಿಲ್ಲವೇ? ಎಂದು ಟ್ವೀಟ್ನಲ್ಲಿ ಕೇಳಿದ್ದಾರೆ.
‘ಆಪರೇಷನ್ ಗಂಗಾ’ ಹೆಸರಿನಲ್ಲಿ ಕೇಂದ್ರ ಸರಕಾರ ಉಕ್ರೇನ್ʼನಿಂದ ವಿದ್ಯಾರ್ಥಿಗಳನ್ನು ಏರ್ʼಲಿಫ್ಟ್ ಮಾಡಿದೆ ಎಂಬುದೇನೋ ಸರಿ. ಆದರೆ, ಆ ವೈದ್ಯ ವಿದ್ಯಾರ್ಥಿಗಳ ಭವಿಷ್ಯವೇನು? ಮತ್ತೆ ಆ ದೇಶಕ್ಕೆ ಹೋಗಲು ಸಾಧ್ಯವಿಲ್ಲ. ಅಲ್ಲಿನ ಶಿಕ್ಷಣ ಸಂಸ್ಥೆ, ವಿವಿಗಳನ್ನೂ ರಷ್ಯಾ ಸೇನೆ ಧ್ವಂಸ ಮಾಡಿದೆ ಎಂದು ಮಾಧ್ಯಮಗಳೇ ತೋರಿಸುತ್ತಿವೆ. 1/5
— H D Kumaraswamy (@hd_kumaraswamy) March 7, 2022
ಇದನ್ನೂ ಓದಿ
Published On - 11:33 am, Mon, 7 March 22