ಸಿಎಂ ಬೊಮ್ಮಾಯಿ ಮಂಗಳೂರಿನಲ್ಲಿ ಇದ್ದಾಗಲೇ ಮೂರನೇ ಕೊಲೆಯಾಗಿದೆ; ಹೆಚ್ಡಿ ಕುಮಾರಸ್ವಾಮಿ ಟ್ವೀಟ್
ಶಿಕ್ಷಣ, ಬ್ಯಾಂಕಿಂಗ್ ಹಾಗೂ ಕೈಗಾರಿಕೆ, ಸೃಜನಶೀಲತೆ, ಉದ್ಯಮಶೀಲತೆ ತವರು ಕರಾವಳಿ ಈಗ ಕೊಲೆಗಳ ಆಡಂಬೋಲವಾಗಿದೆ. ಕರಾವಳಿಯಲ್ಲಿ ಕಳೆದ 10 ದಿನಗಳಲ್ಲಿ ಮೂರು ಕೊಲೆಯಾಗಿವೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಬೆಂಗಳೂರು: ನಿನ್ನೆ (ಜುಲೈ 28) ಸುರತ್ಕಲ್ನಲ್ಲಿ ನಡೆದ ಫಾಜಿಲ್ ಕೊಲೆ ಖಂಡಿಸಿ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಟ್ವೀಟ್ ಮಾಡಿದ್ದಾರೆ. ಸಿಎಂ ಬೊಮ್ಮಾಯಿಯವರು (CM Bommai) ಮಂಗಳೂರಿನಲ್ಲಿ ಇದ್ದಾಗಲೇ ಮೂರನೇ ಕೊಲೆಯಾಗಿದೆ. ಅಷ್ಟರಲ್ಲಿ ಸಿಎಂ ಸಾಹೇಬರು ಜಿಲ್ಲೆಯಿಂದ ಕಾಲ್ಕಿತ್ತಿದ್ದಾರೆ. ಅಲ್ಲೇ ಉಳಿದು ಪರಿಸ್ಥಿತಿ ಅವಲೋಕಿಸಿ, ಹಂತಕರನ್ನ ಬಂಧಿಸುವಂತೆ ಕಟ್ಟಾಜ್ಞೆ ಮಾಡುವ ಧೈರ್ಯ ತೋರಲಿಲ್ಲ. ಅವರ ಅಧೈರ್ಯಕ್ಕೆ ಕಾರಣವೇನು?, ಕಾಣದ ಕೈಗಳ ಒತ್ತಡವೇನಾದರೂ ಉಂಟಾ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಕರಾವಳಿಯಲ್ಲಿ ಸರಣಿ ಹತ್ಯೆಗಳನ್ನ ಖಂಡಿಸಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಕರಾವಳಿ ಶಿಕ್ಷಣದ ಕಾಶಿ, ಪ್ರಾಕೃತಿಕ ಸೌಂದರ್ಯದ ಬೀಡು. ದೇಗುಲಗಳ ಪುಣ್ಯನೆಲ, ಪ್ರವಾಸೋದ್ಯಮದಲ್ಲಿ ರಾಜ್ಯದ ಕೀರ್ತಿಕಳಸ. ಇಂಥ ನೆಲದಲ್ಲಿ ದಿನಕ್ಕೊಂದು ಹತ್ಯೆ, ಕೊಲೆಗಳನ್ನ ಹತ್ತಿಕ್ಕುವ ಬದಲು ಸಿಎಂ ಬೊಮ್ಮಾಯಿಯವರು ಬುಲ್ಡೋಜರ್ ಬಗ್ಗೆ ಮಾತಾಡ್ತಿದ್ದಾರೆ. ಕರಾವಳಿ ಮತ್ತು ಕರ್ನಾಟಕ ಜಂಗಲ್ ರಾಜ್ ಮಾಡುವ ಹುನ್ನಾರವಷ್ಟೇ ಎಂದು ವಾಗ್ದಾಳಿ ನಡೆಸಿದ್ದಾರೆ.
ಶಿಕ್ಷಣ, ಬ್ಯಾಂಕಿಂಗ್, ಕೈಗಾರಿಕೆ, ಸೃಜನಶೀಲತೆ, ಉದ್ಯಮಶೀಲತೆ ತವರು ಕರಾವಳಿ ಈಗ ಕೊಲೆಗಳ ಆಡಂಬೋಲವಾಗಿದೆ. 10 ದಿನಗಳಲ್ಲಿ 3 ಕೊಲೆ! ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ, ಆಂತರಿಕ ಭದ್ರತೆ ಸಂಪೂರ್ಣವಾಗಿ ಕುಸಿದಿರುವುದಕ್ಕೆ ಇದೇ ಸಾಕ್ಷಿ. 1/7#ಕರಾವಳಿಯಲ್ಲಿ_ಶಾಂತಿ_ನೆಲೆಸಲಿ
— H D Kumaraswamy (@hd_kumaraswamy) July 29, 2022
ಇದನ್ನೂ ಓದಿ: Sanjay Dutt: ಹುಟ್ಟುಹಬ್ಬದ ಸಂಭ್ರಮದಲ್ಲಿ ಸಂಜಯ್ ದತ್; ‘ಕೆಜಿಎಫ್ 2’ ಅಧೀರನಿಗೆ ಶುಭಾಶಯಗಳ ಮಹಾಪೂರ
ಶಿಕ್ಷಣ, ಬ್ಯಾಂಕಿಂಗ್ ಹಾಗೂ ಕೈಗಾರಿಕೆ, ಸೃಜನಶೀಲತೆ, ಉದ್ಯಮಶೀಲತೆ ತವರು ಕರಾವಳಿ ಈಗ ಕೊಲೆಗಳ ಆಡಂಬೋಲವಾಗಿದೆ. ಕರಾವಳಿಯಲ್ಲಿ ಕಳೆದ 10 ದಿನಗಳಲ್ಲಿ ಮೂರು ಕೊಲೆಯಾಗಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ, ಆಂತರಿಕ ಭದ್ರತೆ ಕುಸಿದಿದೆ. ಮಸೂದ್ ಹಾಗೂ ಪ್ರವೀಣ್ ನೆಟ್ಟಾರು, ಈಗ ಫಾಜಿಲ್ ಹತ್ಯೆ. ಇನ್ನೆಷ್ಟು ಕೊಲೆಗಳು ನಡೆದರೆ ಈ ಸರ್ಕಾರಕ್ಕೆ ತೃಪ್ತಿ? ಸರಣಿ ಹತ್ಯೆಗಳಿಂದ ಕರಾವಳಿಗಷ್ಟೇ ಅಲ್ಲ, ರಾಜ್ಯದ ಪ್ರತಿಷ್ಠೆಗೂ ಪೆಟ್ಟು. ಈ ಅರಾಜಕತೆಯಿಂದ ಕರಾವಳಿ ಆರ್ಥಿಕತೆಯೇ ಬುಡಮೇಲಾಗುತ್ತಿದೆ. ಆದರೆ ಈ ಸರ್ಕಾರ ಸಾವಿನಲ್ಲೂ ಕೊಲೆಗಡುಕ ರಾಜಕಾರಣ ಮಾಡುತ್ತಿದೆ ಎಂದು ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಕೊಲೆಗೆಡುಕರನ್ನು ಹತ್ತಿಕ್ಕುವ ಕೆಲಸ ಮಾಡಬೇಕಿದ್ದ ಬಿಜೆಪಿ ಸರ್ಕಾರ ಪ್ರತೀ ಕೊಲೆಗೂ ತಾನೇ ಮುಂದೆ ನಿಂತು ಹೊಸಹೊಸ ಟ್ವಿಸ್ಟ್ ನೀಡುತ್ತಿದೆ. ಸರ್ಕಾರದ ಕೆಲಸ ಬಿಗಿ ಆಡಳಿತ ನಡೆಸುವುದೇ ಹೊರತು, ಬೀದಿಯಲ್ಲಿ ನಿಂತು ಗಂಟಲು ಹರಿದುಕೊಳ್ಳುವುದಲ್ಲ ಎಂದು ಹೆಚ್ಡಿಕೆ ಹೇಳಿದ್ದಾರೆ.
ಕೇವಲ ಮಾತುಗಳಿಂದ ಸಮಸ್ಯೆ ಬಗೆಹರಿಯುವುದಿಲ್ಲ- ಕುಮಾರಸ್ವಾಮಿ: ಇನ್ನು ಟಿವಿ9 ಜೊತೆ ಮಾತನಾಡಿರುವ ಕುಮಾರಸ್ವಾಮಿ ಅವರು, ಸೋದರತ್ವ ಮನೋಭಾವ ವಾತಾವರಣ ನಿರ್ಮಿಸಬೇಕು. ಇದು ಸರ್ಕಾರದ ಜವಾಬ್ದಾರಿ. ಕೇವಲ ಮಾತುಗಳಿಂದ ಸಮಸ್ಯೆ ಬಗೆಹರಿಯುವುದಿಲ್ಲ. ನಿನ್ನೆ ಸಿಎಂ, ಗೃಹಸಚಿವರು ಇದ್ದಾಗಲೇ ಕೊಲೆ ಆಗುತ್ತೆ. ಎಷ್ಟರ ಮಟ್ಟಿಗೆ ಹೋಗಿ ನಿಂತಿದೆ. ನಿನ್ನೆ ಸಿಎಂ ಫಾಜಿಲ್ ಮನೆಗೂ ಭೇಟಿ ನೀಡಬೇಕಿತ್ತು. ಇದಕ್ಕೆ ಮೂಲ ಕಾರಣ ನೀವೇ. ನೀವೇ ಇಂತಹ ವಾತಾವರಣೆ ನಿರ್ಮಾಣ ಮಾಡಿದ್ದೀರಿ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
Published On - 10:53 am, Fri, 29 July 22