Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ವೀಟ್ ಮೂಲಕ ಶ್ರೀರಾಮನವಮಿಗೆ ಶುಭ ಕೋರಿದ ಹೆಚ್ಡಿ ಕುಮಾರಸ್ವಾಮಿ; ಶಾಂತಿ ಭಂಗ ತರಬೇಡಿ ಎಂದು ಮನವಿ

ಶೋಭಾಯಾತ್ರೆ ಹೆಸರಿನಲ್ಲಿ ಇನ್ನೊಂದು ಸಮುದಾಯ ವಾಸ ಮಾಡುವ ಬೀದಿಗಳಲ್ಲಿ ಅಥವಾ ಅವರ ಪ್ರಾರ್ಥನಾ ಮಂದಿರಗಳ ಮುಂದೆ ಡಿಜೆ ಸೆಟ್ಟುಗಳನ್ನು ಹಾಕಿಕೊಂಡು 15-20 ನಿಮಿಷ ಕಾಲ ಕುಣಿಯುವುದು, ಕೇಕೆ ಹಾಕುವುದು ಇತ್ಯಾದಿ ಬೇಡ. ಇದರಿಂದ ಶಾಂತಿ ಕದಡುತ್ತದೆ. ಹೀಗೆ ಆಗುವುದು ಬೇಡ ಎಂದು ಮನವಿ ಮಾಡಿದ್ದಾರೆ.

ಟ್ವೀಟ್ ಮೂಲಕ ಶ್ರೀರಾಮನವಮಿಗೆ ಶುಭ ಕೋರಿದ ಹೆಚ್ಡಿ ಕುಮಾರಸ್ವಾಮಿ; ಶಾಂತಿ ಭಂಗ ತರಬೇಡಿ ಎಂದು ಮನವಿ
ಹೆಚ್ಡಿ ಕುಮಾರಸ್ವಾಮಿ
Follow us
TV9 Web
| Updated By: ಆಯೇಷಾ ಬಾನು

Updated on: Apr 10, 2022 | 9:51 AM

ಬೆಂಗಳೂರು: ರಾಜ್ಯದಲ್ಲಿ ಶ್ರೀರಾಮನವಮಿ ಸಂಭ್ರಮ ಮನೆ ಮಾಡಿದೆ. ಮನೆ ಮನೆಯಲ್ಲೂ ಪೂಜೆ, ಪುನಸ್ಕಾರ ನಡೀತಿದೆ. ದೇಗುಲಗಳು ಅದ್ಧೂರಿಯಾಗಿ ಸಿಂಗಾರಗೊಂಡಿವೆ. ಸದ್ಯ ರಾಮನವಮಿ ಹಿನ್ನೆಲೆ ವಿಡಿಯೋ ಟ್ವಿಟ್ ಮಾಡುವ ಮೂಲಕ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಸಮಸ್ತ ಕರುನಾಡಿಗೆ ರಾಮನವಮಿ ಶುಭಾಶಯ ತಿಳಿಸಿದ್ದಾರೆ.ಹಾಗೂ ಶೋಭಾಯಾತ್ರೆ ಹೆಸರಿನಲ್ಲಿ ಇನ್ನೊಂದು ಸಮುದಾಯ ವಾಸ ಮಾಡುವ ಬೀದಿಗಳಲ್ಲಿ ಅಥವಾ ಅವರ ಪ್ರಾರ್ಥನಾ ಮಂದಿರಗಳ ಮುಂದೆ ಡಿಜೆ ಸೆಟ್ಟುಗಳನ್ನು ಹಾಕಿಕೊಂಡು 15-20 ನಿಮಿಷ ಕಾಲ ಕುಣಿಯುವುದು, ಕೇಕೆ ಹಾಕುವುದು ಇತ್ಯಾದಿ ಬೇಡ. ಇದರಿಂದ ಶಾಂತಿ ಕದಡುತ್ತದೆ. ಹೀಗೆ ಆಗುವುದು ಬೇಡ ಎಂದು ಮನವಿ ಮಾಡಿದ್ದಾರೆ.

ಹೆಚ್ಡಿ ಕುಮಾರಸ್ವಾಮಿ ಸರಣಿ ಟ್ವೀಟ್ ಹೀಗಿವೆ ಶ್ರೀರಾಮಚಂದ್ರ ಮಹಾಪ್ರಭು ನಮ್ಮೆಲ್ಲರ ಆರಾಧ್ಯ ದೈವ. ಅಷ್ಟೇ ಅಲ್ಲ; ಮನುಕುಲಕ್ಕೆ ಆದರ್ಶ, ತ್ಯಾಗ, ಸರಳತೆ, ಶಾಂತಿ, ಸಹನೆ, ಮೌಲ್ಯಗಳ ದಿವ್ಯಬೆಳಕು ತೋರಿದ ನಮ್ಮೊಳಗಿನ ದೈವ. ರಾಮರಾಜ್ಯವು ಸರ್ವ ಜನಾಂಗದ ಶಾಂತಿಯ ತೋಟವಾಗಿತ್ತು. ನಾಡಿನ ಸಮಸ್ತ ಜನತೆಯಲ್ಲಿ ನನ್ನ ವಿನಮ್ರ ಮನವಿ ಇಷ್ಟೆ. ರಾಮನವಮಿ ಹಬ್ಬವನ್ನು ಭಕ್ತಿ-ಶ್ರದ್ಧೆಯಿಂದ ಆಚರಿಸೋಣ. ಆದರೆ, ನಮ್ಮ ರಾಮಸ್ಮರಣೆ ಇನ್ನೊಬ್ಬರಿಗೆ ನೋವುಂಟು ಮಾಡದಂತೆ ಎಚ್ಚರ ವಹಿಸೋಣ. ರಾಮನ ಹೆಸರಿನಲ್ಲಿ ಶೋಭಾಯಾತ್ರೆ ನಡೆಸಲು ನನ್ನದೇನೂ ಅಭ್ಯಂತರ ಇಲ್ಲ, ಅದಕ್ಕೆ ನನ್ನದೂ ಬೆಂಬಲ ಇದೆ.

ಶೋಭಾಯಾತ್ರೆ ಹೆಸರಿನಲ್ಲಿ ಇನ್ನೊಂದು ಸಮುದಾಯ ವಾಸ ಮಾಡುವ ಬೀದಿಗಳಲ್ಲಿ ಅಥವಾ ಅವರ ಪ್ರಾರ್ಥನಾ ಮಂದಿರಗಳ ಮುಂದೆ ಡಿಜೆ ಸೆಟ್ಟುಗಳನ್ನು ಹಾಕಿಕೊಂಡು 15-20 ನಿಮಿಷ ಕಾಲ ಕುಣಿಯುವುದು, ಕೇಕೆ ಹಾಕುವುದು ಇತ್ಯಾದಿ ಬೇಡ. ಇದರಿಂದ ಶಾಂತಿ ಕದಡುತ್ತದೆ. ಹೀಗೆ ಆಗುವುದು ಬೇಡ. ಒಂದು ಸಮುದಾಯದ ಜನರು ಈಗ ಉಪವಾಸ ಆಚರಣೆಯಲ್ಲಿದ್ದಾರೆ. ಈ ಸಮಯದಲ್ಲಿ ಅವರ ಬಡಾವಣೆಗಳಿಗೆ ಹೋಗಿ ಶಾಂತಿಗೆ ಭಂಗ ತರುವುದು ಬೇಡ. ಅದಕ್ಕೆ ಅವಕಾಶವನ್ನೂ ಕೊಡಬಾರದು ಎಂದು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗಳಲ್ಲಿ ನನ್ನ ಮನವಿ ಎಂದು ಟ್ವೀಟ್ ಮೂಲಕ ಹೆಚ್ಡಿ ಕುಮಾರಸ್ವಾಮಿ ಮನವಿ ಸಲ್ಲಿಸಿದ್ದಾರೆ.

ಶೋಭಾಯಾತ್ರೆಯನ್ನು ಹಿಂದುಗಳು ವಾಸ ಮಾಡುವ ಬಡಾವಣೆ, ಬೀದಿಗಳಲ್ಲಿ ಮಾಡಿ, ಅಲ್ಲೆಲ್ಲ ಅರ್ಧ ಗಂಟೆ ಸಾಲದಿದ್ದರೆ, ಒಂದು ಗಂಟೆ ಮಾಡಿ. ಇದಕ್ಕೆ ನನ್ನ ಬೆಂಬಲವಿದೆ. ಎಲ್ಲರೂ ರಾಮಸ್ಮರಣೆ ಮಾಡೋಣ, ಪ್ರತಿಯೊಬ್ಬರ ಹೃದಯದಲ್ಲಿ ಆ ರಾಮನು ಚಿರಸ್ಥಾಯಿಯಾಗಿ ನಿಲ್ಲಬೇಕು ಎನ್ನುವುದೇ ನನ್ನ ಆಶಯ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಇಂದು ನಾಡಿನೆಲ್ಲೆಡೆ ರಾಮ ನವಮಿ ಹಬ್ಬದ ಸಂಭ್ರಮ; ದೇವರಿಗೆ ವಿಶೇಷ ಪೂಜೆ

ನಾಡಿನೆಲ್ಲೆಡೆ ಶ್ರೀರಾಮನವಮಿ ಸಂಭ್ರಮ; ಶೋಭಾಯಾತ್ರೆ ಹಿನ್ನೆಲೆ ಬೆಂಗಳೂರಲ್ಲಿ ಪೊಲೀಸರಿಂದ ಟೈಟ್ ಸೆಕ್ಯೂರಿಟಿ

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ