ಟ್ವೀಟ್ ಮೂಲಕ ಶ್ರೀರಾಮನವಮಿಗೆ ಶುಭ ಕೋರಿದ ಹೆಚ್ಡಿ ಕುಮಾರಸ್ವಾಮಿ; ಶಾಂತಿ ಭಂಗ ತರಬೇಡಿ ಎಂದು ಮನವಿ

| Updated By: ಆಯೇಷಾ ಬಾನು

Updated on: Apr 10, 2022 | 9:51 AM

ಶೋಭಾಯಾತ್ರೆ ಹೆಸರಿನಲ್ಲಿ ಇನ್ನೊಂದು ಸಮುದಾಯ ವಾಸ ಮಾಡುವ ಬೀದಿಗಳಲ್ಲಿ ಅಥವಾ ಅವರ ಪ್ರಾರ್ಥನಾ ಮಂದಿರಗಳ ಮುಂದೆ ಡಿಜೆ ಸೆಟ್ಟುಗಳನ್ನು ಹಾಕಿಕೊಂಡು 15-20 ನಿಮಿಷ ಕಾಲ ಕುಣಿಯುವುದು, ಕೇಕೆ ಹಾಕುವುದು ಇತ್ಯಾದಿ ಬೇಡ. ಇದರಿಂದ ಶಾಂತಿ ಕದಡುತ್ತದೆ. ಹೀಗೆ ಆಗುವುದು ಬೇಡ ಎಂದು ಮನವಿ ಮಾಡಿದ್ದಾರೆ.

ಟ್ವೀಟ್ ಮೂಲಕ ಶ್ರೀರಾಮನವಮಿಗೆ ಶುಭ ಕೋರಿದ ಹೆಚ್ಡಿ ಕುಮಾರಸ್ವಾಮಿ; ಶಾಂತಿ ಭಂಗ ತರಬೇಡಿ ಎಂದು ಮನವಿ
ಹೆಚ್ಡಿ ಕುಮಾರಸ್ವಾಮಿ
Follow us on

ಬೆಂಗಳೂರು: ರಾಜ್ಯದಲ್ಲಿ ಶ್ರೀರಾಮನವಮಿ ಸಂಭ್ರಮ ಮನೆ ಮಾಡಿದೆ. ಮನೆ ಮನೆಯಲ್ಲೂ ಪೂಜೆ, ಪುನಸ್ಕಾರ ನಡೀತಿದೆ. ದೇಗುಲಗಳು ಅದ್ಧೂರಿಯಾಗಿ ಸಿಂಗಾರಗೊಂಡಿವೆ. ಸದ್ಯ ರಾಮನವಮಿ ಹಿನ್ನೆಲೆ ವಿಡಿಯೋ ಟ್ವಿಟ್ ಮಾಡುವ ಮೂಲಕ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಸಮಸ್ತ ಕರುನಾಡಿಗೆ ರಾಮನವಮಿ ಶುಭಾಶಯ ತಿಳಿಸಿದ್ದಾರೆ.ಹಾಗೂ ಶೋಭಾಯಾತ್ರೆ ಹೆಸರಿನಲ್ಲಿ ಇನ್ನೊಂದು ಸಮುದಾಯ ವಾಸ ಮಾಡುವ ಬೀದಿಗಳಲ್ಲಿ ಅಥವಾ ಅವರ ಪ್ರಾರ್ಥನಾ ಮಂದಿರಗಳ ಮುಂದೆ ಡಿಜೆ ಸೆಟ್ಟುಗಳನ್ನು ಹಾಕಿಕೊಂಡು 15-20 ನಿಮಿಷ ಕಾಲ ಕುಣಿಯುವುದು, ಕೇಕೆ ಹಾಕುವುದು ಇತ್ಯಾದಿ ಬೇಡ. ಇದರಿಂದ ಶಾಂತಿ ಕದಡುತ್ತದೆ. ಹೀಗೆ ಆಗುವುದು ಬೇಡ ಎಂದು ಮನವಿ ಮಾಡಿದ್ದಾರೆ.

ಹೆಚ್ಡಿ ಕುಮಾರಸ್ವಾಮಿ ಸರಣಿ ಟ್ವೀಟ್ ಹೀಗಿವೆ
ಶ್ರೀರಾಮಚಂದ್ರ ಮಹಾಪ್ರಭು ನಮ್ಮೆಲ್ಲರ ಆರಾಧ್ಯ ದೈವ. ಅಷ್ಟೇ ಅಲ್ಲ; ಮನುಕುಲಕ್ಕೆ ಆದರ್ಶ, ತ್ಯಾಗ, ಸರಳತೆ, ಶಾಂತಿ, ಸಹನೆ, ಮೌಲ್ಯಗಳ ದಿವ್ಯಬೆಳಕು ತೋರಿದ ನಮ್ಮೊಳಗಿನ ದೈವ. ರಾಮರಾಜ್ಯವು ಸರ್ವ ಜನಾಂಗದ ಶಾಂತಿಯ ತೋಟವಾಗಿತ್ತು. ನಾಡಿನ ಸಮಸ್ತ ಜನತೆಯಲ್ಲಿ ನನ್ನ ವಿನಮ್ರ ಮನವಿ ಇಷ್ಟೆ. ರಾಮನವಮಿ ಹಬ್ಬವನ್ನು ಭಕ್ತಿ-ಶ್ರದ್ಧೆಯಿಂದ ಆಚರಿಸೋಣ. ಆದರೆ, ನಮ್ಮ ರಾಮಸ್ಮರಣೆ ಇನ್ನೊಬ್ಬರಿಗೆ ನೋವುಂಟು ಮಾಡದಂತೆ ಎಚ್ಚರ ವಹಿಸೋಣ. ರಾಮನ ಹೆಸರಿನಲ್ಲಿ ಶೋಭಾಯಾತ್ರೆ ನಡೆಸಲು ನನ್ನದೇನೂ ಅಭ್ಯಂತರ ಇಲ್ಲ, ಅದಕ್ಕೆ ನನ್ನದೂ ಬೆಂಬಲ ಇದೆ.

ಶೋಭಾಯಾತ್ರೆ ಹೆಸರಿನಲ್ಲಿ ಇನ್ನೊಂದು ಸಮುದಾಯ ವಾಸ ಮಾಡುವ ಬೀದಿಗಳಲ್ಲಿ ಅಥವಾ ಅವರ ಪ್ರಾರ್ಥನಾ ಮಂದಿರಗಳ ಮುಂದೆ ಡಿಜೆ ಸೆಟ್ಟುಗಳನ್ನು ಹಾಕಿಕೊಂಡು 15-20 ನಿಮಿಷ ಕಾಲ ಕುಣಿಯುವುದು, ಕೇಕೆ ಹಾಕುವುದು ಇತ್ಯಾದಿ ಬೇಡ. ಇದರಿಂದ ಶಾಂತಿ ಕದಡುತ್ತದೆ. ಹೀಗೆ ಆಗುವುದು ಬೇಡ. ಒಂದು ಸಮುದಾಯದ ಜನರು ಈಗ ಉಪವಾಸ ಆಚರಣೆಯಲ್ಲಿದ್ದಾರೆ. ಈ ಸಮಯದಲ್ಲಿ ಅವರ ಬಡಾವಣೆಗಳಿಗೆ ಹೋಗಿ ಶಾಂತಿಗೆ ಭಂಗ ತರುವುದು ಬೇಡ. ಅದಕ್ಕೆ ಅವಕಾಶವನ್ನೂ ಕೊಡಬಾರದು ಎಂದು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗಳಲ್ಲಿ ನನ್ನ ಮನವಿ ಎಂದು ಟ್ವೀಟ್ ಮೂಲಕ ಹೆಚ್ಡಿ ಕುಮಾರಸ್ವಾಮಿ ಮನವಿ ಸಲ್ಲಿಸಿದ್ದಾರೆ.

ಶೋಭಾಯಾತ್ರೆಯನ್ನು ಹಿಂದುಗಳು ವಾಸ ಮಾಡುವ ಬಡಾವಣೆ, ಬೀದಿಗಳಲ್ಲಿ ಮಾಡಿ, ಅಲ್ಲೆಲ್ಲ ಅರ್ಧ ಗಂಟೆ ಸಾಲದಿದ್ದರೆ, ಒಂದು ಗಂಟೆ ಮಾಡಿ. ಇದಕ್ಕೆ ನನ್ನ ಬೆಂಬಲವಿದೆ. ಎಲ್ಲರೂ ರಾಮಸ್ಮರಣೆ ಮಾಡೋಣ, ಪ್ರತಿಯೊಬ್ಬರ ಹೃದಯದಲ್ಲಿ ಆ ರಾಮನು ಚಿರಸ್ಥಾಯಿಯಾಗಿ ನಿಲ್ಲಬೇಕು ಎನ್ನುವುದೇ ನನ್ನ ಆಶಯ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಇಂದು ನಾಡಿನೆಲ್ಲೆಡೆ ರಾಮ ನವಮಿ ಹಬ್ಬದ ಸಂಭ್ರಮ; ದೇವರಿಗೆ ವಿಶೇಷ ಪೂಜೆ

ನಾಡಿನೆಲ್ಲೆಡೆ ಶ್ರೀರಾಮನವಮಿ ಸಂಭ್ರಮ; ಶೋಭಾಯಾತ್ರೆ ಹಿನ್ನೆಲೆ ಬೆಂಗಳೂರಲ್ಲಿ ಪೊಲೀಸರಿಂದ ಟೈಟ್ ಸೆಕ್ಯೂರಿಟಿ