AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಕಂಪನಿಗೆಯೇ ಪೆಟ್ರೋಲ್ ಸುರಿದು ಬೆಂಕಿ ಇಟ್ಟರು

ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಉದ್ಯೋಗಿಗಳು ರೊಚ್ಚಿಗೆದ್ದು, ಕಂಪನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ. ಅಷ್ಟಕ್ಕೂ ಕಂಪನಿ ಇಬ್ಬರನ್ನು ಕೆಲಸದಿಂದ ತೆಗೆದಿದ್ಯಾಕೆ? ಈ ಘಟನೆ ನಡೆದಿದ್ಯಾಕೆ| ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಬೆಂಗಳೂರು: ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಕಂಪನಿಗೆಯೇ ಪೆಟ್ರೋಲ್ ಸುರಿದು ಬೆಂಕಿ ಇಟ್ಟರು
ರಾಚಪ್ಪಾಜಿ ನಾಯ್ಕ್
| Edited By: |

Updated on: Oct 08, 2023 | 11:03 AM

Share

ಬೆಂಗಳೂರು (ಅಕ್ಟೋಬರ್ .08): ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಉದ್ಯೋಗಿಗಳು(employees) ರೊಚ್ಚಿಗೆದ್ದು, ಕಂಪನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಬೆಂಗಳೂರು (Bengaluru) ನಗರದಲ್ಲಿ ನಡೆದಿದೆ. ಸೆಪ್ಟೆಂಬರ್ 27 ರಂದು ಬೆಳಗ್ಗೆ 10.30 ಕ್ಕೆ ಪೃಥ್ವಿ ಪಾರ್ಕ್ ಸ್ಕ್ವೇರ್ ರಿಯಲ್ ಎಸ್ಟೇಟ್ ಕಂಪನಿಗೆ ಬೆಂಕಿ ಹಚ್ಚಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪೃಥ್ವಿ ಪಾರ್ಕ್ ಸ್ಕ್ವೇರ್ ರಿಯಲ್ ಎಸ್ಟೇಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ರಾಹುಲ್ ಪೂಜಾರಿ, ಲ್ಯಾವ್ಸನ್ ಪೀಟರ್ ಜಾನ್ ಎಂಬ ಇಬ್ಬರು ಕೃತ್ಯ ಎಸಗಿದ್ದಾರೆ. ಘಟನೆಯಲ್ಲಿ ಟೇಬಲ್,ಸ್ವಿಚ್ ಬೋರ್ಡ್ ಸುಟ್ಟು ಕರಕಲಾಗಿದ್ದು, ಒಟ್ಟು ಕಂಪನಿಯಲ್ಲಿ 11 ಲಕ್ಷ ರೂ. ಬೆಲೆ ಬಾಳುವ ಪೀಠೋಪಕರಣು ಹಾನಿಯಾಗಿವೆ.

ಉಮಾಶಂಕರ್ ಮತ್ತು ರೂಪ ಎಂಬುವವರ ಒಡೆತನದ ಪೃಥ್ವಿ ಪಾರ್ಕ್ ಸ್ಕ್ವೇರ್ ರಿಯಲ್ ಎಸ್ಟೇಟ್ ಕಂಪನಿಯಲ್ಲಿ ರಾಹುಲ್ ಏರಿಯಾ ಸೇಲ್ಸ್ ಮ್ಯಾನೇಜರ್ ಆಗಿದ್ದು, ಲ್ಯಾವ್ ಸನ್ ಪೀಟರ್ ಜಾನ್ ರೀಜಿನಲ್ ಸೇಲ್ಸ್ ಮ್ಯಾನೇಜರ್ ಆಗಿದ್ದ. ಆದ್ರೆ, ಟಾರ್ಗೆಟ್ ಅಚೀವ್ ಮಾಡದೇ ಇದ್ದಿದ್ದರಿಂದ ಇಬ್ಬರನ್ನು ಕೆಲಸದಿಂದ ತೆಗೆದು ಹಾಕಲಾಗಿತ್ತು. ಬಳಿಕ ರಾಹುಲ್ ಮತ್ತು ಲ್ಯಾವ್ಸನ್, ರೂಪಗೆ ಕರೆ ಮಾಡಿ ಸಂಬಳ ಕೊಡುವಂತೆ ಒತ್ತಾಯ ಮಾಡಿದ್ದರು.

ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ಗೋಡೌನ್​ ಅಗ್ನಿ ದುರಂತ: ಮೃತರ ಸಂಖ್ಯೆ 14ಕ್ಕೆ ಏರಿಕೆ, ಗೋದಾಮು ಮಾಲೀಕನ ಪುತ್ರ ಪೊಲೀಸರ ವಶಕ್ಕೆ

ಆದರೆ ರೂಪ ಮತ್ತು ಉಮಾಶಂಕರ್ ಸಂಬಳ ಕೊಡಲು ನಿರಾಕರಿಸಿದ್ದಾರೆ. ಇದರಿಂದ ಕೋಪಗೊಂಡ ರಾಹುಲ್ ಪೂಜಾರಿ, ಲ್ಯಾವ್ಸನ್ ಪೀಟರ್ ಜಾನ್, ಸೆ.27 ರಂದು ಬೆಳಗ್ಗೆ ಕಚೇರಿ ಬಳಿ ಬಂದು, ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ಮುನ್ನಿ ಎಂಬಾಕೆಯನ್ನ ಹೊರಗೆ ಬರುವಂತೆ ಹೇಳಿದ್ದಾರೆ. ನಂತರ ಪೆಟ್ರೋಲ್ ಸುರಿದು ಯುವಕರು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪುಟ್ಟೇನಹಳ್ಳಿ ಪೊಲೀಸರು ಬಲೆ ಬೀಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ