ಸನ್ಯಾಸ ದೀಕ್ಷೆ ಪಡೆಯಲಿದ್ದಾರೆ ಮಾಜಿ ಸಚಿವ ಬಿಜೆ ಪುಟ್ಟಸ್ವಾಮಿ! ಮೇ 15 ರಂದು ಪಟ್ಟಾಭಿಷೇಕ

| Updated By: ganapathi bhat

Updated on: Apr 05, 2022 | 11:15 PM

BJ Puttaswamy: ರಾಜರಾಜೇಶ್ವರಿ ಜಯೇಂದ್ರ ಸ್ವಾಮೀಜಿ ಪುಟ್ಟಸ್ವಾಮಿ ಅವರಿಗೆ ದೀಕ್ಷೆ ನೀಡಲಿದ್ದಾರೆ. ಸನ್ಯಾಸತ್ವ ಸ್ವೀಕಾರ ಹಿನ್ನೆಲೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ನೆಲಮಂಗಲ ಬಳಿಯ ತೈಲೇಶ್ವರ ಗಾಣಿಗರ ಸಂಸ್ಥಾನ ಮಠದ ಪ್ರಥಮ ಪೀಠಾಧಿಪತಿ ಆಗಿ ಪುಟ್ಟಸ್ವಾಮಿ ಪಟ್ಟಾಭಿಷೇಕಗೊಳ್ಳಲಿದ್ದಾರೆ.

ಸನ್ಯಾಸ ದೀಕ್ಷೆ ಪಡೆಯಲಿದ್ದಾರೆ ಮಾಜಿ ಸಚಿವ ಬಿಜೆ ಪುಟ್ಟಸ್ವಾಮಿ! ಮೇ 15 ರಂದು ಪಟ್ಟಾಭಿಷೇಕ
ಬಿಜೆ ಪುಟ್ಟಸ್ವಾಮಿ
Follow us on

ಬೆಂಗಳೂರು: ಮಾಜಿ ಸಚಿವ ಹಾಗೂ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಜೆ ಪುಟ್ಟಸ್ವಾಮಿ ಸನ್ಯಾಸ ದೀಕ್ಷೆ ಪಡೆಯಲಿದ್ದಾರೆ. ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ ಆಗಿ ದೀಕ್ಷೆ ಪಡೆಯಲಿದ್ದಾರೆ. ಮೇ 6 ರಂದು ಅವರು ಸನ್ಯಾಸ ದೀಕ್ಷೆ ಪಡೆಯಲಿರುವ ಬಗ್ಗೆ ಮಾಹಿತಿ ಲಭಿಸಿದೆ. ಮೇ 15 ರಂದು ಮಾಜಿ ಸಚಿವ ಪುಟ್ಟಸ್ವಾಮಿಗೆ ಪಟ್ಟಾಭಿಷೇಕ ನಡೆಯಲಿದೆ ಎಂದು ತಿಳಿದುಬಂದಿದೆ. ರಾಜರಾಜೇಶ್ವರಿ ಜಯೇಂದ್ರ ಸ್ವಾಮೀಜಿ ಪುಟ್ಟಸ್ವಾಮಿ ಅವರಿಗೆ ದೀಕ್ಷೆ ನೀಡಲಿದ್ದಾರೆ. ಸನ್ಯಾಸತ್ವ ಸ್ವೀಕಾರ ಹಿನ್ನೆಲೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ನೆಲಮಂಗಲ ಬಳಿಯ ತೈಲೇಶ್ವರ ಗಾಣಿಗರ ಸಂಸ್ಥಾನ ಮಠದ ಪ್ರಥಮ ಪೀಠಾಧಿಪತಿ ಆಗಿ ಪುಟ್ಟಸ್ವಾಮಿ ಪಟ್ಟಾಭಿಷೇಕಗೊಳ್ಳಲಿದ್ದಾರೆ.

ನೆಲಮಂಗಲ ಸಮೀಪ ಇರುವ ತೈಲೇಶ್ವರ ಗಾಣಿಗರ ಸಂಸ್ಥಾನ ಮಠದಲ್ಲಿ ದೀಕ್ಷೆ ಪಡೆಯಲಿದ್ದಾರೆ. ಹಾಲಿ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರಾಗಿರುವ ಪುಟ್ಟಸ್ವಾಮಿ, ಸನ್ಯಾಸ ದೀಕ್ಷೆಗೂ ಮುನ್ನ ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಪಟ್ಟಾಭಿಷೇಕ ಕಾರ್ಯಕ್ರಮಕ್ಕೆ ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಸಿದ್ದರಾಮಯ್ಯ, ಹೆಚ್.ಡಿ. ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ರಾಜಕೀಯ ನಾಯಕರಿಗೆ ಆಹ್ವಾನ ನೀಡಿರುವ ಬಗ್ಗೆ ಮಾಹಿತಿ ಲಭಿಸಿದೆ.

ಇದನ್ನೂ ಓದಿ: ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರ ಸಚಿವರ ಜತೆ ಚರ್ಚೆ; ಮಹತ್ವದ ಮಾಹಿತಿ ನೀಡಿದ ಬಸವರಾಜ ಬೊಮ್ಮಾಯಿ

ಇದನ್ನೂ ಓದಿ: ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಶಿವಕುಮಾರ ಸ್ವಾಮೀಜಿಗಳ ಹೆಸರು: ಬಸವರಾಜ ಬೊಮ್ಮಾಯಿ

Published On - 10:20 pm, Tue, 5 April 22