ಬಿಜೆಪಿ ನಾಯಕರು ಸರ್ಕಾರ, ಸಿಎಂಗೆ ಅಗೌರವ ತೋರುತ್ತಿದ್ದಾರೆ; ಟ್ವೀಟ್ ಮೂಲಕ ಬಿಜೆಪಿ ನಾಯಕರ ವಿರುದ್ಧ ಭಾಸ್ಕರ್ ರಾವ್ ಆಕ್ರೋಶ

ಬೆಂಗಳೂರು ಪೊಲೀಸ್ ಆಯುಕ್ತರು ಬೆಂಗಳೂರಿನ 1 ಕೋಟಿ ಜನರನ್ನ ರಕ್ಷಿಸುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ನಾಯಕರು ಸರ್ಕಾರ, ಸಿಎಂಗೆ ಅಗೌರವ ತೋರುತ್ತಿದ್ದಾರೆ ಎಂದು ಟ್ವಿಟರ್ನಲ್ಲಿ ಬಿಜೆಪಿ ನಾಯಕರ ವಿರುದ್ಧ ಭಾಸ್ಕರ್ ರಾವ್ ಕಿಡಿಕಾರಿದ್ದಾರೆ.

ಬಿಜೆಪಿ ನಾಯಕರು ಸರ್ಕಾರ, ಸಿಎಂಗೆ ಅಗೌರವ ತೋರುತ್ತಿದ್ದಾರೆ; ಟ್ವೀಟ್ ಮೂಲಕ ಬಿಜೆಪಿ ನಾಯಕರ ವಿರುದ್ಧ ಭಾಸ್ಕರ್ ರಾವ್ ಆಕ್ರೋಶ
ಆಪ್ ಧುರೀಣ ಭಾಸ್ಕರ್ ರಾವ್
Follow us
TV9 Web
| Updated By: ಆಯೇಷಾ ಬಾನು

Updated on:Apr 11, 2022 | 9:24 AM

ಬೆಂಗಳೂರು: ಜೆ.ಜೆ.ನಗರದಲ್ಲಿ ನಡೆದ ಚಂದ್ರು ಕೊಲೆ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ತಿದೆ. ಮೊನ್ನೆ ಚಂದ್ರು ಸ್ನೇಹಿತ ಸೈಮನ್ ಉರ್ದು ಮಾತನಾಡದ್ದಕ್ಕಾಗಿಯೇ ಕೊಲೆ ಮಾಡಿದ್ರು ಅಂತಾ ಹೇಳಿ, ಇಡೀ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಕೊಟ್ರೆ. ಇದನ್ನೆ ಇಟ್ಕೊಂಡು ಬಿಜೆಪಿ ನಾಯಕರು ಪೊಲೀಸರ ವಿರುದ್ಧ ಗುಡುಗಿದ್ದಾರೆ. ಸದ್ಯ ಈ ಬಗ್ಗೆ ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಟ್ವೀಟ್ ಮೂಲಕ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಬೆಂಗಳೂರು ಪೊಲೀಸ್ ಆಯುಕ್ತರು ಬೆಂಗಳೂರಿನ 1 ಕೋಟಿ ಜನರನ್ನ ರಕ್ಷಿಸುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ನಾಯಕರು ಸರ್ಕಾರ, ಸಿಎಂಗೆ ಅಗೌರವ ತೋರುತ್ತಿದ್ದಾರೆ ಎಂದು ಟ್ವಿಟರ್ನಲ್ಲಿ ಬಿಜೆಪಿ ನಾಯಕರ ವಿರುದ್ಧ ಭಾಸ್ಕರ್ ರಾವ್ ಕಿಡಿಕಾರಿದ್ದಾರೆ. ಬಿಜೆಪಿ ನಾಯಕರು, ಪೊಲೀಸ್ ಆಯುಕ್ತರನ್ನ ಸುಳ್ಳುಗಾರ ಎಂದಿದ್ದರು.

ನಾವು ನಮ್ಮ ಕೆಲಸ ಏನಿದೆಯೋ ಅದನ್ನು ಮಾಡುತ್ತಿದ್ದೇವೆ ಬಿಜೆಪಿ ನಾಯಕರ ಆರೋಪಗಳ ಬಗ್ಗೆ ಏನೂ ಹೇಳಲ್ಲ. ಸರ್ಕಾರದ ಆದೇಶ ಪಾಲಿಸುತ್ತೇವೆ. ನಮ್ಮ ಕೆಲಸ ಏನಿದೆಯೋ ಅದನ್ನು ಮಾಡುತ್ತಿದ್ದೇವೆ. ನಾವು ಕಾನೂನು ಪಾಲಿಸುತ್ತಿದ್ದೇವೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿಕೆ ನೀಡಿದ್ದಾರೆ.

ಇಂದು ಅಧಿಕೃತವಾಗಿ ಸಿಐಡಿಗೆ ಪ್ರಕರಣದ ವರ್ಗಾವಣೆ ಇನ್ನು ಚಂದ್ರ ಕೊಲೆ ಪ್ರಕರಣ ಇಂದು ಅಧಿಕೃತವಾಗಿ ಸಿಐಡಿಗೆ ವರ್ಗಾವಣೆ ಮಾಡಲಾಗುತ್ತೆ. ಸರ್ಕಾರದ ಆದೇಶದಂತೆ ಪ್ರಕರಣದ ಫೈಲ್ ಸಹಿತ ಸಿಐಡಿ ತನಿಖೆಗೆ ಹಸ್ತಾಂತರ. ಸಿಐಡಿ ಅಧಿಕಾರಿಗಳಿಂದ ಮುಂದಿನ ತನಿಖೆ ನಡೆಯಲಿದೆ.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ತಿನ ಸದಸ್ಯ ರವಿಕುಮಾರ್, ತಮ್ಮ ತಲೆ ಮೇಲೆ ಬರುತ್ತೆ ಎಂದು, ಬೆಂಗಳೂರು ಪೊಲೀಸ್ ಕಮಿಷನರ್ ಸುಳ್ಳು ಹೇಳಿದ್ದಾರೆ. ಗೃಹ ಸಚಿವರು ಹೇಳಿದ್ದು ಸರಿ ಇದೆ. ಉರ್ದು ಬರಲ್ಲ ಅಂದಿದ್ದಕ್ಕೆ ಚಂದ್ರುನನ್ನ ಕೊಲೆ ಮಾಡಲಾಗಿದೆ. ಯುವಕ ಚಂದ್ರು ಹತ್ಯೆ ಮಾಡಿರುವುದು ಗೂಂಡಾ ಮುಸ್ಲಿಮರು. ಬೈಕ್ಗೆ ಆ್ಯಕ್ಸಿಂಡೆಂಟ್ ಆಗಿದ್ದು ನಿಜ, ಆಗ ಗಲಾಟೆ ನಡೆದಿದೆ. ಉರ್ದುವಿನಲ್ಲಿ ಮಾತನಾಡಿ ಎಂದು ಚಂದ್ರುಗೆ ಹೇಳಿದ್ದಾರೆ. ಉರ್ದು ನಹೀ ಹೈ ಅಂತ ಹೇಳಿದಾಗ ಚುಚ್ಚಿ ಚುಚ್ಚಿ ಕೊಲೆ ಮಾಡಿದ್ದಾರೆ ಎಂದು ರವಿಕುಮಾರ್ ಆರೋಪಿಸಿದ್ದರು. ಅಲ್ಲದೆ ಬಿಜೆಪಿಯ ಕೆಲ ನಾಯಕರು ಪೊಲೀಸ್ ಆಯುಕ್ತರು ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಚಂದ್ರು ಕೊಲೆ ಪ್ರಕರಣವನ್ನ ಸಿಐಡಿ ತನಿಖೆಗೆ ವಹಿಸಿದ ಕರ್ನಾಟಕ ಸರ್ಕಾರ; ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ

TV9 Inside Story: ಜೆಜೆ ನಗರ ಯುವಕ ಚಂದ್ರು ಮರ್ಡರ್ ಕೇಸ್: ಇಡೀ ವೃತ್ತಾಂತ ಏನು?

Published On - 9:04 am, Mon, 11 April 22

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?