ಮತ್ತೊಬ್ಬ ನಿವೃತ್ತ ಪೊಲೀಸ್ ಅಧಿಕಾರಿ ರಾಜಕೀಯಕ್ಕೆ; IPS ಭಾಸ್ಕರ್ ರಾವ್ ಸೋಮವಾರ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ
IPS Bhaskar Rao to join AAP: ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಆಪ್ಗೆ ಸೇರ್ಪಡೆ ಆಗಲಿದ್ದಾರೆ. ಆಪ್ ಸೇರ್ಪಡೆ ಬಳಿಕ ಭಾಸ್ಕರ್ ರಾವ್ ಸುದ್ದಿಗೋಷ್ಠಿ ನಡೆಸಲಿದ್ದು, ನಾಳೆ ಮಧ್ಯಾಹ್ನ 1 ಗಂಟೆಗೆ ಭಾಸ್ಕರ್ ರಾವ್ ಸುದ್ದಿಗೋಷ್ಠಿ ನಡೆಯಲಿದೆ ಎಂದು ತಿಳಿದುಬಂದಿದೆ.
ಬೆಂಗಳೂರು: ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಸೋಮವಾರ (ಏಪ್ರಿಲ್ 4) ಬೆಳಗ್ಗೆ 11 ಗಂಟೆಗೆ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷಕ್ಕೆ ಸೇರಲಿರುವ ಬಗ್ಗೆ ಮಾಹಿತಿ ಲಭಿಸಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಆಪ್ಗೆ ಸೇರ್ಪಡೆ ಆಗಲಿದ್ದಾರೆ. ಆಪ್ ಸೇರ್ಪಡೆ ಬಳಿಕ ಭಾಸ್ಕರ್ ರಾವ್ ಸುದ್ದಿಗೋಷ್ಠಿ ನಡೆಸಲಿದ್ದು, ನಾಳೆ ಮಧ್ಯಾಹ್ನ 1 ಗಂಟೆಗೆ ಭಾಸ್ಕರ್ ರಾವ್ ಸುದ್ದಿಗೋಷ್ಠಿ ನಡೆಯಲಿದೆ ಎಂದು ತಿಳಿದುಬಂದಿದೆ.
ಅರ್ಥಶಾಸ್ತ್ರ ವಿಷಯದಲ್ಲಿ ಎಂ.ಎ ಪದವಿ ಪಡೆದಿರುವ ಭಾಸ್ಕರ್ ರಾವ್, 1990 ನೇ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ಆಗಿದ್ದಾರೆ. ಬೆಂಗಳೂರು ಪೊಲೀಸ್ ಕಮಿಷನರ್ ಆಗಿಯೂ ಅವರು ಕೆಲಸ ಮಾಡಿದ್ದಾರೆ. ರೈಲ್ವೇ ಪೊಲೀಸ್ ವಿಭಾಗದ ಎಡಿಜಿಪಿ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ.
Last trip home after curtains down of 32 years in IPS. I have extreme gratitude to my family, the people of Karnataka and all my colleagues,friends,elders & young people in my life and finally the Governments of Karnataka across parties?? heading into choppy seas pic.twitter.com/6oXcxn8htx
— Bhaskar Rao (@deepolice12) April 2, 2022
ಪೊಲೀಸ್ ಅಧಿಕಾರಿ ಆಗಿ ವೃತ್ತಿಜೀವನ ಅಂತ್ಯಗೊಂಡಿರುವ ಬಗ್ಗೆ, ಹೊಸಪಯಣದ ಕುರಿತು ನಿನ್ನೆಯಷ್ಟೇ ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದರು. 32 ವರ್ಷಗಳ ಐಪಿಎಸ್ ಜೀವನಕ್ಕೆ ತೆರೆ ಎಳೆಯುತ್ತಿದ್ದೇನೆ. ನನ್ನ ಕುಟುಂಬಕ್ಕೆ, ಗೆಳೆಯರಿಗೆ, ಸಹೋದ್ಯೋಗಿಗಳಿಗೆ, ಹಿರಿ, ಕಿರಿಯರಿಗೆ, ಪಕ್ಷಾತೀತವಾಗಿ ಕರ್ನಾಟಕದ ಸರ್ಕಾರಗಳಿಗೆ ಧನ್ಯವಾದಗಳು ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದರು.
ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ರಿಂದ ಈ ಮೊದಲು ಒಪ್ಪಿಗೆ ಸಿಕ್ಕಿತ್ತು. ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಡಿಜಿ, ಐಜಿಪಿ ಒಪ್ಪಿಗೆ ಸೂಚಿಸಿದ್ದರು. ಕ್ಲಿಯರೆನ್ಸ್ ನೀಡಿ ರಾಜ್ಯ ಸರ್ಕಾರಕ್ಕೆ ಕಡತ ರವಾನೆ ಮಾಡಲಾಗಿತ್ತು. ಸರ್ಕಾರದ ಗೃಹ ಇಲಾಖೆಗೆ ಕಡತ ರವಾನಿಸಲಾಗಿತ್ತು. ಬಳಿಕ ರಾಜ್ಯ ಸರ್ಕಾರದ ಮಟ್ಟದಲ್ಲಿ ಒಪ್ಪಿಗೆ ಸೂಚಿಸಲಾಗಿತ್ತು. ಎಡಿಜಿಪಿ ಭಾಸ್ಕರ್ ರಾವ್ ಅವರು ಸೇವೆಯಿಂದ ಸ್ವಯಂ ನಿವೃತ್ತಿ ಆಶಿಸಿ ಕರ್ನಾಟಕ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದರು. ನಿವೃತ್ತಿಗೆ ಇನ್ನೂ ಮೂರು ವರ್ಷ ಬಾಕಿ ಇರುವಾಗಲೆ ಭಾಸ್ಕರ್ ರಾವ್ ಅವರು ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದರು.
ಇದನ್ನೂ ಓದಿ: ದೀಪಿಕಾ ನಟನೆಯ ‘ಗೆಹರಾಯಿಯಾ’ ಚಿತ್ರ ನೋಡಿ ಮುಲಾಜಿಲ್ಲದೇ ಜಾಡಿಸಿದ ಭಾಸ್ಕರ್ ರಾವ್
ಇದನ್ನೂ ಓದಿ: IPS Bhaskar Rao: ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಅರ್ಜಿಗೆ ಒಪ್ಪಿಗೆ ಸೂಚಿಸಿದ ಪ್ರವೀಣ್ ಸೂದ್
Published On - 11:35 am, Sun, 3 April 22