ಇಂದು ಅಂತಾರಾಷ್ಟ್ರೀಯ ಡ್ರಗ್ಸ್ ವಿರೋಧಿ ದಿನಾಚರಣೆ; 15 ಸಾವಿರ ವಿದ್ಯಾರ್ಥಿಗಳಿಂದ ಜಾಗೃತಿ ಮೆರವಣಿಗೆ

ಬೆಂಗಳೂರು ಪೊಲೀಸರು ಇಂದು ಮಾದಕ ವಸ್ತುಗಳನ್ನ ನಾಶಪಡಿಸಲಿದ್ದಾರೆ. ಕಳೆದ ಒಂದು ವರ್ಷದಿಂದ ಜಪ್ತಿ ಮಾಡಿದ್ದ ಮಾದಕ ವಸ್ತುಗಳನ್ನ ಸದ್ಯ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪ್ರದರ್ಶನಕ್ಕೆ ಇಡಲಾಗಿದೆ.

ಇಂದು ಅಂತಾರಾಷ್ಟ್ರೀಯ ಡ್ರಗ್ಸ್ ವಿರೋಧಿ ದಿನಾಚರಣೆ; 15 ಸಾವಿರ ವಿದ್ಯಾರ್ಥಿಗಳಿಂದ ಜಾಗೃತಿ ಮೆರವಣಿಗೆ
ಅಭಿಯಾನದಲ್ಲಿ ಭಾಗಿಯಾಗಿರುವ ವಿದ್ಯಾರ್ಥಿಗಳು
Follow us
TV9 Web
| Updated By: sandhya thejappa

Updated on:Jun 26, 2022 | 12:19 PM

ಬೆಂಗಳೂರು: ಇಂದು (ಜೂನ್ 26) ಅಂತಾರಾಷ್ಟ್ರೀಯ ಡ್ರಗ್ಸ್ ವಿರೋಧಿ ದಿನಾಚರಣೆ (International Drug Abuse Day) ಹಿನ್ನೆಲೆ ನಗರದ ಕಂಠೀರವ ಸ್ಟೇಡಿಯಂನಲ್ಲಿ ಅಬಕಾರಿ ಇಲಾಖೆಯಿಂದ ಜಾಗೃತಿ ಅಭಿಯಾನ (Campaign) ನಡೆದಿದೆ. ಈ ಅಭಿಯಾನಕ್ಕೆ ಅಬಕಾರಿ ಸಚಿವ ಗೋಪಾಲಯ್ಯ ಚಾಲನೆ ನೀಡಿದ್ದು, ಕ್ರೀಡಾ ಸಚಿವ ನಾರಾಯಣಸ್ವಾಮಿ, ಸ್ಯಾಂಡಲ್ವುಡ್ ನಟ-ನಟಿಯರು ಭಾಗಿಯಾಗಿದ್ದರು. ಬೆಂಗಳೂರಿನ ವಿವಿಧ ಕಾಲೇಜಿನ 15 ಸಾವಿರ ವಿದ್ಯಾರ್ಥಿಗಳು ಪಾಲ್ಗೊಂಡು ಬೈಕ್ ರ್ಯಾಲಿ ನಡೆಸಿ ಮಾದಕ ವಸ್ತುಗಳ ಅಪಾಯದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಕಂಠೀರವ ಸ್ಟೇಡಿಯಂನಿಂದ ಎಂಜಿ ರಸ್ತೆವರೆಗೂ ಜಾಗೃತಿ ಮೆರವಣಿಗೆ ಸಾಗಿದೆ.

ಬೆಂಗಳೂರು ಪೊಲೀಸರು ಇಂದು ಮಾದಕ ವಸ್ತುಗಳನ್ನ ನಾಶಪಡಿಸಿದ್ದಾರೆ. ಕಳೆದ ಒಂದು ವರ್ಷದಿಂದ ಜಪ್ತಿ ಮಾಡಿದ್ದ ಮಾದಕ ವಸ್ತುಗಳನ್ನ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪ್ರದರ್ಶನಕ್ಕೆ ಇಟ್ಟು, ಬಳಿಕ ಸುಮಾರು 50 ಕೋಟಿ ರೂ. ಮೌಲ್ಯದ 21 ಟನ್ ಮಾದಕ ವಸ್ತುಗಳನ್ನ ನಾಶಪಡಿಸಸಿದ್ದಾರೆ.

ಈ ಬಗ್ಗೆ ಮಾತನಾಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ಬೆಂಗಳೂರಿನಲ್ಲಿ ಡ್ರಗ್ಸ್​ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಕಳೆದ ವರ್ಷ 4 ಸಾವಿರ ಡ್ರಗ್ಸ್​ ಪ್ರಕರಣಗಳು ದಾಖಲಾಗಿದ್ದು, ಈ ವರ್ಷ ಅಪಾರ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಈವರೆಗೆ 55 ಕೋಟಿ ಮೌಲ್ಯದ ಮಾದಕವಸ್ತು ಜಪ್ತಿ ಮಾಡಲಾಗಿದೆ. ಜಪ್ತಿಯಾದ 4,400 ಕೆಜಿ ಮಾದಕ ವಸ್ತು ನಾಶಪಡಿಸಲಾಗಿದೆ

ಇದನ್ನೂ ಓದಿ
Image
Ben Stokes: ಸಿಕ್ಸರ್​ಗಳ ಸರದಾರ: ಟೆಸ್ಟ್ ಕ್ರಿಕೆಟ್​ನಲ್ಲಿ ನೂತನ ದಾಖಲೆ ಬರೆದ ಬೆನ್ ಸ್ಟೋಕ್ಸ್
Image
ಅಲ್ಲು ಅರ್ಜುನ್​ಗೆ ಬಾಡಿ ಶೇಮಿಂಗ್; ‘ವಡಾಪಾವ್ ಲುಕ್​’ ಎಂದು ಟೀಕಿಸಿದ ಫ್ಯಾನ್ಸ್​
Image
Mann Ki Baat: ಮನ್​ ಕಿ ಬಾತ್​ನಲ್ಲಿ 1975ರ ತುರ್ತು ಪರಿಸ್ಥಿತಿ ನೆನಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ
Image
Viral Video: ವಿಮಾನದಲ್ಲಿ ಎಸಿ ಸ್ಥಗಿತಗೊಂಡು ಪ್ರಯಾಕರು ಸುಸ್ತೋ ಸುಸ್ತು! ವಿಮಾನ ಬಹಿಷ್ಕಾರದ ಎಚ್ಚರಿಕೆ ನೀಡಿದ ಪ್ರಯಾಣಿಕರು

ಇದನ್ನೂ ಓದಿ: ಮಂಡ್ಯದಲ್ಲಿ ಆರು ವರ್ಷದ ಬಾಲಕನಿಂದ ಬೆಳಕಿಗೆ ಬಂತು ಕಳ್ಳತನ ಪ್ರಕರಣ! ಸೆರೆ ಹಿಡಿದ ವಿಡಿಯೋದಿಂದ ದಲ್ಲಾಳಿಗಳ ಬಣ್ಣ ಬಯಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ದಾಬಸ್​ಪೇಟೆಯ ರಾಮ್ಕಿ ಕಂಪನಿಯಲ್ಲಿ ಡ್ರಗ್ಸ್​​ ನಾಶ ಮಾಡಿದ್ದಾರೆ. ಕೇಂದ್ರ ವಲಯದ ಐಜಿಪಿ ಎಂ.ಚಂದ್ರಶೇಖರ್ ನೇತೃತ್ವದಲ್ಲಿ 1 ಟನ್ 185 ಕೆಜಿ ಮಾದಕ ವಸ್ತುಗಳನ್ನ ನಾಶ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ ಜಿಲ್ಲೆಯಲ್ಲಿ ಡ್ರಗ್ಸ್ ಜಪ್ತಿ ಮಾಡಲಾಗಿತ್ತು.

ಬೀದರ್​ನಲ್ಲೂ ಜಾಗೃತಿ ಮೆರವಣಿಗೆ ಮಾಡಿದ್ದಾರೆ. ಅಬಕಾರಿ ಇಲಾಖೆ ಕಚೇರಿಯಿಂದ ಮೆರವಣಿಗೆ ಆರಂಭಿಸಿ ಜಿಲ್ಲಾಧಿಕಾರಿ ಕಚೇರಿ, ಅಂಬೇಡ್ಕರ್ ವೃತ್ತ ತಲುಪಿ ಅಲ್ಲಿಂದ ಕನ್ನಡಾಂಬೆ ವೃತ್ತದವರೆಗೆ ಸಾಗಿದೆ. ಮೆರವಣಿಗೆಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳು ಭಾಗಿಯಾಗಿದ್ದರು.

Published On - 12:11 pm, Sun, 26 June 22

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ