AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಗಂಧ ದ್ರವ್ಯ ಕಾರ್ಖಾನೆಯಲ್ಲಿ ಸ್ಫೋಟ ಪ್ರಕರಣ; ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಸುಗಂಧದ್ರವ್ಯ ಕಾರ್ಖಾನೆ(perfume factory)ಯಲ್ಲಿ ಭಾನುವಾರ ರಾಸಾಯನಿಕ ಸೋರಿಕೆಯಿಂದ ಸ್ಫೋಟ ಉಂಟಾಗಿತ್ತು. ಈ ವೇಳೆ ಅಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕಾರ್ಮಿಕರು ಮೃತಪಟ್ಟಿದ್ದರು. ಈ ಹಿನ್ನಲೆ ವಿಧಾನಸಭೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್(G Parameshwara) ಮೃತ ಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಸುಗಂಧ ದ್ರವ್ಯ ಕಾರ್ಖಾನೆಯಲ್ಲಿ ಸ್ಫೋಟ ಪ್ರಕರಣ; ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ
ಸುಗಂಧ ದ್ರವ್ಯ ಕಾರ್ಖಾನೆಯಲ್ಲಿ ಸ್ಪೋಟ; ಪರಿಹಾರ ಘೋಷಿಸಿದ ಸಚಿವ ಪರಮೇಶ್ವರ್​
ಕಿರಣ್​ ಹನಿಯಡ್ಕ
| Updated By: ಕಿರಣ್ ಹನುಮಂತ್​ ಮಾದಾರ್|

Updated on:Feb 20, 2024 | 7:39 PM

Share

ಬೆಂಗಳೂರು, ಫೆ.20: ಸುಗಂಧದ್ರವ್ಯ ಫ್ಯಾಕ್ಟರಿ(perfume factory) ಯಲ್ಲಿ ಸ್ಫೋಟದಿಂದ ಮೂವರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ 1 ಲಕ್ಷ ರೂಪಾಯಿ ಪರಿಹಾರ ನೀಡುತ್ತೇವೆ ಎಂದು ವಿಧಾನಸಭೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್(G Parameshwara)ಘೋಷಿಸಿದ್ದಾರೆ. ಭಾನುವಾರ ಯಶವಂತಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ದುರಂತ ಸಂಭವಿಸಿತ್ತು. ಸುಗಂಧ ದ್ರವ್ಯ ತಯಾರಿಕೆಯಲ್ಲಿ ಬಳಸಲಾಗುತ್ತಿದ್ದ ರಾಸಾಯನಿಕಗಳನ್ನು ಡಬ್ಬಗಳಲ್ಲಿ ತುಂಬಿಡಲಾಗಿತ್ತು. ಇದೇ ಡಬ್ಬ ಸೋರಿಕೆಯಾಗಿ ಘಟನೆ ಸಂಭವಿಸಿತ್ತು.

ಶಾರ್ಟ್ ಸರ್ಕ್ಯೂಟ್​ನಿಂದ ಹೊತ್ತಿ ಉರಿದ ಮನೆ

ಮಂಡ್ಯ: ಇತ್ತೀಚೆಗೆ ಬೆಂಕಿ ಅವಘಡಗಳು ಸಂಭವಿಸಿ ಅನೇಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಅದರಂತೆ ಇದೀಗ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಂಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್​ ಸರ್ಕ್ಯೂಟ್​ನಿಂದ ಲಿಂಗಣ್ಣ ಎಂಬುವರಿಗೆ ಸೇರಿದ ಮನೆ ಹೊತ್ತಿ ಉರಿದೆ. ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನು ಘಟನೆ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಮನೆಯಲ್ಲಿದ್ದ ದಿನಸಿ, ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ವೇಣೂರಿನಲ್ಲಿ ಪಟಾಕಿ ಸ್ಫೋಟ ಪ್ರಕರಣ: ಈ ಗೋಡಾನ್​ನಲ್ಲಿ ತಯಾರಾಗುತ್ತಿತ್ತಾ ಗ್ರೆನೇಡ್?

ವಿದ್ಯುತ್​ ತಂತಿ ತಗುಲಿ ಎರಡು ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ

ಬೆಳಗಾವಿ: ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೆಡಕಿಹಾಳದಲ್ಲಿ ವಿದ್ಯುತ್​ ತಂತಿ ತಗುಲಿ ಎರಡು ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ತತ್ಯಾಸಾಹೇಬ್ ಕೊಲ್ಲಾಪುರೆ ಎಂಬುವವರಿಗೆ ಸೇರಿದ ಕಬ್ಬಿನ ಬೆಳೆ ಇದಾಗಿದ್ದು, ಗಾಳಿ ಬೀಸಿ 2 ವಿದ್ಯುತ್ ತಂತಿಗಳು ಟಚ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಎರಡು ಎಕರೆ ಕಬ್ಬಿನ ಬೆಳೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ಘಟನೆ ನಿಪ್ಪಾಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:34 pm, Tue, 20 February 24

‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ