ಬೆಂಗಳೂರು, ಫೆ.20: ಸುಗಂಧದ್ರವ್ಯ ಫ್ಯಾಕ್ಟರಿ(perfume factory) ಯಲ್ಲಿ ಸ್ಫೋಟದಿಂದ ಮೂವರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ 1 ಲಕ್ಷ ರೂಪಾಯಿ ಪರಿಹಾರ ನೀಡುತ್ತೇವೆ ಎಂದು ವಿಧಾನಸಭೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್(G Parameshwara)ಘೋಷಿಸಿದ್ದಾರೆ. ಭಾನುವಾರ ಯಶವಂತಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ದುರಂತ ಸಂಭವಿಸಿತ್ತು. ಸುಗಂಧ ದ್ರವ್ಯ ತಯಾರಿಕೆಯಲ್ಲಿ ಬಳಸಲಾಗುತ್ತಿದ್ದ ರಾಸಾಯನಿಕಗಳನ್ನು ಡಬ್ಬಗಳಲ್ಲಿ ತುಂಬಿಡಲಾಗಿತ್ತು. ಇದೇ ಡಬ್ಬ ಸೋರಿಕೆಯಾಗಿ ಘಟನೆ ಸಂಭವಿಸಿತ್ತು.
ಮಂಡ್ಯ: ಇತ್ತೀಚೆಗೆ ಬೆಂಕಿ ಅವಘಡಗಳು ಸಂಭವಿಸಿ ಅನೇಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಅದರಂತೆ ಇದೀಗ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಂಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಲಿಂಗಣ್ಣ ಎಂಬುವರಿಗೆ ಸೇರಿದ ಮನೆ ಹೊತ್ತಿ ಉರಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನು ಘಟನೆ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಮನೆಯಲ್ಲಿದ್ದ ದಿನಸಿ, ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ವೇಣೂರಿನಲ್ಲಿ ಪಟಾಕಿ ಸ್ಫೋಟ ಪ್ರಕರಣ: ಈ ಗೋಡಾನ್ನಲ್ಲಿ ತಯಾರಾಗುತ್ತಿತ್ತಾ ಗ್ರೆನೇಡ್?
ಬೆಳಗಾವಿ: ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೆಡಕಿಹಾಳದಲ್ಲಿ ವಿದ್ಯುತ್ ತಂತಿ ತಗುಲಿ ಎರಡು ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ತತ್ಯಾಸಾಹೇಬ್ ಕೊಲ್ಲಾಪುರೆ ಎಂಬುವವರಿಗೆ ಸೇರಿದ ಕಬ್ಬಿನ ಬೆಳೆ ಇದಾಗಿದ್ದು, ಗಾಳಿ ಬೀಸಿ 2 ವಿದ್ಯುತ್ ತಂತಿಗಳು ಟಚ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಎರಡು ಎಕರೆ ಕಬ್ಬಿನ ಬೆಳೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ಘಟನೆ ನಿಪ್ಪಾಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:34 pm, Tue, 20 February 24