ಬೆಂಗಳೂರಿನ ಕಲಾಸಿಪಾಳ್ಯ ಬಸ್​ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ, ಸ್ಥಳಕ್ಕೆ ಶ್ವಾನದಳ, ಬಾಂಬ್​ ನಿಷ್ಕ್ರಿಯ ದಳ ದೌಡು

ಬೆಂಗಳೂರಿನ ಕಲಾಸಿಪಾಳ್ಯ ಬಿಎಂಟಿಸಿ ಬಸ್​ ನಿಲ್ದಾಣದಲ್ಲಿ ಸ್ಫೋಟಕ ಪತ್ತೆಯಾಗಿದೆ. ಕಲಾಸಿಪಾಳ್ಯ ಬಸ್ ನಿಲ್ದಾಣದ ಶೌಚಾಲಯದ ಹೊರಭಾಗದಲ್ಲಿ ಸ್ಫೋಟಕ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು, ಶ್ವಾನದಳ, ಬಾಂಬ್​ ನಿಷ್ಕ್ರಿಯ ದಳ ದೌಡಾಯಿಸಿ ಪರಿಶೀಲನೆ ನಡೆಸಿದೆ. ಬಸ್​ ನಿಲ್ದಾಣದ ಮೂಲೆ ಮೂಲೆಯಲ್ಲೂ ಪೊಲೀಸರು ತಪಾಸಣೆ ನಡೆಸಿದ್ದಾರೆ. ಅಲ್ಲದೇ ಸ್ಥಳದಲ್ಲಿ ಸ್ಫೋಟಕವನ್ನು ಯಾರು ತಂದಿಟ್ಟರು ಎನ್ನುವುದನ್ನು ಪೊಲೀಸತು ಶೋಧ ಕಾರ್ಯಚರಣೆ ನಡೆಸಿದ್ದಾರೆ.

ಬೆಂಗಳೂರಿನ ಕಲಾಸಿಪಾಳ್ಯ ಬಸ್​ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ, ಸ್ಥಳಕ್ಕೆ ಶ್ವಾನದಳ, ಬಾಂಬ್​ ನಿಷ್ಕ್ರಿಯ ದಳ ದೌಡು
Kalasipalya Private Bus Stand
Edited By:

Updated on: Jul 23, 2025 | 5:17 PM

ಬೆಂಗಳೂರು, (ಜುಲೈ 23): ಬೆಂಗಳೂರಿನ (Bengaluru) ಕಲಾಸಿಪಾಳ್ಯ ಬಿಎಂಟಿಸಿ ಬಸ್​ ನಿಲ್ದಾಣದಲ್ಲಿ (kalasipalya private bus stand )ಸ್ಫೋಟಕ ಪತ್ತೆಯಾಗಿದೆ. ಇಂದು(ಜುಲೈ23) ಮಧ್ಯಾಹ್ನ 2 ಗಂಟೆ ಸುಮಾರಿಗೆ ಕಲಾಸಿಪಾಳ್ಯ  ಬಸ್ ನಿಲ್ದಾಣದ ಶೌಚಾಲಯದ ಸಮೀಪ ಸ್ಫೋಟಕ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು, ಶ್ವಾನದಳ, ಬಾಂಬ್​ ನಿಷ್ಕ್ರಿಯ ದಳ ದೌಡಾಯಿಸಿ ಪರಿಶೀಲನೆ ನಡೆಸಿದೆ. ಒಂದು ಬ್ಯಾಗ್​ ನಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಇನ್ನು ಸ್ಥಳಕ್ಕೆ ಡಿಸಿಪಿ ಎಸ್.ಗಿರೀಶ್​ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಸದ್ಯ ಬಸ್​ ನಿಲ್ದಾಣದಲ್ಲಿ ಪತ್ತೆಯಾದ ಸ್ಫೋಟಕವನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ಚುರುಕುಗೊಳಿಸಿದ್ದಾರೆ. ಜಿಲೆಟಿನ್ ಕಡ್ಡಿ ಜೊತೆಗೆ ಕೆಲವು ಡಿಟೋನೆಟರ್​ಗಳು​ ಕೂಡ ಪತ್ತೆಯಾಗಿದ್ದು, ಈ ಸಂಬಂಧ ಸಂಬಂಧ ಕಲಾಸಿಪಾಳ್ಯ ಪೊಲೀಸರು ಎಫ್​​ಐಆರ್ ದಾಖಲಿಸಿಕೊಳ್ಳುತ್ತಿದ್ದಾರೆ.

ಇನ್ನು ಸಿಸಿಬಿ ಡಿಸಿಪಿ ರಾಜ್ ಹಿಮಾಮ್ ಖಾಸಿಂ ಅವರು ಸಹ ಸ್ಥಳ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಮತ್ತೊಂದೆಡೆ ಪೊಲೀಸರು, ಬಿಎಂಟಿಸಿ ಸೆಕ್ಯುರಿಟಿಗಳಿಂದ ಮಾಹಿತಿ ಪಡೆಯುತ್ತಿದ್ದಾರೆ. ಅಲ್ಲದೇ ಬಸ್ ನಿಲ್ದಾಣಕ್ಕೆ ಯಾರು ಈ ವಸ್ತುಗಳನ್ನು ತಂದಿಟ್ಟರು ಎನ್ನುವುದನ್ನು ಪತ್ತೆ ಮಾಡಲು ಸುತ್ತಮುತ್ತಲಿನ ಸಿಸಿಟಿವಿಗಳ ಪರಿಶೀಲನೆ ನಡೆಸುವ ಸಾಧ್ಯತೆಗಳಿವೆ.

ಈ ಕುರಿತು ಪಶ್ಚಿಮ ವಿಭಾಗ ಡಿಸಿಪಿ ಗಿರೀಶ್ ಮಾತನಾಡಿ, 6 ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ವ್ಯಕ್ತಿಯೊಬ್ಬ ಈ ಬ್ಯಾಗ್‌ನ ಜೊತೆ ಕುಳಿತಿರುವುದು ಕಂಡುಬಂದಿದ್ದು, ಬಂಡೆ ಹೊಡೆಯುವ ಕೆಲಸಗಾರರು ಬಿಟ್ಟುಹೋಗಿರುವ ಶಂಕೆ ಉಂಟಾಗಿದೆ. ಉದ್ದೇಶಪೂರ್ವಕವಾಗಿ ಬಿಟ್ಟು ಹೋಗಿದ್ದಾನಾ ಅಥವಾ ಮರೆತು ಹೋಗಿದ್ದಾನಾ ಎಂದು ಪರಿಶೀಲಿಸಲಾಗ್ತಿದೆ. ಜೆಲೆಟಿನ್ ಕಡ್ಡಿ ಹೊರತುಪಡಿಸಿ ಬೇರೆ ಸ್ಫೋಟಕ ವಸ್ತುಗಳು ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:35 pm, Wed, 23 July 25