AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಆವಲಹಳ್ಳಿ ಬಳಿ ಭಾರೀ ಪ್ರಮಾಣದ ಸ್ಫೋಟಕಗಳು ಪತ್ತೆ; 225 ಜಿಲೆಟಿನ್ ಕಡ್ಡಿ, 50 ಡಿಟೋನೇಟರ್ ವಶ

ಬೆಂಗಳೂರಿನ ಅವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡ ಅಗ್ರಹಾರದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 225 ಜಿಲೆಟಿನ್ ಕಡ್ಡಿ ಹಾಗೂ 50 ಡಿಟೋನೇಟರ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದರೊಂದಿಗೆ, ಬೆಂಗಳೂರಿನಲ್ಲಿ ಮತ್ತೆ ಸ್ಫೋಟಕಗಳ ವಿಚಾರ ಸದ್ದು ಮಾಡಿದ್ದು, ಯಾವ ಕಾರಣಕ್ಕೆ ಸ್ಫೋಟಕ ಸಂಗ್ರಹಿಸಿಡಲಾಗಿತ್ತು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

ಬೆಂಗಳೂರು: ಆವಲಹಳ್ಳಿ ಬಳಿ ಭಾರೀ ಪ್ರಮಾಣದ ಸ್ಫೋಟಕಗಳು ಪತ್ತೆ; 225 ಜಿಲೆಟಿನ್ ಕಡ್ಡಿ, 50 ಡಿಟೋನೇಟರ್ ವಶ
ಆವಲಹಳ್ಳಿ ಬಳಿ 225 ಜಿಲೆಟಿನ್ ಕಡ್ಡಿ ಹಾಗೂ 50 ಡಿಟೋನೇಟರ್ ವಶImage Credit source: tv9
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Jun 09, 2026 | 1:42 PM

Share

ಬೆಂಗಳೂರು, ಜೂನ್ 9: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಮತ್ತೊಮ್ಮೆ ಸ್ಫೋಟಕ ವಸ್ತುಗಳು ಪತ್ತೆಯಾಗಿರುವುದು ಸಾರ್ವಜನಿಕರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಅವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡ ಅಗ್ರಹಾರ ಬಳಿ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಭಾರೀ ಪ್ರಮಾಣದ ಜಿಲೆಟಿನ್ ಕಡ್ಡಿಗಳು (Gelatin Sticks) ಹಾಗೂ ಡಿಟೋನೇಟರ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

ಮುಖ್ಯಾಂಶಗಳು

  • ಆವಲಹಳ್ಳಿ ವ್ಯಾಪ್ತಿಯ ಕಾಡ ಅಗ್ರಹಾರದಲ್ಲಿ ಸ್ಫೋಟಕಗಳು ಪತ್ತೆ.
  • 225 ಜಿಲೆಟಿನ್ ಕಡ್ಡಿ, 50 ಡಿಟೋನೇಟರ್ ವಶ.
  • ಪರವಾನಗಿ ಇಲ್ಲದೆ ಭಾರಿ ಪ್ರಮಾಣದಲ್ಲಿ ಸ್ಫೋಟಕ ಸಂಗ್ರಹಿಸಿದ್ದರಿಂದ ಅನುಮಾನ.

ಪರವಾನಗಿ ಇಲ್ಲದೆ ಭಾರಿ ಪ್ರಮಾಣದಲ್ಲಿ ಸ್ಫೋಟಕ ಸಂಗ್ರಹ

ಆವಲಹಳ್ಳಿ ಪೊಲೀಸರಿಗೆ ಲಭ್ಯವಾದ ಖಚಿತ ಮಾಹಿತಿ ಮೇರೆಗೆ ಈ ದಿಢೀರ್ ದಾಳಿ ನಡೆಸಲಾಗಿದೆ. ಕಾಡ ಅಗ್ರಹಾರದ ನಿವಾಸಿ ವೆಂಕಟರಾಮ ರೆಡ್ಡಿ ಎಂಬಾತನ ಬಳಿ ಈ ಸ್ಫೋಟಕಗಳು ಅಕ್ರಮವಾಗಿ ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ. ಒಟ್ಟು 50 ಡಿಟೋನೇಟರ್ ಕಡ್ಡಿಗಳು ಹಾಗೂ 225 ಜಿಲೆಟಿನ್ ಕಡ್ಡಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಾಥಮಿಕ ತನಿಖೆ ಪ್ರಕಾರ, ಜಮೀನಿನಲ್ಲಿ ಬಂಡೆಗಳನ್ನು ಒಡೆಯಲು ಈ ಸ್ಫೋಟಕಗಳನ್ನು ತರಲಾಗಿತ್ತು ಎಂದು ಹೇಳಲಾಗುತ್ತಿದೆ. ಆದರೆ ಪರವಾನಗಿ ಇಲ್ಲದೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಸ್ಫೋಟಕಗಳನ್ನು ದಾಸ್ತಾನು ಮಾಡಿದ್ದೇಕೆ ಎಂಬ ಬಗ್ಗೆ ಅವಲಹಳ್ಳಿ ಠಾಣೆ ಪೊಲೀಸರು ತೀವ್ರ ತನಿಖೆ ಮುಂದುವರಿಸಿದ್ದಾರೆ.

ಕೇವಲ ಬಂಡೆ ಹೊಡೆಯಲು ಜಿಲೆಟಿನ್ ಕಡ್ಡಿಗಳನ್ನು ಸಂಗ್ರಹಿಸಲಾಗಿತ್ತೇ ಅಥವಾ ಬೇರೆ ಕಾರಣ ಇದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸದ್ಯ ಸ್ಫೋಟಕಗಳ ಕಾಯಿದೆ, 1884 ರ ಅಡಿ (Explosives Act, 1884) ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಧಾನಿ ಮೋದಿ ಭೇಟಿ ವೇಳೆ ರಸ್ತೆಯಲ್ಲಿ ಪತ್ತೆಯಾಗಿದ್ದ ಜಿಲೆಟಿನ್

ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿಯ ಸಂದರ್ಭದಲ್ಲಿ ಆರ್ಟ್ ಆಫ್ ಲಿವಿಂಗ್ ಬಳಿಯ ರಸ್ತೆಯಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು ಭದ್ರತಾ ದೃಷ್ಟಿಯಿಂದ ಭಾರಿ ಕೋಲಾಹಲ ಸೃಷ್ಟಿಸಿತ್ತು.

ಇದನ್ನೂ ಓದಿ: ಮೋದಿ ಬೆಂಗಳೂರು ಭೇಟಿ ವೇಳೆ ಜಿಲೆಟಿನ್ ಪತ್ತೆ ಪ್ರಕರಣದ ಅಸಲಿ ಕಾರಣ ಕೊನೆಗೂ ಬಯಲು!

ಆ ಪ್ರಕರಣದ ತನಿಖೆ ಮುಗಿಯುವ ಮುನ್ನವೇ ಈಗ ಮತ್ತೆ ಅದೇ ಮಾದರಿಯ ಸ್ಫೋಟಕಗಳು ಸಿಕ್ಕಿರುವುದು ಆತಂಕಕ್ಕೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:32 pm, Tue, 9 June 26

Follow Us
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಫುಟ್​ಪಾತ್ ತೆರವು ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ
ಫುಟ್​ಪಾತ್ ತೆರವು ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ
ಚೆನ್ನಮ್ಮ ಸಮಾಧಿ ಬಳಿ ವಿಷ್ಣು ಸಹಸ್ರನಾಮ ಪಠಣ ವೇಳೆ ಗರುಡ ಪ್ರತ್ಯಕ್ಷ
ಚೆನ್ನಮ್ಮ ಸಮಾಧಿ ಬಳಿ ವಿಷ್ಣು ಸಹಸ್ರನಾಮ ಪಠಣ ವೇಳೆ ಗರುಡ ಪ್ರತ್ಯಕ್ಷ
ರಾಜಕಾಲುವೆ ಒತ್ತುವರಿದಾರರಿಗೂ ಶಾಕ್​​ ಕೊಡಲು ಮುಂದಾದ ಜಿಬಿಎ
ರಾಜಕಾಲುವೆ ಒತ್ತುವರಿದಾರರಿಗೂ ಶಾಕ್​​ ಕೊಡಲು ಮುಂದಾದ ಜಿಬಿಎ
5 ವರ್ಷ ಲವರ್​ನನ್ನು ಸಾಕಿ ಮದುವೆಯಾದಳು! ಆದ್ರೆ ಆತ ಬೇರೊಬ್ಬಳೊಂದಿಗೆ ಪರಾರಿ
5 ವರ್ಷ ಲವರ್​ನನ್ನು ಸಾಕಿ ಮದುವೆಯಾದಳು! ಆದ್ರೆ ಆತ ಬೇರೊಬ್ಬಳೊಂದಿಗೆ ಪರಾರಿ
ಕಲುಷಿತ ಕಾವೇರಿ ನೀರಿನ ಪೂರೈಕೆಗೆ ಕತ್ರಿಗುಪ್ಪೆ ನಿವಾಸಿಗಳ ಆಕ್ರೋಶ
ಕಲುಷಿತ ಕಾವೇರಿ ನೀರಿನ ಪೂರೈಕೆಗೆ ಕತ್ರಿಗುಪ್ಪೆ ನಿವಾಸಿಗಳ ಆಕ್ರೋಶ