9 ಮತ್ತು 10ನೇ ತರಗತಿ ಮಕ್ಕಳಿಗೂ ಮೊಟ್ಟೆ ವಿತರಣೆ ವಿಸ್ತರಣೆ; ಸಿಎಂ ಗೆ ಬಂತು ವಿದ್ಯಾರ್ಥಿನಿಯಿಂದ ಪತ್ರ

ಸರ್ಕಾರದ ಯೋಜನೆ ಬಗ್ಗೆ ವಿದ್ಯಾರ್ಥಿನಿಯಿಂದ ಬಂದ ಪತ್ರಕ್ಕೆ ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಿದ್ದು, ‘ನಾಡಿನ ಪ್ರತಿ ವಿದ್ಯಾರ್ಥಿಗೂ ಪೌಷ್ಟಿಕ ಆಹಾರ ದೊರಕಬೇಕು, ಯಾರೊಬ್ಬರೂ ಈ ಅವಕಾಶದಿಂದ ವಂಚಿತರಾಗಬಾರದು ಎಂಬ ಸದಾಶಯದೊಂದಿಗೆ ಈ ಮೊದಲು 1 ರಿಂದ 8ನೇ ತರಗತಿಯ ವರೆಗಿನ ಮಕ್ಕಳಿಗೆ ವಿತರಿಸಲಾಗುತ್ತಿದ್ದ ಮೊಟ್ಟೆಯನ್ನು ನಮ್ಮ ಸರ್ಕಾರವು 9 ಮತ್ತು 10ನೇ ತರಗತಿಗೂ ವಿಸ್ತರಿಸಿದೆ.

9 ಮತ್ತು 10ನೇ ತರಗತಿ ಮಕ್ಕಳಿಗೂ ಮೊಟ್ಟೆ ವಿತರಣೆ ವಿಸ್ತರಣೆ; ಸಿಎಂ ಗೆ ಬಂತು ವಿದ್ಯಾರ್ಥಿನಿಯಿಂದ ಪತ್ರ
ಸಿದ್ದರಾಮಯ್ಯ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Sep 08, 2023 | 8:29 PM

ಬೆಂಗಳೂರು, ಸೆ.08: ಸರ್ಕಾರ 2021 ರಲ್ಲಿ ಕಲ್ಯಾಣ ಕರ್ನಾಟಕ (Kalyana Karnataka) ಜಿಲ್ಲೆಗಳಲ್ಲಿ ಒಂದನೇ ತರಗತಿಯಿಂದ ಎಂಟನೇ ತರಗತಿಯವರೆಗೆ ಮೊಟ್ಟೆ (Egg)ವಿತರಣೆಯನ್ನು ಮಾಡುತ್ತಿತ್ತು. ಬಳಿಕ ಸರ್ಕಾರ ಒಂದು ಸಮೀಕ್ಷೆಯನ್ನು ಮಾಡಿದ ಮೇಲೆ ಶೇಕಡಾ 70 ರಷ್ಟು ಮಕ್ಕಳು ಮೊಟ್ಟೆ ಬೇಕು ಎಂದು ತಿಳಿಸಿದರು. ಇದಾದ ಮೇಲೆ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಾರದ ಎರಡು ದಿನ ಮೊಟ್ಟೆ ವಿತರಣೆ ಮಾಡಲು ಸೂಚಿಸಲಾಯಿತು. ಇದಾದ ಬಳಿಕ ಪೋಷಕರು ಒಂಭತ್ತು ಮತ್ತು ಹತ್ತನೇ ತರಗತಿ ವಿದ್ಯಾರ್ಥಿಗಳಿಗೂ ಮೊಟ್ಟೆ ನೀಡುವಂತೆ ಮನವಿ ಮಾಡಲಾಗಿತ್ತು. ಅದರಂತೆ ಸರ್ಕಾರ ಒಂದರಿಂದ ಹತ್ತನೇ ತರಗತಿಯವರೆಗೂ ಮೊಟ್ಟೆ ವಿತರಣೆ ವಿಸ್ತರಿಸಿತು. ಇದೀಗ ಸರ್ಕಾರದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ವಿದ್ಯಾರ್ಥಿನಿಯೋರ್ವಳು ಸಿಎಂ ಗೆ ಅಭಿನಂದನೆ ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದ ವಿದ್ಯಾರ್ಥಿನಿ

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಕುಂಕೂರು ಗ್ರಾಮದ ಸರ್ಕಾರಿ ಫ್ರೌಢಶಾಲೆಯಲ್ಲಿ 9ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ ಆಶಾ ನೆಹರು ಪಾಟೀಲ್​ ಅವರು ಸರ್ಕಾರದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು ‘ನೀವು ಜಾರಿಗೆ ತಂದಂತಹ ಅನೇಕ ಯೋಜನೆಗಳು ರಾಜ್ಯದ ಅನೇಕ ಕುಟುಂಬಗಳಿಗೆ ವರದಾನವಾಗುತ್ತಿದೆ. ವಿಶೇಷವಾಗಿ ಕ್ಷೀರಭಾಗ್ಯ, ಶೋಭಾಗ್ಯ ಜೊತೆಗೆ ಮಕ್ಕಳಲ್ಲಿ ಪೌಷ್ಠಿಕಾಂಶ ಹೆಚ್ಚಿಸುವ ದೃಷ್ಟಿಯಿಂದ ಒಂದರಿಂದ ಹತ್ತನೆ ತರಗತಿಯವರೆಗೆ ಮೊಟ್ಟೆ ವಿತರಣೆ ಅತ್ಯುತ್ತಮ ಯೋಜನೆಯಾಗಿದೆ ಎಂದು ಸಿದ್ದರಾಮಯ್ಯನವರ ಯೋಜನೆಯನ್ನು ಶ್ಲಾಘೀಸಿದ್ದಾರೆ.

ಇದನ್ನೂ ಓದಿ:ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳೋದು ನಮಗೆ ಸಂಬಂಧಿಸದ ವಿಷಯ, ಜನ ನಮ್ಮ ಪರವಾಗಿದ್ದಾರೆ: ಸಿದ್ದರಾಮಯ್ಯ

ಇದಕ್ಕೆ ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಿದ್ದು, ‘ನಾಡಿನ ಪ್ರತಿ ವಿದ್ಯಾರ್ಥಿಗೂ ಪೌಷ್ಟಿಕ ಆಹಾರ ದೊರಕಬೇಕು, ಯಾರೊಬ್ಬರೂ ಈ ಅವಕಾಶದಿಂದ ವಂಚಿತರಾಗಬಾರದು ಎಂಬ ಸದಾಶಯದೊಂದಿಗೆ ಈ ಮೊದಲು 1 ರಿಂದ 8ನೇ ತರಗತಿಯ ವರೆಗಿನ ಮಕ್ಕಳಿಗೆ ವಿತರಿಸಲಾಗುತ್ತಿದ್ದ ಮೊಟ್ಟೆಯನ್ನು ನಮ್ಮ ಸರ್ಕಾರವು 9 ಮತ್ತು 10ನೇ ತರಗತಿಗೂ ವಿಸ್ತರಿಸಿದೆ. ನಮ್ಮ ಈ ವಿದ್ಯಾರ್ಥಿಸ್ನೇಹಿ ನಿರ್ಧಾರದ ಬಗ್ಗೆ ಆಶಾ ನೆಹರು ಪಾಟೀಲ್ ಎಂಬ ಪುಟ್ಟ ಬಾಲಕಿಯೊಬ್ಬಳು ನನಗೆ ಪತ್ರ ಬರೆದು ತನ್ನ ಸಂತಸ ಹಂಚಿಕೊಂಡಿದ್ದಾಳೆ.

ಅಷ್ಟೇ ಮಾತ್ರವಲ್ಲ, ಇಂತಹ ಕಾರ್ಯಕ್ರಮಗಳನ್ನು ನೀಡುತ್ತಿರುವ ತಾವು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಅಕ್ಕರೆಯಿಂದ ಸಲಹೆ ನೀಡಿದ್ದಾಳೆ. ಪುಟ್ಟ ಬಾಲಕಿಯ ಪತ್ರವು ಈ ಯೋಜನೆಯನ್ನು ರೂಪಿಸಿ ಜಾರಿಗೊಳಿಸಿದ ನನ್ನ ಉದ್ದೇಶವನ್ನು ಸಾರ್ಥಕವಾಗಿಸಿತು. ಇಂಥ ಮುಗ್ಧ ಮಕ್ಕಳ ಭವಿಷ್ಯವನ್ನು ಉಜ್ವಲವಾಗಿಸುವುದು ನಮ್ಮ ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಶಾಂತಿ, ಸೌಹಾರ್ದತೆಯ ಸಮೃದ್ಧ ಕರ್ನಾಟಕ ನಿರ್ಮಾಣದ ನನ್ನ ಸಂಕಲ್ಪಕ್ಕೆ ಈ ದಿನ ಇನ್ನಷ್ಟು ಬಲ ಬಂದಿದೆ ಎಂದು ಫೇಸ್​ಬುಕ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು