Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರೀಯ ಷೇರು ವಿನಿಮಯ ಬೆಂಗಳೂರು ಕಚೇರಿಗೆ ಬಾಂಬ್​ ಬೆದರಿಕೆ ಕರೆ

ಬೆಂಗಳೂರಿನಲ್ಲಿ ಮೇಲಿಂದ ಮೇಲೆ ಹುಸಿ ಬಾಂಬ್​ ಬೆದರಿಕೆ ಕರೆಗಳು ಬರುತ್ತಿವೆ. ನಿನ್ನೆ (ಜ.05) ರಂದು ವಿಶ್ವೇಶ್ವರಯ್ಯ ಮುಸ್ಯಿಯಂಗೆ ಬಾಂಬ್ ಬೆದರಿಕೆ ಮೇಲ್​​ ಬಂದಿತ್ತು. ಇದಾದ ಬೆನ್ನಲ್ಲೇ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ.

ರಾಷ್ಟ್ರೀಯ ಷೇರು ವಿನಿಮಯ ಬೆಂಗಳೂರು ಕಚೇರಿಗೆ ಬಾಂಬ್​ ಬೆದರಿಕೆ ಕರೆ
ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ
Follow us
Jagadisha B
| Updated By: ವಿವೇಕ ಬಿರಾದಾರ

Updated on:Jan 06, 2024 | 11:08 AM

ಬೆಂಗಳೂರು, ಜನವರಿ 06: ಬೆಂಗಳೂರಿನಲ್ಲಿ (Bengaluru) ಮೇಲಿಂದ ಮೇಲೆ ಹುಸಿ ಬಾಂಬ್​ ಬೆದರಿಕೆ ಕರೆಗಳು ಬರುತ್ತಿವೆ. ಶುಕ್ರವಾರ (ಜ.06) ವಿಶ್ವೇಶ್ವರಯ್ಯ ಮುಸ್ಯಿಯಂಗೆ ಬಾಂಬ್ ಬೆದರಿಕೆ ಮೇಲ್​​ ಬಂದಿತ್ತು. ಇದಾದ ಬೆನ್ನಲ್ಲೇ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ರಾಷ್ಟ್ರೀಯ ಷೇರು ವಿನಿಮಯ (National Stock Exchange of India) ಕೇಂದ್ರಕ್ಕೆ ಬಾಂಬ್ ಬೆದರಿಕೆ ಕರೆ (Bomb threat) ಬಂದಿದೆ. ಆರೋಪಿಗಳು ಜನವರಿ 3ರಂದು ಮುಂಬೈನ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ ಕಚೇರಿಗೆ ಕರೆ ಮಾಡಿ, ಬೆಂಗಳೂರಿನ ಕಚೇರಿಯಲ್ಲಿ ಬಾಂಬ್​ ಇಡಲಾಗಿದೆ ಎಂದು ಹೇಳಿದ್ದಾರೆ.

ಕೂಡಲೇ ಮುಂಬೈನ ಎನ್​ಎಸ್​ಇ ಕಚೇರಿ ಅಧಿಕಾರಿಗಳು ಮಧ್ಯರಾತ್ರಿ ಒಂದು ಗಂಟೆಗೆ ಸುಮಾರಿಗೆ ವಿಧಾನಸೌಧ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದರು. ತಕ್ಷಣ ಪೊಲೀಸರು ಬಾಂಬ್ ನಿಷ್ಕ್ರಿಯ ದಳದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆ ವೇಳೆ ಯಾವುದೇ ಸ್ಪೋಟಕ‌ವಸ್ತು ಪತ್ತೆಯಾಗಿಲ್ಲ. ಸದ್ಯ ವಿಧಾನಸೌಧ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶ್ವೇಶ್ವರಯ್ಯ ಮುಸ್ಯಿಯಂಗೆ ಬಾಂಬ್ ಬೆದರಿಕೆ

ಶುಕ್ರವಾರ (ಜ.06) ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್​ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಮ್ಯೂಸಿಯಂನಲ್ಲಿ ಹಲವು ಸ್ಪೋಟಕಗಳನ್ನ ಬಚ್ಚಿಡಲಾಗಿದೆ, ಬೆಳಗ್ಗೆ ಎಲ್ಲವೂ ಸ್ಪೋಟಗೊಳ್ಳುತ್ತವೆ ಎಂದು‘Morgue999lol’ ಎಂಬ ಐಡಿ ಮೂಲಕ ಮೇಲ್ ಮಾಡಿ, ಜೊತೆಗೆ ಉಗ್ರ ಸಂಘಟೆನಯೊಂದರ (Terrorizers 111) ಹೆಸರನ್ನು ದುಷ್ಕರ್ಮಿಗಳು ಉಲ್ಲೇಖಿಸಿ ಬೆದರಿಕೆ ಹಾಕಿದ್ದರು.

ಇದನ್ನೂ ಓದಿ: ಬೆಂಗಳೂರಿನ ಶಾಲೆಗಳಿಗೆ ಬಾಂಬ್​ ಬೆದರಿಕೆ ಮೇಲ್​​: ತನಿಖೆಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ

ಮ್ಯೂಸಿಯಂ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಂದು ಪೊಲೀಸರು ಪರಿಶೀಲನೆ ನಡೆಸಿದ್ದರು. ಬಾಂಬ್​ ನಿಷ್ಕ್ರಿಯ ದಳ, ಶ್ವಾನ ದಳದಿಂದಲೂ ಪರಿಶೀಲನೆ ನಡೆಸಲಾಗಿತ್ತು. ಪರಿಶೀಲನೆ ಬಳಿಕ ಹುಸಿ ಬಾಂಬ್​ ಬೆದರಿಕೆ ಸಂದೇಶ ಎಂಬುದು ಪತ್ತೆಯಾಗಿತ್ತು. ಇದೀಗ ಕಬ್ಬನ್​ ಪಾರ್ಕ್​ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಲೆಗಳಿಗೆ ಬಾಂಬ್​ ಬೆದರಿಕೆ

ಕಳೆದ ವರ್ಷ ಡಿಸೆಂಬರ್​ನಲ್ಲಿ ಬೆಂಗಳೂರಿನ 60 ಖಾಸಗಿ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್​ ಬೆದರಿಕೆ ಬಂದಿತ್ತು. ಈ ಪ್ರಕರಣ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹಾಗೂ ಹೆಚ್ಚುವರಿ ಆಯುಕ್ತ (ಪಶ್ಚಿಮ) ಎನ್. ಸತೀಶ್ ಕುಮಾರ್​ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಹಲವು ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು, ಆರೋಪಿಗಳು ಬಳಸಲಾದ ಇ-ಮೇಲ್​ ಐಡಿ ನಕಲು ಎಂಬುದು ಪತ್ತೆಯಾಗಿತ್ತು. ಕೃತ್ಯ ಎಸಗಲೆಂದೆ ಆರೋಪಿಗಳು ನಕಲಿ ಐಡಿ ಸೃಷ್ಟಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:50 am, Sat, 6 January 24