ಬೆಂಗಳೂರು: ತಾಜ್ ವೆಸ್ಟ್ ಎಂಡ್ ​ಹೋಟೆಲ್​ಗೆ ಬಾಂಬ್ ಬೆದರಿಕೆ

ಇತ್ತೀಚಿಗೆ ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಮತ್ತು ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ ಇ-ಮೇಲ್​ ಬಂದಿದ್ದವು. ಇದರ ಬೆನ್ನಲ್ಲೇ ಇದೀಗ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ​ಹೋಟೆಲ್​ಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಪೊಲೀಸರು ಮತ್ತು ಬಾಂಬ್​ ಸ್ಕ್ವಾಡ್​ ಪರಿಶೀಲನೆ ನಡೆಸಿದರು.

ಬೆಂಗಳೂರು: ತಾಜ್ ವೆಸ್ಟ್ ಎಂಡ್ ​ಹೋಟೆಲ್​ಗೆ ಬಾಂಬ್ ಬೆದರಿಕೆ
ತಾಜ್ ವೆಸ್ಟ್ ಎಂಡ್ ಹೋಟೇಲ್
Follow us
| Updated By: ವಿವೇಕ ಬಿರಾದಾರ

Updated on:Sep 28, 2024 | 12:49 PM

ಬೆಂಗಳೂರು, ಸೆಪ್ಟೆಂಬರ್​ 28: ಬೆಂಗಳೂರಿನ (Bengaluru) ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ (Taj West End Hotel) ​ಹೋಟೆಲ್​ಗೆ ಬಾಂಬ್ ಬೆದರಿಕೆ (Fake bomb threat) ಇ-ಮೇಲ್ ಬಂದಿದೆ. ಬಾಂಬ್​ ಇಟ್ಟು ಸ್ಪೋಟಿಸುವುದಾಗಿ ಕಿಡಿಗೇಡಿಗಳು ಇ-ಮೇಲ್​ ಮಾಡಿದ್ದಾರೆ. ಕೂಡಲೆ ಹೋಟೆಲ್​ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು, ಬಾಂಬ್ ಸ್ಕ್ವಾಡ್​​ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹುಸಿ ಬಾಂಬ್​ ಬೆದರಿಕೆ ಎಂದು ದೃಢವಾಗಿದೆ. ಹೈಗ್ರೌಂಡ್ಸ್ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ತಾಜ್​ ವೆಸ್ಟ್​ ಎಂಡ್​​ ಹೊಟೇಲನಲ್ಲಿ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೋಟೇಲ್​ನಲ್ಲಿ ರಾಜಕಾರಣಿಗಳು, ಕ್ರಿಕೆಟರ್​ಗಳು ಆಗಾಗ ವಾಸ್ತವ್ಯ ಹೂಡುತ್ತಾರೆ.

ಸೈನಿಕ ಶಾಲೆಗೆ ಬಾಂಬ್ ಬೆದರಿಕೆ

ಕಳೆದ ವಾರ ಸೆಪ್ಟೆಂಬರ್​ 18 ರಂದು ಅಶೋಕ್ ನಗರದಲ್ಲಿನ ಸೈನಿಕ ಶಾಲೆಗೂ ಕೂಡ ಬಾಂಬ್ ಬೆದರಿಕೆ ಇ-ಮೇಲ್​ ಬಂದಿತ್ತು. ಶಾಲೆಯಲ್ಲಿ ಬಾಂಬ್​ ಇಟ್ಟು ಸ್ಪೋಟಿಸುವುದಾಗಿ ಸಂದೇಶ ರವಾನಿಸಲಾಗಿತ್ತು. ಈ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಆದರೆ, ಯಾವುದೇ ಬಾಂಬ್ ಪತ್ತೆಯಾಗಿರಲಿಲ್ಲ. ಇದೊಂದು ಹುಸಿ ಬಾಂಬ್ ಕರೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಬೆಂಗಳೂರು: ಖಾಸಗಿ ಕಂಪನಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್; ಸ್ಥಳಕ್ಕಾಗಮಿಸಿದ ಬಾಂಬ್​ ನಿಷ್ಕ್ರಿಯ ದಳ

ಇದೇನು ಮೊದಲಲ್ಲ. ಈ ಹಿಂದೆ ನಗರದ ಹಲವು ಶಾಲೆಗಳಿಗೆ ಬಾಂಬ್ ಇಟ್ಟಿರುವ ಬೆದರಿಕೆ ಇಮೇಲ್​ಗಳು ಬಂದಿರುವ ಪ್ರಕರಣ ಇವೆ. ಕೆಲವು ಬಾರಿ ಶಾಲೆಗಳು, ಹೋಟೆಲ್‌ಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆಗಳು ಬರುತ್ತಿದ್ದು, ಪೊಲೀಸರು ಹೆಚ್ಚು ಅಲರ್ಟ್ ಆಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:22 pm, Sat, 28 September 24

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್