ಬೆಂಗಳೂರು, ಸೆಪ್ಟೆಂಬರ್ 28: ಬೆಂಗಳೂರಿನ (Bengaluru) ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ (Taj West End Hotel) ಹೋಟೆಲ್ಗೆ ಬಾಂಬ್ ಬೆದರಿಕೆ (Fake bomb threat) ಇ-ಮೇಲ್ ಬಂದಿದೆ. ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಕಿಡಿಗೇಡಿಗಳು ಇ-ಮೇಲ್ ಮಾಡಿದ್ದಾರೆ. ಕೂಡಲೆ ಹೋಟೆಲ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು, ಬಾಂಬ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹುಸಿ ಬಾಂಬ್ ಬೆದರಿಕೆ ಎಂದು ದೃಢವಾಗಿದೆ. ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ತಾಜ್ ವೆಸ್ಟ್ ಎಂಡ್ ಹೊಟೇಲನಲ್ಲಿ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೋಟೇಲ್ನಲ್ಲಿ ರಾಜಕಾರಣಿಗಳು, ಕ್ರಿಕೆಟರ್ಗಳು ಆಗಾಗ ವಾಸ್ತವ್ಯ ಹೂಡುತ್ತಾರೆ.
ಕಳೆದ ವಾರ ಸೆಪ್ಟೆಂಬರ್ 18 ರಂದು ಅಶೋಕ್ ನಗರದಲ್ಲಿನ ಸೈನಿಕ ಶಾಲೆಗೂ ಕೂಡ ಬಾಂಬ್ ಬೆದರಿಕೆ ಇ-ಮೇಲ್ ಬಂದಿತ್ತು. ಶಾಲೆಯಲ್ಲಿ ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಸಂದೇಶ ರವಾನಿಸಲಾಗಿತ್ತು. ಈ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಆದರೆ, ಯಾವುದೇ ಬಾಂಬ್ ಪತ್ತೆಯಾಗಿರಲಿಲ್ಲ. ಇದೊಂದು ಹುಸಿ ಬಾಂಬ್ ಕರೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ: ಬೆಂಗಳೂರು: ಖಾಸಗಿ ಕಂಪನಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್; ಸ್ಥಳಕ್ಕಾಗಮಿಸಿದ ಬಾಂಬ್ ನಿಷ್ಕ್ರಿಯ ದಳ
ಇದೇನು ಮೊದಲಲ್ಲ. ಈ ಹಿಂದೆ ನಗರದ ಹಲವು ಶಾಲೆಗಳಿಗೆ ಬಾಂಬ್ ಇಟ್ಟಿರುವ ಬೆದರಿಕೆ ಇಮೇಲ್ಗಳು ಬಂದಿರುವ ಪ್ರಕರಣ ಇವೆ. ಕೆಲವು ಬಾರಿ ಶಾಲೆಗಳು, ಹೋಟೆಲ್‌ಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆಗಳು ಬರುತ್ತಿದ್ದು, ಪೊಲೀಸರು ಹೆಚ್ಚು ಅಲರ್ಟ್ ಆಗಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:22 pm, Sat, 28 September 24